ಪಿಎಚ್‌ಸಿಗಳಲ್ಲಿ ಟೆಲಿ ಮೆಡಿಸಿನ್ ತಂತ್ರಜ್ಞಾನದಡಿ ಚಿಕಿತ್ಸೆ
Team Udayavani, Mar 11, 2017, 8:26 AM IST
ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಮೆಡಿಸಿನ್ ತಂತ್ರಜ್ಞಾನದಡಿ ಗುಣಮಟ್ಟದ ಚಿಕಿತ್ಸೆಯನ್ನು ತ್ವರಿತವಾಗಿ ನೀಡುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವ ಕೆ.ಆರ್.ರಮೇಶ್‌ಕುಮಾರ್ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಇ- ಆರೋಗ್ಯ’ ಕಾರ್ಯಕ್ರಮದಡಿ “ಪಿಎಚ್‌ಸಿ ಮ್ಯಾನೇಜ್
ಮೆಂಟ್ ಇನ್‌ಫರ್ಮೇಶನ್ ಸಿಸ್ಟ್‌ಂ’ಗೆ ಚಾಲನೆ ನೀಡಿ ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದೊಂದಿಗೆ ಹಲವಾರು ಕಾರ್ಯಕ್ರಮಗಳ ಮೂಲಕ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ನಿರಂತರ ಪ್ರಯತ್ನ
ನಡೆಸಲಾಗುತ್ತಿದೆ ಎಂದರು.
ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಸರ್ಕಾರಿ ಆಸ್ಪತ್ರೆ ಸೇವೆ ಅಗತ್ಯವಿದೆ. ಆದರೆ, ಅವರ ನಿರೀಕ್ಷೆ ತಲುಪಲು
ಸಾಧ್ಯವಾಗುತ್ತಿಲ್ಲ. ಹೀಗಾಗಿ, ಖಾಸಗಿ ಆಸ್ಪತ್ರೆ ಮೊರೆ ಹೋಗುವಂತಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ವೆಚ್ಚ ಭರಿಸುವಷ್ಟು
ಆರ್ಥಿಕವಾಗಿ ಶಕ್ತರಾಗಿರುವುದಿಲ್ಲ. ಇಂತಹ ಸಂಕಷ್ಟದ ಸ್ಥಿತಿ ನಿರ್ಮಾಣವಾಗಿರುವಾಗ ನಾನು ಸಚಿವನಾಗಿದ್ದೇನೆ. ಹಾಗಿದ್ದರೂ ಸರ್ಕಾರಿ
ಆಸ್ಪತ್ರೆಗೆ ಬರುವವರಿಗೆ ಉತ್ತಮ ಚಿಕಿತ್ಸೆ ಸಿಗುವ ವಿಶ್ವಾಸ ಮೂಡಿಸಲು ಸಾಧ್ಯವಾದಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ರಾಜ್ಯದ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಗುಣಮಟ್ಟದ ಚಿಕಿತ್ಸೆ ನೀಡಲು ಅವಕಾಶವಿದೆ. ಆದರೆ, ಇದಕ್ಕಾಗಿ ಪೂರಕವಾದ ಉಪಕರಣಗಳನ್ನು ಒದಗಿಸುವಷ್ಟರ ಮಟ್ಟಿಗೆ ಸರ್ಕಾರ ಆರ್ಥಿಕವಾಗಿ ಶಕ್ತವಾಗಿಲ್ಲ
ಎಂದು ಸಚಿವರು ಹೇಳಿದರು.
1000 ಕೇಂದ್ರಗಳಿಗೆ ಟ್ಯಾಬ್ಲೆಟ್: ರಾಜ್ಯದಲ್ಲಿ 2,353 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಸಂಸ್ಥೆಯು ಸದ್ಯ 1000 ಪ್ರಾಥಮಿಕ ಕೇಂದ್ರಗಳಿಗೆ ತಲಾ ಒಂದು ಟ್ಯಾಬ್ಲೆಟ್ ನೀಡಿದೆ. ಉಳಿದ ಕೇಂದ್ರಗಳಿಗೂ ಟ್ಯಾಬ್ಲೆಟ್ ನೀಡಿದರೆ ಎಲ್ಲ ಕೇಂದ್ರಗಳಲ್ಲೂ ಗುಣಮಟ್ಟದ ಸೇವೆ ಒದಗಿಸಲು ಅವಕಾಶವಾಗಲಿದೆ ಎಂದು ತಿಳಿಸಿದರು.
ಒಪ್ಪಂದಕ್ಕೆ ಸಹಿ
ರಾಜ್ಯ ಸರ್ಕಾರ ಹಾಗೂ ಸ್ಯಾಮ್ ಸಂಗ್ ಇಂಡಿಯಾ ಕಂಪನಿ ಜಂಟಿಯಾಗಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳನ್ನು ಉತ್ತಮವಾಗಿ ನಡೆಸಲು ಸಾರ್ವಜನಿಕ- ಖಾಸಗಿ ಸಹಭಾಗಿತ್ವ ಒಪ್ಪಂದಕ್ಕೆ ಸಹಿ ಹಾಕಿವೆ. ಅದರಂತೆ ಸ್ಯಾಮ್‌ಸಂಗ್ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 1000 ಸ್ಯಾಮ್‌ಸಂಗ್ ಐಆರ್‌ಐಎಸ್ ಟ್ಯಾಬ್ಲೆಟ್ ವಿತರಿಸಿದೆ.
ಟ್ಯಾಬ್ಲೆಟ್ ವಿತರಣೆ
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸ್ಯಾಮ್‌ಸಂಗ್ ಇಂಡಿಯಾ ಸಂಸ್ಥೆ
ಸಹಯೋಗದಲ್ಲಿ 1000 ಕೇಂದ್ರಗಳಿಗೆ ಟ್ಯಾಬ್ಲೆಟ್ ವಿತರಣೆಯಾಗಿದೆ. ಪ್ರತಿ ಕೇಂದ್ರದ ತಲಾ ಒಬ್ಬ ಆಶಾ ಕಾರ್ಯಕರ್ತೆ ಹಾಗೂ ಸಹಾಯಕರಿಗೆ ತರಬೇತಿಯನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದರು. ಅತಿ ಹೆಚ್ಚು ನವಜಾತ ಶಿಶುಗಳು ಸಾವನ್ನಪ್ಪುವ ಪ್ರದೇಶಗಳು ಹಾಗೂ ಮಲೇರಿಯಾ, ಡೆಂ ಸೇರಿ ಇತರೆ ಸಮಸ್ಯೆಗಳು ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಸ್ಥಳಗಳನ್ನು ಗುರುತಿಸಿ ಆ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ
ಟ್ಯಾಬ್ಲೆಟ್‌ಗಳನ್ನು ವಿತರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Santhekatte: ಉಡುಪಿಯಿಂದ ಕುಂದಾಪುರ ಕಡೆಗೆ ಸರ್ವಿಸ್ ರಸ್ತೆ ಓಪನ್
Manipal: ಮಣ್ಣಪಳ್ಳ ಕೆರೆ; ಆಕರ್ಷಕ ಜಲಸಿರಿಗೆ ಬೇಕು ಆಸರೆ!
Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!
Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.