ತೆಲಂಗಾಣಕ್ಕೆ ರಾಜ್ಯದಿಂದ 7 ಟಿಎಂಸಿ ನೀರು


Team Udayavani, Sep 2, 2017, 9:41 AM IST

02-RAJYA-11.jpg

ಬೆಂಗಳೂರು: ನೆರೆಯ ತೆಲಂಗಾಣಕ್ಕೆ ಕುಡಿಯುವ ನೀರು ಪೂರೈ ಸಲು ನಾರಾಯಣಪುರ ಹಾಗೂ ಆಲಮಟ್ಟಿ ಜಲಾಶಯದಿಂದ 7 ಟಿಎಂಸಿ ನೀರು ಬಿಡಲು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ (ಟಿಪಿಸಿಸಿ) ಅಧ್ಯಕ್ಷ ಉತ್ತಮ ಕುಮಾರ್‌ ರೆಡ್ಡಿ ನೇತೃತ್ವದ
ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ಈ ಭರವಸೆ ನೀಡಿದ್ದಾರೆ.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಉತ್ತಮಕುಮಾರ್‌ ರೆಡ್ಡಿ ನೇತೃತ್ವದ ನಿಯೋಗ, ತೆಲಂಗಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಹಾಗಾಗಿ ನಾರಾಯಣಪುರ ಹಾಗೂ ಆಲಮಟ್ಟಿ ಜಲಾಶಯದಿಂದ ನಾಗಾರ್ಜುನ ಡ್ಯಾಂಗೆ 15
ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿತು. ಆದರೆ, ಮುಖ್ಯಮಂತ್ರಿಯವರು ಸದ್ಯ 7 ಟಿಎಂಸಿ ನೀರು ಬಿಡುವುದಾಗಿ ಭರವಸೆ ನೀಡಿದರು. ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉತ್ತಮ ಕುಮಾರ್‌ ರೆಡ್ಡಿ, ನಾವು 15 ಟಿಎಂಸಿ ನೀರು ಬಿಡುವಂತೆ ಬೇಡಿಕೆ ಇಟ್ಟಿದ್ದೆವು. ಆದರೆ, ಕರ್ನಾಟಕದಲ್ಲಿ ಸತತ ಏಳು ವರ್ಷಗಳಿಂದ ಬರಗಾಲವಿದೆ. ನಮಗೂ ಕುಡಿಯುವ ನೀರಿನ ಸಮಸ್ಯೆಯಿದೆ. ಮಾನವೀಯತೆ ಆಧಾರದಲ್ಲಿ 7 ಟಿಎಂಸಿ ನೀರು ಬಿಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದರು.

ರಾಜೋಳಿಬಂಡಾ ಯೋಜನೆ ತ್ವರಿತಗೊಳಿಸಿ: ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಗಡಿಭಾಗಗಳಿಗೆ ಹೊಂದಿಕೊಂಡಿರುವ ರಾಜೋಳಿ ಬಂಡಾ ತಿರುವು ಯೋಜನೆ ಕಳೆದ ಆರು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈ ಯೋಜನೆಗೆ ಅಗತ್ಯವಾದ ಹಣವನ್ನು ತೆಲಂಗಾಣವು ಕರ್ನಾಟಕಕ್ಕೆ ನೀಡಿದೆ. ಯೋಜನೆ ಪೂರ್ಣಗೊಂಡರೆ ತೆಲಂಗಾಣದ ಸುಮಾರು 78 ಸಾವಿರ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಸಿಗಲಿದೆ. ಆದರೆ, ಆಂಧ್ರಪ್ರದೇಶ ಈ ಯೋಜನೆಯನ್ನು ವಿರೋಧಿಸುತ್ತಿದೆ. ಕರ್ನಾಟಕ ಸರ್ಕಾರ ಈ ವಿರೋಧವನ್ನು ಲೆಕ್ಕಿಸದೆ ಯೋಜನೆ ಪೂರ್ಣಗೊಳಿಸಲು ಹಾಗೂ ನಾಲೆಗಳನ್ನು ಆಧುನೀಕರಿಸಲು ಮುಂದಾಗಬೇಕು. ಅಗತ್ಯವಾದರೆ ಪೊಲೀಸರ ರಕ್ಷಣೆ ಪಡೆಯಬೇಕು ಎಂದು ಉತ್ತಮ…ಕುಮಾರ್‌ ರೆಡ್ಡಿ ಇದೇ ವೇಳೆ ಸಲಹೆ ನೀಡಿದರು.

ಭೇಟಿ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌, ತೆಲಂಗಾಣ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸತೀಶ್‌ ಜಾರಕಿಹೊಳಿ ಇದ್ದರು. ನಿಯೋಗದಲ್ಲಿ ಉತ್ತಮಕುಮಾರ್‌ ರೆಡ್ಡಿ, ತೆಲಂಗಾಣದ ವಿರೋಧ ಪಕ್ಷದ ನಾಯಕ ಜಾನಾರೆಡ್ಡಿ, ಮುಖಂಡರಾದ ಹನುಮಂತರಾವ್‌, ಚನ್ನಾರೆಡ್ಡಿ, ಶಾಸಕರಾದ ಡಿ.ಕೆ.ಅರುಣಾ, ಟಿ.ಸಂಪತ್‌, ಮಲ್ಲರವಿ ಉಪಸ್ಥಿತರಿದ್ದರು.

ಕರ್ನಾಟಕದಲ್ಲೂ ಕಳೆದ ಏಳು ವರ್ಷಗಳಿಂದ ಬರಗಾಲವಿದೆ. ನಮಗೂ ಕುಡಿಯುವ ನೀರಿನ ಸಮಸ್ಯೆಯಿದೆ. ಈಗಾಗಲೇ ತೆಲಂಗಾಣಕ್ಕೆ 1.8 ಟಿಎಂಸಿ ನೀರು ಬಿಡಲಾಗಿದೆ. ಕುಡಿಯುವ ನೀರಿನ ತೆಲಂಗಾಣದ ಬೇಡಿಕೆಯನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿದ್ದು, ಇನ್ನೂ 5 ಟಿಎಂಸಿ ನೀರು ಬಿಡುಗಡೆ ಮಾಡುತ್ತೇವೆ. ಮುಂದೆ ಮಳೆ ಬಂದು ಜಲಾಶಯಗಳಲ್ಲಿ ನೀರಿನ ಸಂಗ್ರಹ ಹೆಚ್ಚಾದರೆ, ಇನ್ನೂ ಹೆಚ್ಚಿನ ಪ್ರಮಾಣದ ನೀರು ಕೊಡಲಾಗುವುದು. ರಾಜೋಳಿ ಬಂಡಾ ಯೋಜನೆ ಕಾಮಗಾರಿ ಬಗ್ಗೆ ಎರಡೂ ರಾಜ್ಯಗಳ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು. 
ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.