ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಣೆ: ಸಿಎಂ ಬೊಮ್ಮಾಯಿ
Team Udayavani, Apr 6, 2022, 6:40 AM IST
ಬೆಂಗಳೂರು: ಮುಸಲ್ಮಾನ ಸಮುದಾಯದವರು ನಮಾಜ್ ಮಾಡಲು ಆಜಾನ್ ಬಳಕೆ ಮಾಡುವ ಬಗ್ಗೆ ಹೈಕೋರ್ಟ್ ಆದೇಶ ಇದೆ. ಈ ವಿಚಾರದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಜಾನ್ ಬಳಕೆಗೆ ನಿರ್ದಿಷ್ಟ ಡೆಸಿಬಲ್ಸ್ ಶಬ್ದ ಇರಬೇಕು ಎಂದು ಹೈಕೋರ್ಟ್ ಈ ಹಿಂದೆಯೇ ಆದೇಶ ನೀಡಿತ್ತು. ಆ ಆದೇಶ ಪಾಲಿಸಿಲ್ಲ ಅಂತ ಹೈಕೋರ್ಟ್ ಮತ್ತೊಂದು ಆದೇಶ ಮಾಡಿದೆ ಎಂದರು.
ಹೈಕೋರ್ಟ್‌ನ ಹಿಂದಿನ ಆದೇಶಗಳನ್ನು ಹಂತ ಹಂತವಾಗಿ ಪಾಲನೆಗೆ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲರನ್ನೂ ವಿಶ್ವಾಸದಲ್ಲಿ ತೆಗೆದುಕೊಂಡು ಮಾಡುವ ಕೆಲಸ ಇದು. ಈ ವಿಚಾರದಲ್ಲಿ ಯಾವುದೇ ರೀತಿಯ ಬಲವಂತ ಮಾಡಬೇಕಾಗಿಲ್ಲ. ಹಲವು ಸಂಘಟನೆಗಳ ಜತೆ ಪೊಲೀಸ್ ಠಾಣೆ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನೂ ಮಾಡಿದ್ದೇವೆ. ಮುಂದೆಯೂ ಈ ತರದ ಸಭೆಗಳನ್ನು ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:ಡಾ| ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
ಹಾಸ್ಯಾಸ್ಪದ
ತೆಲಂಗಾಣದ ಐಟಿ ಬಿಟಿ ಸಚಿವ ಕೆ.ಟಿ. ರಾಮರಾವ್ ಬೆಂಗಳೂರನ್ನು ಹೈದರಾಬಾದ್‌ಗೆ ಕರ್ನಾಟಕವನ್ನು ತೆಲಂಗಾಣಕ್ಕೆ ಹೋಲಿಕೆ ಮಾಡಿರುವುದು ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೈದರಾಬಾದ್‌ಗೆ ಉದ್ಯಮಿಗಳನ್ನು ಆಹ್ವಾನಿಸಿ ತೆಲಂಗಾಣ ಸಚಿವ ಕೆ.ಟಿ. ರಾಮರಾವ್ ಟ್ವೀಟ್ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಕೆ.ಟಿ. ರಾಮರಾವ್‌ಗೆ ಅವರ ಟ್ವೀಟ್ ಹಾಸ್ಯಾಸ್ಪದವಾಗಿದೆ. ಇಡೀ ಜಗತ್ತಿನ ಜನ ಬೆಂಗಳೂರಿಗೆ ಬರುತ್ತಿದ್ದಾರೆ. ಬರೀ ಭಾರತದ ಉದ್ಯಮಿಗಳಷ್ಟೇ ಬರುತ್ತಿಲ್ಲ. ಅತೀ ಹೆಚ್ಚು ಸ್ಟಾರ್ಟ್ ಅಪ್ ಗಳು ಬೆಂಗಳೂರಿನಲ್ಲಿವೆ. ಅತೀ ಹೆಚ್ಚು ಎಫ್ ಡಿಐ ಬೆಂಗಳೂರಿನಲ್ಲಿದೆ. ಕರ್ನಾಟಕದ ಕಳೆದ ಮೂರು ತ್ತೈಮಾಸಿಕಗಳ ಆರ್ಥಿಕತೆ ಹೆಚ್ಚಿನ ಮಟ್ಟದಲ್ಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.