Temperature ಹಲವೆಡೆ 42 ಡಿ.ಸೆ. ದಾಟುವ ಆತಂಕ!: ತಾಪಮಾನದ ನಡುವೆಯೂ ಮಳೆ?
Team Udayavani, Apr 5, 2024, 6:30 AM IST
ಬೆಂಗಳೂರು: ರಾಜ್ಯದಲ್ಲಿ ತಾಪಮಾನದ ತೀವ್ರತೆಗೆ ಜನ ಸಾಮಾನ್ಯರು ಕಂಗೆಟ್ಟಿದ್ದು, ಎಪ್ರಿಲ್ ಎರಡನೇ ವಾರದಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶವು 42 ಡಿಗ್ರಿ ಸೆಲ್ಸಿಯಸ್‌ನ ಗಡಿ ದಾಟುವ ಲಕ್ಷಣ ಗೋಚರಿಸಿದೆ. ಮುಂದಿನ ವಾರ ಹಲವು ಜಿಲ್ಲೆಗಳಿಗೆ ಉಷ್ಣ ಅಲೆಯ ಮುನ್ನೆಚ್ಚರಿಕೆ ಘೋಷಿಸುವ ಸಾಧ್ಯತೆಗಳಿವೆ. ಮತ್ತೂಂ ದೆಡೆ ಕಾಲರಾ ಸಹಿತ ಬೇಸಗೆಯಲ್ಲಿ ತಲೆದೋರುವ ವಿವಿಧ ಕಾಯಿಲೆ ಗಳು ಕೂಡ ಉಲ್ಬಣಿಸುತ್ತಿರುವುದು ಆತಂಕಕ್ಕೀಡು ಮಾಡಿದೆ.
ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಬಳ್ಳಾರಿ, ಗದಗ ಜಿಲ್ಲೆಗಳಿಗೆ ಶನಿವಾರದವರೆಗೆ ಉಷ್ಣ ಅಲೆ ಘೋಷಿಸಲಾಗಿದೆ.
ತಾಪಮಾನದ ನಡುವೆಯೂ ಮಳೆ?
ದಕ್ಷಿಣ ಒಳನಾಡಿನ ಒಂದೆರಡು ಕಡೆ ಗುರುವಾರ ಮಳೆಯಾಗಿದೆ. ಎ. 6ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಹಾಗೂ ಎ. 7ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್ ಜಿÇÉೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಎ. 10ರ ವರೆಗೆ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೇಸಗೆ ಕಾಲದಲ್ಲಿ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆ ಯಾಗಿ ಕೆಲವು ಕಾಯಿಲೆಗಳು ಉಲ್ಬಣಿಸುತ್ತವೆ. ರಾಜ್ಯ ದಲ್ಲಿ ಕಾಲರಾದಂತಹ ಕಾಯಿಲೆಗಳ ಪ್ರಕರಣಗಳು ಸದ್ಯ ಏರಿಕೆ ಯಾಗಿಲ್ಲ. ಆದರೂ ಜನ ಸಾಮಾನ್ಯರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು.
-ಡಿ. ರಂದೀಪ್, ಆಯುಕ್ತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಬೇಸಗೆ ಕಾಯಿಲೆಗಳ ಬಗ್ಗೆ ಇರಲಿ ಎಚ್ಚರ
ಬಿಸಿಲಿನ ಬೇಗೆಯ ನಡುವೆ ಬೇಸಗೆ ಯಲ್ಲಿ ಉಲ್ಬಣಿಸುವ ಕಾಲರಾದಂತಹ ಕಾಯಿಲೆಗಳ ಭೀತಿ ಹೆಚ್ಚಾಗಿದೆ. ನಗರದಲ್ಲಿ ಇತ್ತೀಚೆನ ದಿನಗಳಲ್ಲಿ ಕಾಲರಾ ಪ್ರಕರಣಗಳು ಏರಿಕೆಯಾಗುವ ಲಕ್ಷಣ ಗೋಚರಿಸಿದೆ. ತಾಪಮಾನದ ಪ್ರಖರತೆಗೆ ಪಿತ್ತ, ತಲೆ ಸುತ್ತುವಿಕೆ, ಸನ್‌ಸ್ಟ್ರೋಕ್, ವಾಂತಿಭೇದಿ ಉಲ್ಬಣಗೊಳ್ಳುವ ಸಾಧ್ಯತೆಗಳಿವೆ. ಮಕ್ಕಳಲ್ಲಿ ಕಣ್ಣು ಉರಿ, ವಾಂತಿ ಭೇದಿ, ಫುಡ್ ಪಾಯಿಸನ್, ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿ ವಿವಿಧ ಕಾಯಿಲೆಗಳು ಕಂಡು ಬಂದಿದ್ದು, ಆಸ್ಪತ್ರೆ ಮೊರೆ ಹೋಗುತ್ತಿದ್ದಾರೆ ಎಂದು ಆರೋಗ್ಯ ತಜ್ಞರು ಹಾಗೂ ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.