ಶಾಲೆಗಳ ಅಡುಗೆ ಸಹಾಯಕರ ಮೂರು ತಿಂಗಳ ಸಂಭಾವನೆ ಬಿಡುಗಡೆ: ಸುರೇಶ್ ಕುಮಾರ್
Team Udayavani, Jan 2, 2021, 4:20 PM IST
ಬೆಂಗಳೂರು: ರಾಜ್ಯದ ಶಾಲೆಗಳ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕರ 2020ರ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗಿನ ಮೂರು ತಿಂಗಳ ಗೌರವ ಸಂಭಾವನೆ ಪಾವತಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಜ. 1ರಂದೇ ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು, ಮೂರು ತಿಂಗಳ ಗೌರವ ಸಂಭಾವನೆ ಪಾವತಿಗೆ 9345.76 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ, ಅದರ ಬಗ್ಗೆ ಚರ್ಚೆ ಬೇಡ: ಶೆಟ್ಟರ್
ಈ ಮೂರು ತಿಂಗಳ ವೇತನವನ್ನು ಕೂಡಲೇ ಅಡುಗೆ ಸಹಾಯಕರಿಗೆ ನೀಡಲಾಗುವುದು ಹಾಗೂ 2021ರ ಜನವರಿಯಿಂದ ಮಾರ್ಚ್ ವರೆಗಿನ ತ್ರೈಮಾಸಿಕದ ಗೌರವ ಸಂಭಾವನೆಯನ್ನು ಶೀಘ್ರವೇ ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.