ಶಿಕ್ಷಕರ ನೇಮಕಾತಿ ಪರೀಕ್ಷೆ ಕೀ ಉತ್ತರ ಬಿಡುಗಡೆ
Team Udayavani, Jun 19, 2019, 3:00 AM IST
ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಯ (6ರಿಂದ8ನೇ ತರಗತಿ) ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಅಭ್ಯರ್ಥಿಗಳು ಜೂ.25ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಇಲಾಖೆ ವೆಬ್ಸೈಟ್ http://schooleducation.kar.nic.in ನಲ್ಲಿ ಮಂಗಳವಾರ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪತ್ರಿಕೆ-1 ಮತ್ತು 2ರ ಕೀ ಉತ್ತರಗಳನ್ನು ಪ್ರಕಟಿಸಿದೆ.
ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳಿದ್ದಲ್ಲಿ ಆನ್ಲೈನ್ ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬಹುದು. ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುತ್ತದೆ. ಜರ್ನಲ್, ನಿಯತಕಾಲಿಕೆಗಳು, ವೈಯಕ್ತಿಕ ಪ್ರಕಟಣೆಗಳು, ಗೈಡ್ಸ್ ಮತ್ತು ಅಂತರ್ಜಾಲ ಮೂಲಗಳು (ವಿಕಿಪೀಡಿಯಾ, ಗೂಗಲ್) ಹಾಗೂ ಪತ್ರಿಕಾ ಲೇಖನಗಳನ್ನು ಪೂರಕ ದಾಖಲೆಗಳೆಂದು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಗಳು ಒಂದು ಪ್ರಶ್ನೆಗೆ ಒಂದು ಬಾರಿ ಮಾತ್ರ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಜೂ.25ರ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.