75ಕ್ಕೆ ಉತ್ತರವೇ ಗುರಿ: ಬಿಎಸ್‌ವೈಗೆ ತೇರದಾಳ ಕ್ಷೇತ್ರ ಅಂತಿಮ ಸಾಧ್ಯತೆ


Team Udayavani, Sep 27, 2017, 8:04 AM IST

27-STATE-3.jpg

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ ಇರಿಸಿಕೊಂಡಿರುವ ಬಿಜೆಪಿ, ಉತ್ತರ ಕರ್ನಾಟಕದಲ್ಲಿ 75 ಸೀಟು ಗೆಲ್ಲಲು ತಂತ್ರಗಾರಿಕೆ ರೂಪಿಸುತ್ತಿದೆ. ಈ ನಿಟ್ಟಿನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಆದರೆ, ಯಡಿಯೂರಪ್ಪ ಮಾತ್ರ ಅತ್ತ ತಮ್ಮ ಸ್ವಕ್ಷೇತ್ರ ಶಿಕಾರಿಪುರವನ್ನು ತೊರೆಯಲಾಗದೆ, ಇತ್ತ ವರಿಷ್ಠರ ಮಾತನ್ನೂ ಮೀರಲಾಗದೆ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. 

ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಸೂಚಿಸಿದ ಬಳಿಕ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಂದ ಸಾಕಷ್ಟು ಒತ್ತಡ ಬಂದಿತ್ತು. ಆದರೆ, ಬಿಎಸ್‌ವೈ ಬಾಗಲ  ಕೋಟೆ ಜಿಲ್ಲೆ ಬಗ್ಗೆ ಆಸಕ್ತಿ ಹೊಂದಿದ್ದರಿಂದ ತೇರದಾಳ ಅಥವಾ ಬೀಳಗಿ ಕ್ಷೇತ್ರಗಳಿಂದ ಸ್ಪರ್ಧಿಸುವ ಕುರಿತು ಚರ್ಚೆ ನಡೆದಿವೆ. ಈ ನಡುವೆ ತೇರದಾಳ ಕ್ಷೇತ್ರವನ್ನೇ ಆಯ್ಕೆಮಾಡಿಕೊಳ್ಳುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ. ಆದರೆ, ಯಡಿಯೂರಪ್ಪ ಮಾತ್ರ ಈ ಕುರಿತಂತೆ ಗುಟ್ಟು ಬಿಟ್ಟುಕೊಡುತ್ತಿಲ್ಲ. ಪಕ್ಷದ ಮೂಲಗಳು ಮಾತ್ರ ಅವರು ತೇರದಾಳದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತ ಎಂದು ಹೇಳುತ್ತಿವೆ.

ಉತ್ತರವೇ ಏಕೆ?: ಉ.ಕ. ಭಾಗದಲ್ಲಿ ಒಟ್ಟು 96 ಕ್ಷೇತ್ರಗಳಿದ್ದು, ಇದರಲ್ಲಿ ಮುಂಬೈ ಕರ್ನಾಟಕದ್ದು 56 ಮತ್ತು ಹೈದರಾಬಾದ್‌ ಕರ್ನಾಟಕದ್ದು 40 ಸೀಟುಗಳಿವೆ. 2008ರಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದ್ದರೆ, 2013ರಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಸಿಕ್ಕಿದ್ದವು. ಅಲ್ಲದೆ 2008ರಲ್ಲಿ ಬಿಜೆಪಿ 13 ಕ್ಷೇತ್ರಗಳಲ್ಲಿ 5 ಸಾವಿರಕ್ಕಿಂತ ಕಡಿಮೆ ಮತಗಳಿಂದ ಸೋತಿತ್ತು. ಲಿಂಗಾಯತ/ಹಿಂದುಳಿದ ವರ್ಗಗಳು ಹೆಚ್ಚಾಗಿರುವ ಈ ಭಾಗದಲ್ಲಿ ಬಿಎಸ್‌ವೈ ಕಣಕ್ಕಿಳಿದರೆ ಅದರ ಪ್ರಭಾವ ಪಕ್ಷದ ಇತರ ಅಭ್ಯರ್ಥಿಗಳ ಮೇಲೂ ಬೀಳುತ್ತದೆ. ಆಗ ಈ ಹಿಂದೆ 5 ಸಾವಿರಕ್ಕಿಂತ ಕಡಿಮೆ ಮತಗಳಿಂದ ಸೋಲು ಅನುಭವಿಸಿದ ಕ್ಷೇತ್ರಗಳಲ್ಲೂ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂಬ
ಲೆಕ್ಕಾಚಾರವಿದೆ ಎನ್ನಲಾಗಿದೆ. 

