ಮಠದಲ್ಲೇ ಸ್ವಾಮೀಜಿ ರಾಸಲೀಲೆ!; ರೊಚ್ಚಿಗೆದ್ದ ಭಕ್ತರು
Team Udayavani, Oct 26, 2017, 9:33 AM IST
ಬೆಂಗಳೂರು: ನಗರದ ಯಲಹಂಕದ ಹುಣಸಮಾರನಹಳ್ಳಿಯಲ್ಲಿರುವ ಶತಮಾನಗಳಷ್ಟು ಇತಿಹಾಸ ಹೊಂದಿರುವ ಮದ್ದೇವಣಾಪುರ ಮಹಾದೇವ ಸಂಸ್ಥಾನ ಮಠದ ಉತ್ತರಾಧಿಕಾರಿ ಎಂದು ಬಿಂಬಿತವಾಗಿದ್ದ ಗುರುನಂಜೇಶ್ವರ ಸ್ವಾಮೀಜಿ ನಟಿಯೊಬ್ಬಳೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ಬಹಿರಂಗವಾಗಿ ಭಾರೀ ಸದ್ದು ಮಾಡಿದೆ.
ಮಠದ ಹಾಲಿ ಪೀಠಾಧಿಪತಿಯಾಗಿರುವ ಶೀವಾಚರ್ಯ ಸ್ವಾಮೀಜಿ ಪುತ್ರನಾಗಿರುವ ದಯಾನಂದ ಎಂಬಾತ ರಾಸಲೀಲೆಯಲ್ಲಿ ತೊಡಗಿರುವ ದೃಶ್ಯಗಳ ವಿಡಿಯೋಗಳು ಗುರುವಾರ ಮಾಧ್ಯಮಗಳಲ್ಲಿ ಬಿತ್ತರವಾಗಿವೆ. ಮಠದ ಕೋಣೆಯಲ್ಲೇ ರಾಸಲೀಲೆ ನಡೆಸಿದ್ದಾನೆ ಎಂದು ಹೇಳಲಾಗಿದೆ.
ವೀರಶೈವ ಪರಂಪರೆಯ ಮಠಕ್ಕೆ ಶಿವಾಚಾರ್ಯ ಶ್ರೀಗಳು 2011ರಲ್ಲಿ ಉತ್ತರಾಧಿಕಾರಿಯನ್ನಾಗಿ ತನ್ನ ಪುತ್ರ ದಯಾನಂದನ್ನೇ ನೇಮಕಮಾಡಿಕೊಂಡಿದ್ದರು. ಕೋಟ್ಯಂತರ ರೂಪಾಯಿ ಆಸ್ತಿಯ ಮೇಲೆ ಕಣ್ಣಿಟ್ಟು ಮಗನಿಗೆ ಪಟ್ಟ ಕಟ್ಟಿದ್ದರು ಎಂದು ಭಕ್ತರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದರು ಎಂದು ತಿಳಿದು ಬಂದಿದೆ.
ಇದೀಗ ದಯಾನಂದನ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿ ಹೋರಾಟಕಿದ್ದಿದ್ದು, ತಕ್ಷಣ ಮಠ ಬಿಟ್ಟು ತೆರಳಿ ಬೇರೆ ಸಭ್ಯ ಉತ್ತರಾಧಿಕಾರಿಯನ್ನು ನೇಮಿಸಬೇಕು, ಶ್ರೀಶೈಲ ಶಾಖಾ ಪೀಠದ ಶ್ರೀಗಳು ಮಠಕ್ಕೆ ಆಗಮಿಸಿ ಮಾತುಕತೆ ನಡೆಸಬೇಕು ಎಂದು ಪಟ್ಟು ಹಿಡಿದಿದ್ದಾರೆ.
ರೊಚ್ಚಿಗೆದ್ದ ಭಕ್ತರು
ಮಠದ ಎದುರು ನೂರಾರು ಭಕ್ತರು ಜಮಾವಣೆಗೊಂಡಿದ್ದು ಪ್ರತಿಭಟನೆ ನಡೆಸುವ ಮೂಲಕ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸ್ವಾಮೀಜಿ ಮತ್ತು ಮಗನ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.
ನೆಲ ಮಾಳಿಗೆಯಲ್ಲಿ ಅಡಗಿಕೊಂಡಿದ್ದಾನೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಕೂಡಲೇ ತಂದೆ, ಮಗ ಮಠ ಬಿಟ್ಟು ತೆರಳಬೇಕು ,ನಾವು ಹೊಸ ಉತ್ತರಾಧಿಕಾರಿ ವಟುವನ್ನು ನೇಮಿಸುತ್ತೇವೆ ಎಂದು ಭಕ್ತರು ಪಟ್ಟು ಹಿಡಿದಿದ್ದಾರೆ.
ಸ್ಥಳಕ್ಕೆ 100ಕ್ಕೂ ಹೆಚ್ಚು ಪೊಲೀಸರನ್ನು ಕರೆಸಿಕೊಂಡು ಭದ್ರತೆ ಕೈಗೊಳ್ಳಲಾಗಿದೆ. ಮಠದ ಬಾಗಿಲು ಒಡೆಯಲ ಮುಂದಾದ ಉದ್ರಿಕ್ತರನ್ನು ಪೊಲೀಸರು ತಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.