![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 11, 2019, 3:00 AM IST
ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಅಧಿಕೃತವಾಗಿ ಜೂ.10ರಿಂದ ಆರಂಭವಾಗಬೇಕಿತ್ತು. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಸೋಮವಾರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ.
ಶಿಕ್ಷಕರ ವರ್ಗಾವಣೆಗಾಗಿಯೇ ಪ್ರತ್ಯೇಕ ಸಾಫ್ಟ್ವೇರ್ ಅಭಿವೃದ್ಧಿ ಪಡಿಸಲಾಗಿದೆ. ಶಿಕ್ಷಕರು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಜೂ.12ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಸೋಮವಾರ(ಜೂ.10) ಶಾಲೆಗಳ ವಲಯದ ವಿವರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರು ಹಾಗೂ ಇ-ಗವರ್ನೆನ್ಸ್ ವಿಭಾಗದಿಂದ ಟಿಡಿಎಸ್ ಮತ್ತು ವರ್ಗಾವಣೆ ತಂತ್ರಾಂಶಕ್ಕೆ ಅಳವಡಿಸಬೇಕಿತ್ತು.
ಹಾಗೆಯೇ ಎಲ್ಲ ಶಿಕ್ಷಕರ ಮಾಹಿತಿ, ವಿವರಗಳನ್ನು ಇಂದೀಕರಿಸಿ, ಅಗತ್ಯ ದೃಢೀಕರಣ ಮಾದರಿಯನ್ನು ಸಲ್ಲಿಸಬೇಕಿತ್ತು. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಇಲಾಖೆಯ ಅಧಿಕಾರಿಗಳು ಸೋಮವಾರ ಇದ್ಯಾವುದನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗಿಲ್ಲ. ಸಮಸ್ಯೆಗೆ ಸಂಬಂಧಿಸಿದಂತೆ ಡಿಡಿಪಿಐ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇಲಾಖೆಯ ಉನ್ನತಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಮಂಗಳವಾರ ಮಧ್ಯಾಹ್ನದೊಳಗೆ ಸಮಸ್ಯೆ ಬಗೆಹರಿಯಲಿದೆ ಎಂದು ಮೂಲಗಳು ತಿಳಿಸಿವೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.