ಇಕ್ಕಟ್ಟಿನಲ್ಲಿ ಬಿಎಸ್‌ವೈ: 1983ರಲ್ಲಿ ಮೊದಲ ಬಾರಿ ಶಿಕಾರಿಪುರ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದ್ದ ಅವರು
ನಂತರ ಯಾವತ್ತೂ ಆ ಕ್ಷೇತ್ರವನ್ನು ಬಿಟ್ಟುಕೊಡಲಿಲ್ಲ. ಕ್ಷೇತ್ರದ ಜನ 1999ರಲ್ಲಿ ಸೋಲಿಸಿದರೂ, ಮುಂದೆ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. 75 ವರ್ಷದ ಬಳಿಕ ಚುನಾವಣಾ ರಾಜಕೀಯದಿಂದ ದೂರ  ವಿರಬೇಕೆಂಬ ಬಿಜೆಪಿಯ ಈಗಿನ ಸಿದ್ಧಾಂತದ ಪ್ರಕಾರ ಬಿಎಸ್‌ವೈ ಪಾಲಿಗೆ ಮುಂದಿನ ವರ್ಷದ ವಿಧಾನಸಭಾ ಚುನಾವಣೆ ಕೊನೆಯ ಚುನಾವಣೆ. ಹೀಗಿರುವಾಗ ಇಷ್ಟು ವರ್ಷ ನನ್ನನ್ನು ಬೆಳೆಸಿದ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಹೋಗುವುದು ಹೇಗೆ ಎಂಬುದು ಅವರಿಗಿರುವ ಬೇಸರ ಎನ್ನಲಾಗುತ್ತಿದೆ. 

