ಸ್ವಂತ ಜಿಲ್ಲೆಗೆ ವರ್ಗಾವಣೆಗೆ ಶಿಕ್ಷಕರ ಆಗ್ರಹ
Team Udayavani, Jun 2, 2022, 8:55 PM IST
ಬೆಂಗಳೂರು: ಶಿಕ್ಷಕರು ತಮ್ಮ “ಸೇವಾವಧಿಯಲ್ಲಿ ಒಂದು ಬಾರಿ ಸ್ವಂತ ಜಿಲ್ಲೆಗೆ ವರ್ಗಾವಣೆ’ ಹೊಂದಲು ಅವಕಾಶ ಮಾಡಕೊಡುವಂತೆ ಒತ್ತಾಯಿಸಿ ನೂರಾರು ಪ್ರಾಥಮಿಕ ಶಾಲಾ ಶಿಕ್ಷಕರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದರು. ಈ ವರ್ಷ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಸಾಮಾನ್ಯವಾಗಿ 3ರಿಂದ 5 ವರ್ಷ ಒಂದೇ ಕಡೆ ಸೇವೆ ಸಲ್ಲಿಸಿದ ಶಿಕ್ಷಕರಿಗೆ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅರ್ಹರೆಂಬ ನಿಯಮಗಳಿವೆ. ಆದರೆ, 10, 15 ಮತ್ತು 20 ವರ್ಷ ಒಂದೇ ಕಡೆ ಸೇವೆ ಸಲ್ಲಿಸುತ್ತಿದ್ದರೂ ತಮ್ಮ ಸ್ವಂತ ಜಿಲ್ಲೆಗಳಿಗೆ ವರ್ಗಾವಣೆ ಹೊಂದಲು ಸರ್ಕಾರದ ವರ್ಗಾವಣೆ ನಿಯಮಗಳು ಸಹಕರಿಸುತ್ತಿಲ್ಲ ಎಂದು ತಮ್ಮ ಅಳಲು ವ್ಯಕ್ತಪಡಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಈಗಿನ ವರ್ಗಾವಣೆ ನಿಯಮದ ಪ್ರಕಾರ ಯಾವ ತಾಲ್ಲೂಕಿನಲ್ಲಿ ಶೇ.25ಕ್ಕಿಂತ ಹೆಚ್ಚಿನ ಶಿಕ್ಷಕರ ಖಾಲಿ ಹುದ್ದೆಗಳು ಇರುವಂತಹ ತಾಲ್ಲೂಕಿನಲ್ಲಿ ವರ್ಗಾವಣೆಗೆ ಅವಕಾಶವೇ ಇಲ್ಲ. ಸರ್ಕಾರವು ವರ್ಗಾವಣೆ ಮಾಡಿದರೂ ಈ ನಿಯಮದಿಂದ ನಮಗೆ ವರ್ಗಾವಣೆ ಭಾಗ್ಯ ಲಭಿಸದೆ ಹಲವಾರು ವರ್ಷಗಳಿಂದ ವರ್ಗಾವಣೆಯಿಂದ ವಂಚಿತರಾಗಿ ಪರದಾಡುತ್ತಿದ್ದೇವೆ ಎಂದು ತಿಳಿಸಿದರು.
ಹಲವಾರು ಶಿಕ್ಷಕರು ಬೇರೆ ಬೇರೆ ದೂರದ ಜಿಲ್ಲೆಗಳಿಂದ ಬಂದು ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಗಂಡ, ಹೆಂಡತಿ, ಮಕ್ಕಳು, ತಂದೆ-ತಾಯಿಗಳು ಎಲ್ಲರೂ ಬೇರೆ ಬೇರೆ ಕಡೆ ಜೀವನ ನಡೆಸುವಂತಾಗಿದೆ. ಮತ್ತಷ್ಟು ಪ್ರಕರಣಗಳಲ್ಲಿ ವರ್ಗಾವಣೆಯ ವಿಚಾರ ಕುಟುಂಬ ಕಲಹಗಳಾಗಿ ಮಾರ್ಪಾಡಾಗಿವೆ. ಗಂಡ-ಹೆಂಡತಿ ವಿಚ್ಛೇದನವಾಗುವ ಮಟ್ಟ ತಲುಪಿವೆ. ಒಂದೆಡೆ ಕುಟುಂಬದಲ್ಲಿ ಶಾಂತಿಯುತವಾಗಿಲ್ಲ, ಮತ್ತೂಂದೆಡೆ ಶಾಲೆಗಳಲ್ಲಿಯೂ ನೆಮ್ಮದಿಯಂದ ವೃತ್ತಿ ನಿರ್ವಹಿಸಲಾಗದೆ. ಮಾನಸಿಕವಾಗಿ ಒದ್ದಾಡುವಂತಾಗಿದೆ. ಆದ್ದರಿಂದ “ಸೇವಾವಧಿಯಲ್ಲಿ ಒಂದು ಬಾರಿ ಸ್ವಂತ ಜಿಲ್ಲೆಗೆ ವರ್ಗಾವಣೆ’ ಹೊಂದಲು ಅವಕಾಶ ಮಾಡಕೊಡುವಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
MUST WATCH
ಹೊಸ ಸೇರ್ಪಡೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.