Suralkar vikas kishore: ಸೂರಳ್ಕರ್ ವಿಕಾಸ್ ಕಿಶೋರ್ ವಾರ್ತಾ ಇಲಾಖೆ ಆಯುಕ್ತ
Team Udayavani, Mar 30, 2024, 11:55 PM IST
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರಕಾರ, ಈ ಹುದ್ದೆಗೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ವರ್ಗಾಯಿಸಿದೆ.
ಅಂಜಲಿ ನಿಂಬಾಳ್ಕರ್ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಅವರ ಪತಿ ಹೇಮಂತ್ ನಿಂಬಾಳ್ಕರ್ ಅವರನ್ನು ವಾರ್ತಾ ಇಲಾಖೆ ಆಯುಕ್ತರಾಗಿ ಮುಂದುವರಿಸಬಾರದು ಹಾಗೂ ಐಪಿಎಸ್ ಅಧಿಕಾರಿಯಾಗಿರುವ ಅವರನ್ನು ಕರ್ನಾಟಕದ ಹೊರಗಿನ ರಾಜ್ಯಗಳಿಗೆ ವರ್ಗಾಯಿಸಬೇಕು ಎಂದು ಚುನಾವಣ ಆಯೋಗಕ್ಕೆ ಬಿಜೆಪಿ ಮನವಿ ಮಾಡಿತ್ತು. ಈ ಮಧ್ಯೆ ಅವರ ವರ್ಗಾವಣೆಯಾಗಿದ್ದು, ಸ್ಥಳ ನಿಯೋಜನೆ ಮಾಡಿಲ್ಲ.
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವ ಮೂಲಕ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರು ಶನಿವಾರವೇ ವಾರ್ತಾ ಇಲಾಖೆ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಅಧಿಕಾರ ಹಸ್ತಾಂತರಿಸಿದರು.
2012ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಸೂರಳ್ಕರ್ ವಿಕಾಸ್ ಅವರಿಗೆ, ಯಾದಗಿರಿ, ಬೆಳಗಾವಿ, ವಿಜಯಪುರ ಜಿಪಂ ಸಿಇಒ, ಕೊಪ್ಪಳ ಜಿಲ್ಲಾಧಿಕಾರಿ, ಕೆಪಿಎಸ್ಸಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಅನುಭವವಿದೆ. ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿಯೂ ಮುಂದುವರಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.