ವರಿಷ್ಠರ ಪಟ್ಟು: ಆದರೆ, ರಾಜ್ಯದಲ್ಲಿ ಅಧಿಕಾರ ಹಿಡಿಯುವುದನ್ನೇ ಪ್ರಮುಖವಾಗಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ನಾಯಕರು ಮಾತ್ರ ಬಿಎಸ್‌ವೈ ಉತ್ತರ ಕರ್ನಾಟಕದಿಂದ ಸ್ಪರ್ಧಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಕೆಲ ದಿನಗಳ ಹಿಂದೆ ಉತ್ತರ ಕರ್ನಾಟಕದಿಂದ ಸ್ಪರ್ಧಿಸಲು ವರಿಷ್ಠರು ಸೂಚಿಸಿದ್ದಾರೆ. ಪಕ್ಷದ ಹಿತಕ್ಕಾಗಿ ಈ ಸೂಚನೆ ಪಾಲಿಸಲು ಸಿದ್ಧ ಎಂದು ಹೇಳಿದ್ದ ಬಿಎಸ್‌ವೈ , ಬಳಿಕ ಶಿಕಾರಿಪುರದ ಬಗ್ಗೆಯೇ ಒಲವು ವ್ಯಕ್ತಪಡಿಸಿದ್ದರು. “ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ ಶಿಕಾರಿಪುರ ಕ್ಷೇತ್ರ ತೊರೆಯಲು ಸಾಧ್ಯವಿಲ್ಲ’ ಎಂದಿದ್ದರು. ಆದರೆ, ಭಾನುವಾರ ಕೇಂದ್ರ ಸಚಿವ ಹಾಗೂ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌ ಅವರ ದೆಹಲಿ ನಿವಾಸದಲ್ಲಿ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಉತ್ತರ ಕರ್ನಾಟಕದಿಂದಲೇ ಸ್ಪರ್ಧಿಸಬೇಕೆಂದು ವರಿಷ್ಠರು ಮತ್ತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ತೇರದಾಳವೇ ಏಕೆ ಮೊದಲ ಆಯ್ಕೆ?: 2008ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಎಲ್ಲಾ ಕಡೆ ಬಿಜೆಪಿ ಜಯಭೇರಿ ಭಾರಿಸಿತ್ತು. ಆದರೆ, 2013ರಲ್ಲಿ ಬಿಜೆಪಿ ಒಡೆದು ಮೂರು ಹೋಳಾಗಿದ್ದರಿಂದ ಕೇವಲ ಒಂದು ಸ್ಥಾನ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿತ್ತು. ಅದರಲ್ಲೂ ತೇರದಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಿದ್ದು ಸವದಿ ಅವರು 2008ರಲ್ಲಿ ಗೆದ್ದು, 2013ರಲ್ಲಿ ಉಮಾಶ್ರೀ ವಿರುದ್ಧ ಸೋಲು ಅನುಭವಿಸಿದ್ದರು. ಅಲ್ಲದೆ, ಕ್ಷೇತ್ರದಲ್ಲಿ ಅವರಿಗೆ ಒಳ್ಳೆಯ ಹೆಸರಿದೆ. ಇನ್ನು ತೇರದಾಳದಿಂದ ಸ್ಪರ್ಧಿಸಿದರೆ ಅದರ ಪರಿಣಾಮ ಅಕ್ಕಪಕ್ಕದ ಕ್ಷೇತ್ರಗಳಿಗೂ ವ್ಯಾಪಿಸುತ್ತದೆ. ಜತೆಗೆ ಲಿಂಗಾಯತರ ಪ್ರಾಬಲ್ಯವಿರುವ ಬಾಗಲಕೋಟೆ ಮಾತ್ರವಲ್ಲದೆ, ವಿಜಯಪುರ, ಕಲಬುರಗಿ, ಹೈದರಾಬಾದ್‌ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತಿತರ ಜಿಲ್ಲೆಗಳಲ್ಲಿ ಪಕ್ಷಕ್ಕೆ ಅನುಕೂಲವಾಗುತ್ತದೆಂಬ ಕಾರಣಕ್ಕೆ ಅವರು ತೇರದಾಳ ಕ್ಷೇತ್ರದ ಬಗ್ಗೆ ಹೆಚ್ಚು ಒಲವು ಹೊಂದಿದ್ದಾರೆ. ಕ್ಷೇತ್ರ ತ್ಯಾಗ ಮಾಡಲು ಮುಂದಾಗಿರುವ ಸಿದ್ದು ಸವದಿ ಅವರನ್ನು ವಿಧಾನಪರಿಷತ್ತಿಗೆ ಕಳುಹಿಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಉಮಾಶ್ರೀಗೆ ಅಗ್ನಿ ಪರೀಕ್ಷೆ
ಚಿತ್ರರಂಗದಲ್ಲಿ ಸಾಕಷ್ಟು ಸಂಕಷ್ಟ ಅನುಭವಿಸಿದ್ದಾಗಿ ಹೇಳುತ್ತ, “ನಿಮ್ಮ ಸೇವೆಗೆ ಬಂದಿರುವ ನನ್ನ ಬಿಡಬೇಡಿ’ ಎನ್ನುತ್ತಲೇ ತೇರದಾಳಕ್ಕೆ ಬಂದಿದ್ದ ಉಮಾಶ್ರೀ, 2008ರ ಚುನಾವಣೆಯಲ್ಲಿ ಸೋತರೂ ಕ್ಷೇತ್ರ ಬಿಡದೆ ಐದು ವರ್ಷ ಕಾಂಗ್ರೆಸ್‌ ಸಂಘಟನೆಯಲ್ಲಿ ತೊಡಗಿದ್ದರು. 2008ರ ಚುನಾವಣೆಯಲ್ಲಿ ತೇರದಾಳದಲ್ಲಿ ಅಗ್ನಿ ಪರೀಕ್ಷೆ ಇದೆ. ನಿಮ್ಮ ನಂಬಿ ಇಲ್ಲಿಗೆ ಬಂದಿರುವೆ ಎಂದೇ ಪ್ರಚಾರ ಮಾಡಿದ್ದರು. ಆದರೆ, ಬೆಂಗಳೂರಿನಿಂದ ತೇರದಾಳಕ್ಕೆ ಬಂದವರು, ಚುನಾವಣೆಯಲ್ಲಿ ಗೆದ್ದರೆ ಮತ್ತೆ ಬೆಂಗಳೂರಿಗೆ ಹೋಗುತ್ತಾರೆ.
ವಲಸಿಗರಿಗೆ ಮಣೆ ಹಾಕಬೇಡಿ ಎಂದು ಬಿಜೆಪಿ ಪ್ರಚಾರ ನಡೆಸಿತ್ತು. ಹೀಗಾಗಿ ಮೊದಲ ಪ್ರಯತ್ನದಲ್ಲಿ ಉಮಾಶ್ರೀ ಸೋತಿದ್ದರು.

