![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 2, 2020, 11:36 AM IST
ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರದ್ದು ನಾಯಿಪಾಡು ಎಂದಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕಾಂಗ್ರೆಸ್ ಟೀಕೆ ಮಾಡಿದೆ. “ನಳಿನ್ ಕುಮಾರ್ ಅವರೇ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯಲ್ಲಿ ಯಾವ ಪಾಡಿನಲ್ಲಿದ್ದಾರೆ ಎಂದು ಸೂಚಿಸುತ್ತದೆ, ಪಕ್ಷ ಕಟ್ಟಿದ ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಟೀಕೆ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, “ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿಯ ರಾಜ್ಯಾಧ್ಯಕ್ಷ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲ್ ಸಾಕ್ಷಿ, ಇವರ ಮಾತಲ್ಲಿ ಘನತೆ,ಗೌರವ, ಬದ್ಧತೆ, ಯಾವುದೂ ಇಲ್ಲ. ಸರ್ವಜನಾಂಗದ ನಾಯಕ, ಹಣಕಾಸು ತಜ್ಞ, 168 ಯೋಜನೆಗಳನ್ನ ಘೋಷಿಸಿ ಜಾರಿಗೊಳಿಸಿ ನುಡಿದಂತೆ ನೆಡೆದ ನಾಯಕ ಸಿದ್ದರಾಮಯ್ಯ ಎಂದಿದ್ದಾರೆ.
ಒಂದು ಪಂಪ್ ವೆಲ್ ಮೇಲ್ಸೇತುವೆಯನ್ನು ಸಮಯಕ್ಕೆ ಮುಗಿಸಲಾಗದ ನಳಿನ್ ಕುಮಾರ್ ಕಟೀಲ್ ರಿಗೆ ಸಿದ್ದರಾಮಯ್ಯರವರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ, ನಮ್ಮ ಪ್ರತಿ ಕಾರ್ಯಕರ್ತರಲ್ಲೂ ಸಿದ್ದರಾಮಯ್ಯನವರ ಬಗ್ಗೆ ಅದಮ್ಯವಾದ ಗೌರವವಿದೆ ಎಂದಿದೆ.
ಇದನ್ನೂ ಓದಿ:ತನ್ನನ್ನು ಪ್ರಸಿದ್ದಿ ಮಾಡಿದ ಯೂಟ್ಯೂಬರ್ ವಿರುದ್ಧ ದೂರು ನೀಡಿದ ಬಾಬಾ ಕಾ ಡಾಬಾ ಮಾಲಕ
ನಳಿನ್ ಕುಮಾರ್ ಕಟೀಲ್ ರವರೇ ತಾವು ಪದೇ ಪದೇ ಅವಹೇಳನ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳರಿಗೆ ಕನಿಷ್ಠ ನೋಟಿಸನ್ನೂ ಕೊಡದಿದ್ದಿದ್ದು, ನರೇಂದ್ರ ಮೋದಿ ರಾಜ್ಯದ ಮುಖ್ಯಮಂತ್ರಿ ಭೇಟಿಗೆ ಸಣ್ಣ ಸಮಯ ಕೊಡದಿದ್ದಿದ್ದು, ಬಿಎಸ್ ವೈಯವರು ಬಿಜೆಪಿಯಲ್ಲಿ ಯಾವ ಪಾಡಿನಲ್ಲಿದ್ದಾರೆ ಎಂದು ಸೂಚಿಸುತ್ತದೆ, ಪಕ್ಷ ಕಟ್ಟಿದ ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ನಳೀನ್ ಕಟೀಲ್ ಗೆ ಕಾಂಗ್ರೆಸ್ ಸಲಹೆ ನೀಡಿದೆ.
ನಳಿನ್ ಕುಮಾರ್ ಕಟೀಲ್ ತಮ್ಮ ನಡೆ-ನುಡಿ ಮೂಲಕ ತಾನೊಬ್ಬ ಅಪ್ರಬುದ್ಧ, ಅನಾಗರಿಕ, ಸಡಿಲ ನಾಲಿಗೆಯ ಯಕಶ್ಚಿತ್ ರಾಜಕಾರಣಿ ಎಂದು ಮತ್ತೆ ಮತ್ತೆ ಸಾಬೀತು ಮಾಡುತ್ತಿದ್ದಾರೆ, ರಾಜ್ಯ ಬಿಜೆಪಿಯ ಮಾನ ಹರಾಜು ಹಾಕಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು. ಅವರು ಇದೇ ರೀತಿ ಮಾತನಾಡುತ್ತಾ ಬಿಜೆಪಿಯ ಬಣ್ಣ ಬಯಲು ಮಾಡುತ್ತಲೇ ಇರಲಿ ಎಂದು ಟೀಕೆ ಮಾಡಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.