ಪ್ರಾಣಿ ಕ್ರೌರ್ಯ ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲೂ ಟಾಸ್ಕ್ ಪೋರ್ಸ್ ಕಮಿಟಿ: ಪ್ರಭು ಚವ್ಹಾಣ್


Team Udayavani, Feb 22, 2022, 6:04 PM IST

ಪ್ರಾಣಿ ಕ್ರೌರ್ಯ ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲೂ ಟಾಸ್ಕ್ ಪೋರ್ಸ್ ಕಮಿಟಿ: ಪ್ರಭು ಚವ್ಹಾಣ್

ಬೆಂಗಳೂರು: ಪೂಜನೀಯ ಗೋಮಾತೆಯನ್ನು ಕೊಂದು ಅಕ್ರಮ‌ ಕಸಾಯಿಖಾನೆಗಳನ್ನು ತೆರೆದು ಗೋವುಗಳ ಮಾಂಸ ಸಾಗಾಣಿಕೆ ಮತ್ತು ಶೇಖರಣೆ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನಹ ಜಾರಿಗೆ ತಂದು ಪ್ರಾಣಿ ಕ್ರೌರ್ಯ ತಡೆಗಟ್ಟಲು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳು ಮತ್ತು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯರುಗಳನ್ನೊಳಗೊಂಡ ವಿಶೇಷ ಕಾರ್ಯಪಡೆ (ಟಾಸ್ಕ್ ಪೋರ್ಸ್ ಕಮಿಟಿ) ಸ್ಥಾಪಿಸಲು ಚಿಂತಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವರಾದ ಪ್ರಭು ಬಿ.ಚವ್ಹಾಣ್ ತಿಳಿಸಿದರು.

ವಿಕಾಸಸೌಧದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ಸರ್ವ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಅನಧಿಕೃತವಾಗಿ ಕಸಾಯಿ ಖಾನೆಗಳನ್ನು ತೆರೆದು ಪ್ರಾಣಿಗಳನ್ನು ವಧೆ ಮಾಡುತ್ತಿರುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಟಾಸ್ಕ್ ಪೋರ್ಸ್ ಕಮಿಟಿ ಸ್ಥಾಪಿಸುವುದರಿಂದ ಪ್ರಾಣಿ ಕ್ರೌರ್ಯ ತಡೆಗಟ್ಟಲು ಸಾಧ್ಯವಾಗುತ್ತದೆ. ಇದರಿಖದ ಮೂಕ ಪ್ರಾಣಿಗಳನ್ನು ರಕ್ಷಣೆ ಜತೆಗೆ ಕಸಾಯಿಖಾನೆಗೆ ಸಾಗಿಸುವುದನ್ನು ತಡೆಯುವುದಾಗಿದೆ ಎಂದು ಅಭಿಪ್ರಾಯಿಸಿದರು.

ಅನಧಿಕೃತವಾಗಿ ಜಾನುವಾರುಗಳ ಸಾಗಾಣಿಕೆ ಮತ್ತು ಶೇಖರಣೆ ಸಂಬಂಧ ಪ್ರಕರಣಗಳಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ಪ್ರತಿ ವಾದಿಯನ್ನಾಗಿ ನ್ಯಾಯಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ವಕೀಲರುಗಳನ್ನು ಪ್ರತಿ ಜಿಲ್ಲೆಯಲ್ಲೂ ನೇಮಕ ಮಾಡಿಕೊಳ್ಳಲಾಗಿದೆ. ಹಲವು ವರ್ಷಗಳಿಂದ ಜಿಲ್ಲಾ ಪ್ರಾಣಿ ದಯಾ ಸಂಘದ ಸಮಿತಿಗಳು ರಚನೆಯಾಗಿರುವುದಿಲ್ಲ. ಅವುಗಳನ್ನು ಪುನರ್ ರಚನೆ ಮಾಡಿ ಹೊಸ ಸದಸ್ಯರುಗಳನ್ನು ನೇಮಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಇದೇ ವೇಳೆ ತಿಳಿಸಿದರು‌.

ಈಗಾಗಲೇ ರಾಜ್ಯದ 25 ಜಿಲ್ಲೆಗಳಲ್ಲಿ ಜಿಲ್ಲೆಗೊಂದು ಸರ್ಕಾರಿ ಗೋಶಾಲೆಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೂಳಿದ ಜಿಲ್ಲೆಗಳಲ್ಲಿ ಗೋಶಾಲೆಗೆ ಜಾಗ ಗುರ್ತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶಾಲೆಗಳಲ್ಲಿ ಮಕ್ಕಳಿಗೆ ಪ್ರಾಣಿ  ಆರೈಕೆ ಮತ್ತು ಪ್ರಾಣಿ ಕಲ್ಯಾಣದ ಬಗ್ಗೆ ಅರಿವು ಮೂಡಿಸಲು ಪಠ್ಯಕ್ರಮದಲ್ಲಿ ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರತಿ ಶಾಲೆಗಳಲ್ಲೂ ಪ್ರಾಣಿ ಆರೈಕೆ ಮತ್ತು ಕಲ್ಯಾಣ ಕ್ಲಬ್ ಸ್ಥಾಪಿಸಿ, ಮಕ್ಕಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಪ್ರಭು ಚವ್ಹಾಣ್ ಹೇಳಿದರು.

ಬೆಂಗಳೂರಿನಲ್ಲಿ ಇತ್ತಿಚೆಗೆ ನಡೆದ ಬೀದಿ ನಾಯಿ ಮೇಲೆ ಕಾರ್ ಹತ್ತಿಸಿ ಸಾಯಿಸಿದ ಪ್ರಕರಣದಲ್ಲಿ ಬಂಧಿತರಾದವರು ಕಡಿಮೆ ದಂಡ ಪಾವತಿಸಿ, ಬಿಡುಗಡೆಯಾಗಿದ್ದಾರೆ. ಇಂತಹ ಪ್ರಕರಣಗಳು ಮರುಕಳುಹಿಸುವುದನ್ನು ಹಾಗೂ ಪ್ರಾಣಿ ಕ್ರೌರ್ಯ ತಡೆಗಟ್ಟಲು ಇಂತಹ ಪ್ರಕರಣಗಳಲ್ಲಿ ಬಂಧಿತರಾದವರಿಗೆ ರೂ.50 ಸಾವಿರ ದಂಡ‌ ಹಾಗೂ 2 ವರ್ಷ ಜೈಲು ಶಿಕ್ಷೆ ವಿಧಿಸುವ ಕುರಿತು ಸದಸ್ಯರಿಂದ ಕೇಳಿ ಬಂದ ಅಭಿಪ್ರಾಯಕ್ಕೆ ಸಂಬಂಧಿಸಿದಂತೆ ಸಚಿವ ಪ್ರಭು ಚವ್ಹಾಣ್ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ  ಮಂಡಳಿಯ ನಾಮನಿರ್ದೇಶಿತ ಸದಸ್ಯರುಗಳನ್ನು ಅಭಿನಂದಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ.ಫಾಹೀಮ್, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯ ನಿರ್ದೇಶಕ ಮಂಜುನಾಥ್ ಪಾಳೆಗಾರ್ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.