ಮುಂದೆ 2013ರಲ್ಲಿ ಪುನಃ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಉಮಾಶ್ರೀ ಗೆಲುವಿನ ನಗೆ ಬೀರಿದ್ದರು. ಸೋತರೂ ಇಲ್ಲೇ ಇದ್ದಾರೆಂಬ ಅನುಕಂಪ ಒಂದೆಡೆ ಇದ್ದರೆ, ಅಧಿಕಾರದಲ್ಲಿದ್ದ ಬಿಜೆಪಿಯ ಭಿನ್ನಮತ, ಕೆಜೆಪಿಯಿಂದ ಸ್ಪರ್ಧಿಸಿದ್ದ ಬಸವರಾಜ ಬಾಳಿಕಾಯಿ ಅವರು ಪಡೆದ ಮತಗಳಿಂದ ಅಂದು ಸರ್ಕಾರದ ಮುಖ್ಯ ಸಚೇತಕರಾಗಿದ್ದ ಸಿದ್ದು ಸವದಿ ಸೋತಿದ್ದರು. ಕಾಂಗ್ರೆಸ್‌ನಿಂದ ಮೊದಲ ಬಾರಿಗೆ ಗೆದ್ದ ಉಮಾಶ್ರೀ, ಸಚಿವೆಯಾಗಿಯೂ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ಜಿಲ್ಲಾ ಉಸ್ತುವಾರಿ ಸಚಿವೆಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬಿಎಸ್‌ವೈ ಸ್ಪರ್ಧೆ ಹಿಂದಿನ ಮರ್ಮವೇನು?: ತೇರದಾಳದಿಂದ ಬಿಎಸ್‌ವೈ ಸ್ಪರ್ಧಿಸಿದರೆ ಕೇವಲ ತೇರದಾಳ ಒಂದೇ ಕ್ಷೇತ್ರವಲ್ಲ ಅಕ್ಕಪಕ್ಕದ ಕ್ಷೇತ್ರ ಹಾಗೂ ಜಿಲ್ಲೆಯಲ್ಲೂ ಬಿಜೆಪಿಗೆ ಬಲ ಬರಲಿದೆ ಎಂಬುದು ಪಕ್ಷದ ಲೆಕ್ಕಾಚಾರ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು, ಎಲ್ಲಿಂದ ಬೇಕಾದರೂ ಸ್ಪರ್ಧಿಸಬಹುದು. ತೇರದಾಳದಿಂದ ಯಡಿಯೂರಪ್ಪ ಸ್ಪರ್ಧಿಸಲಿದ್ದಾರೆಂಬ ಮಾಹಿತಿ ಕೇಳಿದ್ದೇನೆ. ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲಲು ಸಾಧ್ಯವಿಲ್ಲ. ನಾಲ್ಕು ವರ್ಷಗಳಿಂದ ಕ್ಷೇತ್ರದಲ್ಲಿ ನಾನು ಮಾಡಿರುವ ಕೆಲಸವನ್ನೂ ಜನರು ನೋಡಿದ್ದಾರೆ. ಕ್ಷೇತ್ರದ ಪ್ರತಿ ಹಳ್ಳಿಗೂ ಸರ್ಕಾರದ ಸೌಲಭ್ಯ ಕಲ್ಪಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿ 50 ಸಾವಿರಕ್ಕೂ ಹೆಚ್ಚು ಮತಗಳಿಂದ ಕಾಂಗ್ರೆಸ್‌ ತೇರದಾಳದಲ್ಲಿ ಗೆಲ್ಲಲಿದೆ.
ಉಮಾಶ್ರೀ, ಜಿಲ್ಲಾ ಉಸ್ತುವಾರಿ ಸಚಿವೆ

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.