ಸಂದರ್ಭ ಬಂದರೆ ಧರ್ಮ ವಿರೋಧಿಯ ತಲೆ ಕಡಿಯಬೇಕು!
Team Udayavani, Dec 15, 2017, 11:48 AM IST
ಯಾದಗಿರಿ :‘ಸಂದರ್ಭ ಬಂದರೆ ಧರ್ಮ ವಿರೋಧಿಯ ತಲೆ ಕಡಿಯಲು ಸಿದ್ದವಾಗಿರಬೇಕು. ಪ್ರತಿಯೊಬ್ಬ ಹಿಂದು ಮನೆಯಲ್ಲಿ ಖಡ್ಗ, ಲಾಠಿ ಇಟ್ಟುಕೊಳ್ಳಬೇಕು’ಎಂದು ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಪ್ರಚೋದನ ಕಾರಿ ಭಾಷಣ ಮಾಡಿ ವಿವಾದದ ಕಿಡಿ ಹೊತ್ತಿಸಿದ್ದಾರೆ.
ಯಾದಗಿರಿಯಲ್ಲಿ ಗುರುವಾರ ಸಂಜೆ ಶ್ರೀರಾಮಸೇನೆ ನಡೆಸಿದ ವಿರಾಟ್ ಹಿಂದೂ ಸಮಾವೇಶದಲ್ಲಿ ಉಗ್ರ ಭಾಷಣ ಮಾಡಿದ ರಾಜಾ ಸಿಂಗ್ ‘ಪ್ರತೀ ಹಿಂದುವೂ ಆತಂಕವಾದಿಗಳ ವಿರುದ್ಧ ಹೋರಾಟ ಮಾಡಲು ತಲವಾರು ಹಿಡಿಯಬೇಕು. ಅವರ ಒಬ್ಬ ಕಾರ್ಯಕರ್ತನೂ ಉಳಿಯಬಾರದು. ದೇಶಕ್ಕೆ, ಧರ್ಮಕ್ಕೆ ಗೌರವ ಕೊಡದವರಿಗೆ ಬಹಿಷ್ಕಾರ ಹಾಕಿ’ ಎಂದು ಕರೆ ನೀಡಿದರು.
ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೇರಿದಂತೆ ಸಾವಿರಾರು ಶ್ರೀರಾಮ ಸೇನೆ ಕಾರ್ಯಕರ್ತರು ಸಮಾವೇಶದಲ್ಲಿ ಹಾಜರಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಕೈಯಲ್ಲಿ ತಲಾವಾರ್ ಪ್ರದರ್ಶಿಸಿರುವುದು ಕಂಡು ಬಂದಿದೆ.
ಈ ಸಂಬಂಧ ರಾಜಾ ಸಿಂಗ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ವಿಚಾರಣೆ ನಡೆಸುವುದಾಗಿ ಈ ಶಾನ್ಯ ವಲಯ ಐಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಸದಾ ಪ್ರಚೋದನಕಾರಿ ಭಾಷಣ ಮಾಡುವ ರಾಜಾ ಸಿಂಗ್ ವಿರುದ್ಧ 18 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇತ್ತೀಚೆಗೆ ಪದ್ಮಾವತಿ ಚಿತ್ರದ ವಿರುದ್ಧ ಕಿಡಿ ಕಾರಿದ್ದ ರಾಜಾ ಸಿಂಗ್ ಚಿತ್ರ ಬಿಡುಗಡೆಯಾದರೆ ದೇಶವೇ ಹೊತ್ತಿ ಉರಿಯಲಿದೆ ಎಂದು ಗುಡುಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.