ಸರ್ಕಾರಿ ಸೇವೆ ವಿಳಂಬಕ್ಕೆ ಪರಿಹಾರ ಪಡೆಯುವುದು ಜನರ ಹಕ್ಕು: ಸುರೇಶ್ ಕುಮಾರ್
Team Udayavani, Nov 30, 2020, 3:00 PM IST
ಬೆಂಗಳೂರು: ಸರ್ಕಾರದಿಂದ ದೊರೆಯಬಹುದಾದ ಸೇವೆಗಳನ್ನು ಪಡೆಯುವುದು ಮತ್ತು ಸೇವೆಗಳು ವಿಳಂಬವಾದರೆ ಆ ಕುರಿತು ಮೇಲ್ಮನವಿ ಸಲ್ಲಿಸಿ ಪರಿಹಾರ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿರುವುದರಿಂದ ಸಾರ್ವಜನಿಕರು ಈ ಕುರಿತು ಹೆಚ್ಚು ಜಾಗೃತರಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ಸೋಮವಾರ ವಿಧಾನಸೌಧದಲ್ಲಿ ನ.30ರಿಂದ ಡಿ. 5ರವರಗೆ ನಡೆಯುವ ಸಕಾಲ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ನಂತರ ಸಕಾಲ ಸೇವೆಗಳಲ್ಲಿ ಸ್ವಲ್ಪ ವ್ಯತ್ಯಯವಾಗಿದ್ದು, ಅದಕ್ಕೆ ಚುರುಕು ನೀಡಿ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆಗಳನ್ನು ಪಡೆಯಲು ಅನುವಾಗುವಂತೆ ಸಕಾಲ ಸೇವೆಗಳ ಕುರಿತು ಜಾಗೃತಿ ಮೂಡಿಸಲು ಸಪ್ತಾಹ ಆಚರಿಸಲಾಗುತ್ತಿದೆ ಎಂದರು.
ಲಭ್ಯ ಸೇವೆ ಪಡೆಯುವುದು ಸಾರ್ವಜನಿಕರ ಹಕ್ಕು ಆಗಿರುವಂತೆಯೇ ಸಕಾಲದಲ್ಲಿ ಅದನ್ನು ಒದಗಿಸುವುದು ಯಾವುದೇ ಸರ್ಕಾರದ ಹಾಗೆಯೇ ವ್ಯವಸ್ಥೆಯ ಕರ್ತವ್ಯವಾಗಿರುವುದರಿಂದ ಇದರ ಸಾಕಾರಕ್ಕೆ ಸಕಾಲ ಸೇವೆ ಜಾರಿಗೆ ಬಂದಿದ್ದು, ಅದನ್ನು ಇನ್ನಷ್ಟು ಚುರುಕುಗೊಳಿಸುವುದರೊಂದಿಗೆ ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ನೀಡುವುದು ಸಪ್ತಾಹದ ಉದ್ದೇಶವಾಗಿದೆ ಎಂದು ಹೇಳಿದರು.
ಅಧಿಕಾರಿಗಳು ಯಾವುದೇ ಸೇವೆಯಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು. ವಿಳಂಬದಿಂದ ಸಕಾಲದ ಯೋಜನೆಯ ಉದ್ದೇಶ ಫಲಪ್ರದವಾಗುವುದಿಲ್ಲ. ಅರ್ಜಿ ನಿರಾಕರಿಸುವುದು, ಸಕಾಲ ಯೋಜನೆ ಮೂಲಕ ಅರ್ಜಿ ಸ್ವೀಕರಿಸದೇ ಇರುವುದು, ವಿನಾಕಾರಣ ಅರ್ಜಿ ತಿರಸ್ಕರಿಸುವುದು, ಉದ್ದೇಶಪೂರ್ವಕ ವಿಳಂಬ ಮಾಡುವಂತಹ ಪ್ರಕರಣಗಳು ಕಂಡುಬರುತ್ತಿವೆ. ಇದಕ್ಕೆಲ್ಲ ಕಡಿವಾಣ ಹಾಕುವುದುರೊಂದಿಗೆ ಎಂದು ಸುರೇಶ್ ಕುಮಾರ್ ಹೇಳಿದರು.
ಇದನ್ನೂ ಓದಿ:ಗ್ರಾ.ಪಂ ಚುನಾವಣೆಗೆ ದಿನ ನಿಗದಿ:ಯಾವ ತಾಲೂಕಿನಲ್ಲಿ ಯಾವಾಗ ಚುನಾವಣೆ?ಇಲ್ಲಿದೆ ಸಂಪೂರ್ಣ ಪಟ್ಟಿ
ಸಕಾಲ ಸೇವೆ ಯೋಜನೆ ಅರಂಭವಾದಂದಿನಿಂದ ಈ ತನಕ 22,88,81,652 ಅರ್ಜಿಗಳು ಬಂದಿದ್ದು, ಅದರಲ್ಲಿ 22,82,55,686 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಕಳೆದ ಅಕ್ಟೋಬರ್ ನಲ್ಲಿ ಸಕಾಲ ಅರ್ಜಿ ವಿಲೇವಾರಿಯಲ್ಲಿ ಮಂಡ್ಯ ಜಿಲ್ಲೆ ಪ್ರಥಮ, ಚಿಕ್ಕಮಗಳೂರು ದ್ವಿತೀಯ, ಚಿಕ್ಕಬಳ್ಳಾಪುರ ತೃತೀಯ ಸ್ಥಾನ ಪಡೆದರೆ, ರಾಯಚೂರು, ಬೀದರ್ ಮತ್ತು ಬೆಂಗಳೂರು ನಗರ ಕೊನೆಯ ಮೂರು ಸ್ಥಾನದಲ್ಲಿವೆ ಎಂದು ಸಚಿವರು ಹೇಳಿದರು.
ವಿಶೇಷವಾಗಿ ಪ್ರತಿಯೊಂದು ಇಲಾಖಾ ಕಚೇರಿಯಲ್ಲೂ ಸಕಾಲ ಸೇವೆ ಪಡೆಯುವ ಕುರಿತು ಸಾರ್ವಜನಿಕರ ಗಮನಕ್ಕೆ ಬರುವಂತೆ ಫಲಕ ಹಾಕುವುದು ಕಡ್ಡಾಯವಾಗಿದ್ದು, ಸಕಾಲ ಸೇವೆಗಳು ಇರುವ ಕುರಿತಂತೆ ಇಲಾಖೆಗಳು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಹಾಗೆಯೇ ಸೇವೆಯ ವಿಳಂಬದ ಕುರಿತು ಮೇಲ್ಮನವಿ ಸಲ್ಲಿಸಿ ಪರಿಹಾರ ಪಡೆಯುವ ಕುರಿತು ಜಾಗೃತಿ ಮೂಡಿಸುವುದು ಇಲಾಖೆಗಳ ಕರ್ತವ್ಯವಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.