ಕಾಂಗ್ರೆಸ್‌ನ ಸತ್ಯ ಶೋಧನ ವರದಿ : ಅತ್ಯಾಚಾರಕ್ಕೆ ಪೊಲೀಸ್ ವೈಫಲ್ಯ ಕಾರಣ: ತನ್ವೀರ್ ಸೇಠ್
Team Udayavani, Sep 10, 2021, 6:00 AM IST
ಮೈಸೂರು: ನಗರದಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು, ಅತ್ಯಾಚಾರ ಪ್ರಕರಣ ಸಂಬಂಧ ಕಾಂಗ್ರೆಸ್‌ನಿಂದ ನೇಮಕವಾಗಿದ್ದ ಸತ್ಯಶೋಧನ ಸಮಿತಿಯ ವರದಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.
ಅತ್ಯಾಚಾರ ಪ್ರಕರಣ ಸಂಬಂಧ ಸತ್ಯಶೋಧನ ಸಮಿತಿ ಸಂಪೂರ್ಣ ಮಾಹಿತಿ ಕಲೆ ಹಾಕಿ ವರದಿ ಸಿದ್ಧಪಡಿಸಿ, ಹಲವು ಶಿಫಾರಸುಗಳನ್ನು ಮಾಡಿ ಪಕ್ಷದ ನಾಯಕರಿಗೆ ನೀಡಿದ್ದೇವೆ. ಈ ಸಂಬಂಧ ಅಧಿವೇಶನಲ್ಲಿ ಹೋರಾಟವನ್ನು ನಡೆಸುತ್ತೇವೆ ಎಂದು ಹೇಳಿದರು.
ಜಸ್ಟಿಸ್ ವರ್ಮಾ ಆಯೋಗದ ವರದಿಯಂತೆ ಪೊಲೀಸರು ಸಂತ್ರಸ್ತೆಗೆ ನೆರವು, ಚಿಕಿತ್ಸೆ ಮತ್ತು ಭದ್ರತೆ ನೀಡಬೇಕಿತ್ತು. ಆದರೆ ಈ ಪ್ರಕರಣದಲ್ಲಿ ಈ ಮೂರು ಅಂಶಗಳು ಪಾಲನೆಯಾಗಿಲ್ಲ. ಜತೆಗೆ ಅತ್ಯಾಚಾರ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಲು 15 ಗಂಟೆ ಯಾಕೆ ತಡ ಮಾಡಿದರು ಎಂದು ಅವರು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.