Drought:ಬರಗಾಲದ ಪರಿಹಾರ ಕುರಿತು ಸಮೀಕ್ಷೆ; ಎನ್.ಡಿ.ಆರ್.ಎಫ್ ಪ್ರಕಾರ ಪರಿಹಾರ: ಮುಖ್ಯಮಂತ್ರಿ

Team Udayavani, Nov 29, 2023, 3:07 PM IST

11-cm

ಹಾವೇರಿ: ನಿಗಮ ಮಂಡಳಿ ಆಯ್ಕೆ ಕುರಿತು ಚರ್ಚೆ ಮಾಡಿ ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುತ್ತೇವೆ. ನಾನು, ಸುರ್ಜೆವಾಲಾ, ಡಿ.ಕೆ.ಶಿವಕುಮಾರ್ ಕುಳಿತು ಚರ್ಚೆ ಮಾಡುತ್ತೇವೆ. ಹೈಕಮಾಂಡ್ ನವರು ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕಾಗಿನೆಲೆಯ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಶಾಸಕ‌ ಬಿ.ಆರ್.ಪಾಟೀಲ ರಾಜೀನಾಮೆ ಪತ್ರದ ಕುರಿತು ಈಗಾಗಲೇ ಬೆಳಗ್ಗೆ ದೂರವಾಣಿ ಮೂಲಕ ಅವರೊಂದಿಗೆ ಮಾತನಾಡಿದ್ದೇನೆ. ಸಂಜೆ ಬೆಂಗಳೂರಿಗೆ ಬರಲು ಹೇಳಿದ್ದೇನೆ. ಅಲ್ಲಿ ಚರ್ಚಿಸುತ್ತೇನೆ ಎಂದರು.

ಹೈಕೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ಗೆ ರಿಲೀಫ್ ಕುರಿತು ಮಾತನಾಡಿದ‌ ಸಿಎಂ, ಸಿಬಿಐ ತನಿಖೆ ಮಾಡಬೇಕು ಎಂಬುದನ್ನು ನಾವು ವಾಪಸ್ ತೆಗೆದುಕೊಂಡಿದ್ದೇವೆ. ಅದು ಕಾನೂನು ಪ್ರಕಾರ ಇಲ್ಲ. ಈ ಹಿಂದಿನ ಸರ್ಕಾರ ಕಾನೂನು ಬಾಹಿರವಾಗಿ ಮಾಡಿತ್ತು ಎಂದು ಹೇಳಿಸರು.

ಬರಗಾಲದ ಪರಿಹಾರ ಕುರಿತು ಸಮೀಕ್ಷೆ ಮಾಡುತ್ತಿದ್ದೇವೆ. ಎನ್ ಡಿ ಆರ್ ಎಫ್ ಪ್ರಕಾರ ಪರಿಹಾರ ಕೊಡುತ್ತೇವೆ. ಆದರೆ, ಕೇಂದ್ರ ಸರ್ಕಾರ ಒಂದು ನಯಾಪೈಸೆ ಕೊಡುತ್ತಿಲ್ಲ. ರೈತರು ಕಷ್ಟದಲ್ಲಿ ಇದ್ದಾರೆ. ಪರಿಹಾರ ಕೇಳುತ್ತಿದ್ದಾರೆ. ನಮ್ಮ ತೆರಿಗೆ ಹಣ ನಮಗೆ ಕೊಡಲು ಕೇಂದ್ರ ಒಪ್ಪುತ್ತಿಲ್ಲ ಎಂದರು.

ನಾವು ಕುಡಿಯುವ ನೀರಿಗೆ, ಮೇವಿಗೆ ಹಣ ಕೊಟ್ಟಿದ್ದೇವೆ. ನಾವು ಏನೂ ಮಾಡದೇ ಕುಳಿತಿಲ್ಲ. ಜಿಲ್ಲಾಧಿಕಾರಿಗಳಿಗೆ, ಮಂತ್ರಿಗಳಿಗೆ ಸೂಚನೆ ಕೊಟ್ಟಿದ್ದೇನೆ.ಬರಗಾಲದ ಬಗ್ಗೆ ಸಭೆ ನಡೆಸಬೇಕು. ಯಾರಿಗೂ ತೊಂದರೆ ಆಗಬಾರದು, ಸಮೀಕ್ಷೆ ಮಾಡಬೇಕು ಎಂದು ಹೇಳಿದರು.

