Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Team Udayavani, Nov 18, 2024, 6:10 AM IST
ರಾಯಚೂರು/ ಕಲಬುರಗಿ: ಪಿಡಿಒ ನೇಮಕಾತಿ ಪರೀಕ್ಷೆ ವೇಳೆ ಗೊಂದಲ ಹಾಗೂ ತಡವಾಗಿ ಪ್ರಶ್ನೆಪತ್ರಿಕೆ ವಿತರಿಸಿದ್ದಕ್ಕೆ 213ಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ.
ಕೊಠಡಿಯೊಂದಕ್ಕೆ ಒಯ್ಯಬೇಕಿದ್ದ ಪ್ರಶ್ನೆಪತ್ರಿಕೆ ಬಂಡಲ್ ಮತ್ತೂಂದು ಕೊಠಡಿಗೆ ಒಯ್ದು ಅಲ್ಲಿ ತೆರೆದ ಅನಂತರ ವ್ಯತ್ಯಾಸ ಗೊತ್ತಾಗಿ, ಮತ್ತೂಂದು ಕೊಠಡಿಗೆ ತಂದ ಹಿನ್ನೆಲೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಯಾಗಿದೆ ಎಂಬ ಶಂಕೆ ವ್ಯಕ್ತಪಡಿಸಿ, ಪಿಡಿಒ ಪರೀûಾರ್ಥಿ
ಗಳು ರವಿವಾರ ಸಿಂಧನೂರು ಸರಕಾರಿ ಪದವಿ ಮಹಾವಿದ್ಯಾಲಯದ ಎದುರು ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಕಲಬುರಗಿಯ ಗುಡ್ ಶೆಫರ್ಡ್ ಪರೀಕ್ಷಾ ಕೇಂದ್ರದಲ್ಲೂ ಇದೇ ರೀತಿಯಾಗಿದೆ.
ಸಹಾಯಕ ಆಯುಕ್ತ ಬಸವಣ್ಣೆಪ್ಪ, ತಹಶೀಲ್ದಾರ್ ಅರುಣ್ಕುಮಾರ ಎಚ್. ದೇಸಾಯಿ ಸ್ಥಳಕ್ಕೆ ಆಗಮಿಸಿ, ಪರೀಕ್ಷೆಯಲ್ಲಿ ಆಗಿರುವ ಗೊಂದಲಗಳ ಕುರಿತು ಕೆಪಿಎಸ್ಸಿ ಕಾರ್ಯದರ್ಶಿಗೆ ಮಾಹಿತಿ ವರದಿ ಸಲ್ಲಿಸಿದ್ದಾರೆ. ಮೊದಲ ಪರೀಕ್ಷೆಯನ್ನು ಮತ್ತೂಮ್ಮೆ ನಡೆಸುವ ಕುರಿತು ಕೆಪಿಎಸ್ಸಿಗೆ ಮನವಿ ಮಾಡಲಾಗಿದ್ದು, ಮರುಪರೀಕ್ಷೆಯ ಭರವಸೆ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.