ಶಂಕಿತ ಐಸಿಸ್ ಉಗ್ರ ಸೆರೆ; ಉಗ್ರ ಸಂಘಟನೆಗೆ ಯುವಕರ ನೇಮಕ ಆರೋಪ
Team Udayavani, Oct 25, 2021, 6:20 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಯುವಕರನ್ನು ಐಸಿಸ್ ಉಗ್ರ ಸಂಘಟನೆಗೆ ನೇಮಿಸಿ ಸಿರಿಯಾಕ್ಕೆ ಕಳುಹಿಸುತ್ತಿದ್ದ ಬೆಂಗಳೂರಿನ ಮತ್ತೊಬ್ಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಅಧಿಕಾರಿಗಳು ಶನಿವಾರ ರಾತ್ರಿ ಬಂಧಿಸಿದ್ದಾರೆ.
ಶಿವಾಜಿನಗರ ಮತ್ತು ಫ್ರೆಜರ್‌ಟೌನ್ ನಿವಾಸಿ ಮೊಹಮ್ಮದ್ ತೌಕೀರ್ ಮೊಹಮ್ಮದ್ (33) ಬಂಧಿತ. ಈತ ನಗರದಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡಿದ್ದು, ಬಳಿಕ ದುಬಾೖಗೆ ತೆರಳಿ ವ್ಯಾಪಾರ ಮುಂದುವರಿಸಿದ್ದ. ಖಚಿತ ಮಾಹಿತಿಯ ಮೇರೆಗೆ ಅಲ್ಲಿನ ಸ್ಥಳೀಯ ಪೊಲೀಸರು ಆರೋಪಿಯನ್ನು ಬಂಧಿಸಿ ಭಾರತಕ್ಕೆ ಗಡಿಪಾರು ಮಾಡಿದ್ದಾರೆ. ಈಗ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ದಿಲ್ಲಿಗೆ ಕರೆತಂದಿದ್ದಾರೆ. ಶೀಘ್ರ ಬೆಂಗಳೂರಿಗೆ ಕರೆತರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಐಸಿಸ್‌ಗೆ ಯುವಕರ ನೇಮಕ, ಹಣ ಸಂಗ್ರಹ ಮತ್ತಿತರ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಆರೋಪದ ಮೇಲೆ ಮೊಹಮ್ಮದ್ ತೌಕೀರ್ ಸಹಿತ ನಾಲ್ವರ ವಿರುದ್ಧ ಯುಎಪಿಎ ಸೇರಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್: ಸಿದ್ದರಾಮಯ್ಯ
ಸಿರಿಯಾದಲ್ಲೇ ತರಬೇತಿ
ಮೊಹಮ್ಮದ್ ತೌಕೀರ್ ಮೊಹಮ್ಮದ್ ಉಗ್ರ ಸಂಘಟನೆಗಾಗಿ ಹಣ ಸಂಗ್ರಹಿಸುತ್ತಿದ್ದ. ವಾಟ್ಸ್ ಆ್ಯಪ್ ಗ್ರೂಪ್ ರಚಿಸಿ ದಕ್ಷಿಣ ಭಾರತದ ಮುಸ್ಲಿಂ ಯುವಕರನ್ನು ಸಂಘಟನೆಗೆ ನೇಮಿಸಿಕೊಳ್ಳುತ್ತಿದ್ದ. ಬಳಿಕ ಅವರನ್ನು ಐಸಿಸ್ ಸೇರಲು ಸಿರಿಯಾಕ್ಕೆ ಕಳುಹಿಸುತ್ತಿದ್ದ. 2013ರಲ್ಲಿ ಈತ ತನ್ನ ಸಹಚರರ ಜತೆ ಸೇರಿ ಐಸಿಸ್/ಐಎಸ್‌ಐಎಲ್/ಡಾಯಿಶ್ ನಾಯಕರನ್ನು ಸಂಪರ್ಕಿಸಲು ಸಿರಿಯಾಕ್ಕೆ ಭೇಟಿ ನೀಡಿ, ಸಂಘಟನೆ, ನೇಮಕಾತಿ ಚಟುವಟಿಕೆಗಳ ತರಬೇತಿ ಪಡೆದಿದ್ದ ಎಂದು ಎನ್‌ಐಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.