ಜನಗಳಿಗೆ ಬರಗಾಲದಲ್ಲಿ ನರೇಗಾ ಯೋಜನೆಯಡಿ ನೂರು ದಿನದ ಬದಲು 150 ದಿನ ಕೆಲಸ ಕೊಡಬೇಕು ಎಂಬ ನಿಯಮವಿದೆ. ಆದರೆ, ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಕೊಡುತ್ತಿಲ್ಲ ಎಂದ ಅವರು, ಇಡೀ ದೇಶದಲ್ಲಿ ಹನ್ನೆರಡು ರಾಜ್ಯದಲ್ಲಿ ಬರಗಾಲ ಇದೆ. ಯಾವ ರಾಜ್ಯಕ್ಕೂ ಪರಿಹಾರ ಹಾಗೂ ಅನುಮತಿ ಕೊಟ್ಟಿಲ್ಲ. ಕೇಂದ್ರದಿಂದ ಬರಗಾಲ ತಂಡ ಅಧ್ಯಯನ ಮಾಡಿ ವರದಿ ಕೊಟ್ಟಿದೆ. ಆದರೂ ಪರಿಹಾರ ಕೊಟ್ಟಿಲ್ಲ ಎಂದರು.

ಇಲ್ಲಿಯ ಬಿಜೆಪಿಯವರು ಹೇಳುತ್ತಾರೆ. ಅವರಿಗೆ ಯಾಕೆ ನೋಡುತ್ತೀರಿ ಅಂತಾ. ಆದರೆ ನಾವು ಆ ಕಡೆ ನೋಡುವುದಿಲ್ಲ. ನಮಗೆ ಬರಬೇಕಾಗಿರುವ ಪರಿಹಾರ ಬರಬೇಕಲ್ಲ‌ ಎಂದು ಹೇಳಿದರು.

ಬೆಳಗಾವಿ ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಬಗೆಗಿನ ವಿಚಾರ, ವಿರೋಧ ಪಕ್ಷದವರು ಏನು ಪ್ರಸ್ತಾಪ ಮಾಡುತ್ತಾರೆ. ಅದಕ್ಕೆ ನಾವು ಉತ್ತರ ಕೊಡುವುದಕ್ಕೆ ತಯಾರಿದ್ದೇವೆ ಎಂದು ಹೇಳಿದ ಅವರು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತೇವೆ ಎಂದರು.

ಸಿಎಂ ವಕೀಲರಾಗಿ ಡಿಕೆಶಿ ಕೇಸ್ ವಾಪಸ್ ಪಡೆದಿದ್ದು, ಎಷ್ಟರ ಮಟ್ಟಿಗೆ ಸರಿ ಎಂಬ ಎಚ್ ಡಿಕೆ ಹೇಳಿಕೆ ಕುರಿತು ಸಿಎಂ ಪ್ರತಿಕ್ರಿಯಿಸಿ, ನಾವು ವಕೀಲರಾಗಿ ಇರೋದಕ್ಕೆ ವಾಪಸ್ ಪಡೆದಿದ್ದೇವೆ. ಅವರ ವಕೀಲರು ಅಲ್ಲ. ಕಾನೂನು ಪ್ರಕಾರ ಇಲ್ಲ ಎಂಬ ಕಾರಣಕ್ಕೆ ವಾಪಸ್ ಪಡೆದಿದ್ದೇವೆ.

ವಕೀಲರಾಗಿ ಇರುವುದಕ್ಕೆ ವಾಪಸ್ ಪಡೆದಿದ್ದೇವೆ. ಇಲ್ಲ ಎಂದರೆ ಯಡಿಯೂರಪ್ಪ, ಕುಮಾರಸ್ವಾಮಿ ರೀತಿಯಲ್ಲಿ ನಾನೂ ಇರುತ್ತಿದ್ದೆ ಎಂದು ಕುಟುಕಿದರು.

ಟಾಪ್ ನ್ಯೂಸ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.