ನಕಲಿ ಎನ್ಜಿಒಗಳ ಪತ್ತೆಗೆ ತಂಡ ರಚನೆ
Team Udayavani, Dec 24, 2019, 3:06 AM IST
ವಿಜಯಪುರ: ರಾಜ್ಯದಲ್ಲಿ ನಕಲಿ ಎನ್ಜಿಒಗಳ ಪತ್ತೆಗೆ ವಿಶೇಷ ತಂಡ ರಚಿಸಿ ಸಮೀಕ್ಷೆ ನಡೆಸಲಾಗುತ್ತದೆ. ಇದಕ್ಕೆ ನಾನೇ ನೇತೃತ್ವ ವಹಿಸುತ್ತೇನೆ. ನಕಲಿ ಸಂಸ್ಥೆ ಎಂದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ನನ್ನ ಇಲಾಖೆಯಲ್ಲಿ ಎಲ್ಲವೂ ಸುವ್ಯವಸ್ಥಿತ ವಾಗಿ ನಡೆಯಬೇಕು. ಇದಕ್ಕಾಗಿ ಅಧಿ ಕಾರಿಗಳೊಂದಿಗೆ ನಿರಂತರ ಸಭೆ ನಡೆಸುತ್ತಿದ್ದೇನೆ. ಅಂಗನವಾಡಿ ಗಳಲ್ಲಿ ದಾಖಲೆ ಪರಿಶೀಲನೆಗೆ ಬಯೋಮೆಟ್ರಿಕ್ ತರುವ ಯೋಚನೆಯಯಿದೆ.
ಸರ್ಕಾರ ಪ್ರತಿ ಅಂಗನವಾಡಿ ಕೇಂದ್ರವನ್ನು ಹೈಟೆಕ್ ರೂಪಕ್ಕೆ ಪರಿವರ್ತಿಸುವ ಕೆಲಸಕ್ಕೆ ಮುಂದಾಗಿದೆ ಎಂದರು. ರಾಜ್ಯದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ತಡೆಗೆ ವ್ಯವಸ್ಥಿತ ಕಾನೂನು ರಚಿಸಲು ಗೃಹ, ಶಿಕ್ಷಣ, ಆರೋಗ್ಯ ಇಲಾಖೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದೆ.
ಜಿಲ್ಲಾ ಪ್ರವಾಸದ ಬಳಿಕ ಈ ಕುರಿತು ವಿಶೇಷ ಕಾನೂನು ರೂಪಿಸಲಾಗುವುದು. ಸಂಪುಟ ವಿಸ್ತರಣೆ ವೇಳೆ ಹಾಲಿ ಸಚಿವರ ಬದಲಾವಣೆ ಬಗ್ಗೆ ಮಾಹಿತಿ ಇಲ್ಲ. ಪಕ್ಷದ ಹೈಕಮಾಂಡ್ ಈ ಕುರಿತು ತೀರ್ಮಾ ನಿಸುತ್ತದೆ. ಆಕಾಂಕ್ಷಿಗಳು ಹೆಚ್ಚಾಗಿರುವ ಕಾರಣ ಸಿಎಂ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Contracter Case: ಸಚಿನ್ ಪಾಂಚಾಳ್ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ
ಪೊಲೀಸ್ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.