Heavy Rain ಅನಾಹುತ ತಡೆಯಲು ಕ್ಷಿಪ್ರ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ
ಅನಾಹುತ ತಡೆಗೆ ಸನ್ನದ್ಧರಾಗಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ
Team Udayavani, Aug 17, 2024, 6:41 AM IST
ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಮಳೆ ಅನಾಹುತಗಳನ್ನು ಸಾಧ್ಯವಾದಷ್ಟು ತಡೆಯುವ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದೆ. ಸಂಭಾವ್ಯ ಅನಾಹುತಗಳ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.
ಎಲ್ಲ ಸೇತುವೆ, ರಸ್ತೆಗಳ ನಿರಂತರ ಪರಿ ಶೀಲನೆ, ಅಂಗನವಾಡಿ, ಶಾಲೆಗಳ ಕಟ್ಟಡ ಪರಿಶೀಲನೆ ನಡೆಸಿ ಅನಾಹುತ ಆಗದಂತೆ ಮುನ್ನೆಚ್ಚರಿಕೆ ವಹಿಸುವು ದರ ಜತೆಗೆ ರಾಜ್ಯದ ಸೇತುವೆಗಳ ದೃಢತೆ ಖಾತ್ರಿಗೆ ವರದಿ ನೀಡು ವಂತೆಯೂ ಸೂಚನೆ ನೀಡಿ ದ್ದಾರೆ. ಜಲಾಶಯಗಳಲ್ಲಿ ದಿಢೀರ್ ನೀರು ಹೆಚ್ಚಾದಾಗ ಅನಾಹುತ ಆಗದಂತೆ ನೋಡಿಕೊಳ್ಳಲು ಸಿಎಂ ನಿರ್ದೇಶನ ನೀಡಿದ್ದಾರೆ.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಮಳೆಯಿಂದ ಹಾನಿಗೊಳಗಾದ ರಸ್ತೆ, ಕಟ್ಟಡ, ಇತ್ಯಾದಿಗಳ ಪರಿಶೀಲನೆ ಮತ್ತು ಮುಂಬರುವ ಮಳೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದ ರು.
ಮಳೆ ಮುನ್ಸೂಚನೆ ಆಧರಿಸಿ ಮುಂಚಿತ ವಾಗಿಯೇ ಸೂಕ್ತ ಪ್ರಮಾಣದ ನೀರನ್ನು ಜಲಾಶಯಗಳಿಂದ ಹೊರಬಿಡುವ ಮೂಲಕ ಜಲಾಶಯಗಳಲ್ಲಿ ಏಕಾಏಕಿ ನೀರಿನ ಸಂಗ್ರಹ ಹೆಚ್ಚದಂತೆ, ಪ್ರವಾಹ ಉಂಟಾಗುವುದನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಸಂಬಂಧಪಟ್ಟ ಎಲ್ಲ ಇಲಾಖೆಗಳ ನಡುವೆ ಸಮನ್ವಯ ಇರಬೇಕು ಎಂದು ಸೂಚಿಸಿದರು. ಸೇತುವೆಗಳ ದೃಢತೆ ಬಗ್ಗೆ ಲೋಕೋಪ ಯೋಗಿ ಇಲಾಖೆಯಿಂದ ವರದಿ ಪಡೆಯಲು ಸೂಚಿಸಿದರು.
ಸಂಪರ್ಕ ರಸ್ತೆಗಳು ಕುಸಿದಿದ್ದರೆ ಸರಿಪಡಿಸಿ ವಾಹನ ಸಂಚಾರಕ್ಕೆ ಸುಗಮಗೊಳಿಸಬೇಕು. ಎಲ್ಲ ಸೇತುವೆ, ರಸ್ತೆಗಳನ್ನು ನಿರಂತರವಾಗಿ ಪರಿಶೀಲನೆ ನಡೆಸಿ ಅನಾಹುತ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುಳುಗು ಸೇತುವೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಬೇಕು ಎಂದು ಆದೇಶಿಸಿದರು.
ನಗರ ಮತ್ತು ಗ್ರಾಮ ಪ್ರದೇಶಗಳಲ್ಲಿ ಶಿಥಿಲಗೊಂಡ ಮನೆಗಳಲ್ಲಿರುವವರನ್ನು ಖಾಲಿ ಮಾಡಿ ಪುನರ್ವಸತಿ ಕಲ್ಪಿಸಬೇಕು. ಪ್ರವಾಹ ಇರುವಾಗ ನೀರಿಗೆ ಇಳಿಯಲು ಬಿಡಬಾರದು ಎಂದು ಸಿಎಂ ಸೂಚಿಸಿದರು.
ನಿಗಾ ಇಡಿ
ಅಂಗನವಾಡಿ, ಶಾಲೆ ಕಟ್ಟಡಗಳ, ಸೇತುವೆಗಳು, ಕೆರೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಮಲೆನಾಡು, ಕರಾವಳಿ ಭಾಗಗಳಲ್ಲಿ ಇರುವ ಹಳೇ ಶಾಲಾ ಕಟ್ಟಡಗಳನ್ನು ಗುರುತಿಸಿ, ಆದ್ಯತೆ ಮೇರೆಗೆ ದುರಸ್ತಿಗೊಳಿಸಬೇಕು. ಪಂಚಾ ಯತ್ ಮಟ್ಟದಲ್ಲಿ ಕಾರ್ಯಪಡೆ ರಚಿಸಿ 20 ಸಾವಿರ ರೂ. ಅನುದಾನ ಒದಗಿಸ ಲಾಗಿದೆ. ಶಿಥಿಲಗೊಂಡ ಮನೆಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಗ್ರಾಮಮಟ್ಟದಲ್ಲಿ ಮೊದಲೇ ಗುರುತಿಸಬೇಕು ಎಂದರು.
ಮಳೆ, ಹಾನಿ ವಿವರ
-ಶೇ. 22: ಜೂ. 1ರಿಂದ ಆ. 15ರ ವರೆಗೆ ವಾಡಿಕೆಗಿಂತ ಹೆಚ್ಚುವರಿ ಮಳೆ
-13 ಜಿಲ್ಲೆ ಗಳಲ್ಲಿ ಹೆಚ್ಚು ಮಳೆ
-70 ಲಕ್ಷ ಹೆಕ್ಟೇರ್: ರಾಜ್ಯದಲ್ಲಿ ಬಿತ್ತನೆ
-81,589 ಹೆಕ್ಟೇರ್: ಬೆಳೆ ಹಾನಿ
-67- ಅತಿವೃಷ್ಟಿಯಿಂದ ಸಾವು
-29 – ಮನೆಕುಸಿತದಿಂದ ಸಾವು
-66 ಪ್ರಕರಣಗಳಿಗೆ 3.29 ಕೋಟಿ ಪರಿಹಾರ ವಿತರಣೆ
-ರಾಜ್ಯದ ಜಲಾಶಯಗಳು ಶೇ.89ರಷ್ಟು ಭರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.