![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 17, 2019, 3:00 AM IST
ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಶಂಕಿತ ಉಗ್ರನೊಬ್ಬನ ಬಂಧನವಾಗಿದೆ ಎಂಬ ವದಂತಿ ಹಬ್ಬಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ಆದರೆ, ಜಿಲ್ಲಾ ಪೊಲೀಸ್ ಇಲಾಖೆ ಮಾತ್ರ ಈ ವಿಚಾರವನ್ನು ತಳ್ಳಿ ಹಾಕಿದ್ದು, ಸ್ಯಾಟಲೈಟ್ ಫೋನ್ ಬಳಕೆ ಆಗಿರುವ ಬಗ್ಗೆ ತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದೆ.
ತೀರ್ಥಹಳ್ಳಿಯ ಸುರಾನಿ ಎಂಬ ಗ್ರಾಮದಲ್ಲಿ ಶಿವಮೊಗ್ಗ ಪೊಲೀಸರು ಮಂಗಳವಾರ ಭಾರೀ ಹುಡುಕಾಟ ನಡೆಸಿದ್ದು, ಇಲ್ಲಿನ ತೋಟದ ಮನೆಯೊಂದರಲ್ಲಿ ಕೆಲ ಹೊತ್ತು ತಪಾಸಣೆ ನಡೆಸಿದರು. ಈ ಭಾಗದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಇಲ್ಲಿ ಓಡಾಡುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.
ಈ ಕಾರಣಕ್ಕೆ ಶಂಕಿತ ಭಯೋತ್ಪಾದಕರ ಬಂಧನವಾಗಿದೆ ಎಂಬ ವದಂತಿ ಹಬ್ಬಿದೆ. ಭಾರತದಲ್ಲಿ ಸ್ಯಾಟಲೈಟ್ ಫೋನ್ ಬಳಕೆಗೆ ನಿಷೇಧವಿದೆ. ಆದರೂ ತೀರ್ಥಹಳ್ಳಿಯ ಸುರಾನಿ ಭಾಗದಲ್ಲಿ ಕೆಲ ದಿನದ ಹಿಂದೆ ಸ್ಯಾಟಲೈಟ್ ಫೋನ್ ಸಿಗ್ನಲ್ ಬಳಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ಪೊಲೀಸ್ ಇಲಾಖೆಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಲಭ್ಯವಾಗಿತ್ತು.
ಹಾಗಾಗಿ, ದಿಢೀರ್ ತಪಾಸಣೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಈ ಹಿಂದೆ ಶಂಕಿತ ಭಯೋತ್ಪಾದಕರ ಬಂಧನವಾಗಿತ್ತು. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಸುರಾನಿ ಗ್ರಾಮದಲ್ಲಿ ನಡೆದ ಪೊಲೀಸ್ ತಪಾಸಣೆ ಬಗ್ಗೆ ವದಂತಿ ಹಬ್ಬಲು ಕಾರಣವಾಗಿದೆ.
ಜನರು ಆತಂಕಕ್ಕೀಡಾಗುವ ಅಗತ್ಯವಿಲ್ಲ. ಕೆಲವು ಪೂರ್ವಭಾವಿ ತನಿಖೆಗಾಗಿ ತಪಾಸಣೆ ನಡೆಸಲಾಗಿದೆ. ಉಗ್ರರ ಬಂಧನವಾಗಿದೆ ಅನ್ನುವುದು ಸುಳ್ಳು.
-ಕೆ.ಎಂ.ಶಾಂತರಾಜು, ಎಸ್‌ಪಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.