ಜೂ. 1ರಿಂದ ದೇಗುಲ ದರ್ಶನ ; ಮಹತ್ವದ ತೀರ್ಮಾನ; ಸಾಮಾಜಿಕ ಅಂತರ, ಶುಚಿತ್ವ ಕಡ್ಡಾಯ
Team Udayavani, May 27, 2020, 7:00 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಲಾಕ್‌ಡೌನ್‌ನಿಂದ ಬಾಗಿಲು ಹಾಕಿದ್ದ ರಾಜ್ಯದ ದೇವಾಲಯಗಳಲ್ಲಿ ಜೂನ್ 1ರಿಂದ ಪೂಜೆ, ಸೇವೆಗಳು, ಭಕ್ತರಿಗೆ ದೇವರ ದರ್ಶನ ಭಾಗ್ಯ ಸಿಗಲಿದೆ.
ಆದರೆ ಸಾಮಾಜಿಕ ಅಂತರ, ನೈರ್ಮಲ್ಯ ಕಾಪಾಡಿಕೊಳ್ಳಲು ಸೂಚಿಸಲಾಗಿದೆ.
ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಧರ್ಮಾದಾಯ ದತ್ತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ‘ಉದಯವಾಣಿ’ಗೆ ಪ್ರತಿಕ್ರಿಯಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಮತ್ತು ಇತರ ದೇವಾಲಯಗಳಲ್ಲಿ ಜೂ. 1ರಿಂದ ಪೂಜೆ, ಸೇವಾದಿಗಳಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ.
ಹಾಗೆಯೇ ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲನೆ, ನೈರ್ಮಲ್ಯ, ಶುಚಿತ್ವ ಕಾಪಾಡಿಕೊಳ್ಳಬೇಕೆಂದು ಆದೇಶಿಸಲು ನಿರ್ಧರಿಸಲಾಗಿದೆ. ಅಗತ್ಯ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಆಂಧ್ರಪ್ರದೇಶದ ತಿರುಮಲ ಕರ್ನಾಟಕ ಛತ್ರಕ್ಕೆ ಸೇರಿದ ಸ್ಥಳಗಳಲ್ಲಿ ನೂತನ ವಸತಿಗೃಹಗಳ ನಿರ್ಮಾಣಕ್ಕೆ 200 ಕೋ.ರೂ. ಅನುದಾನ ಮಂಜೂರು ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ಈ ಮಧ್ಯೆ ರಾಜ್ಯ ದಲ್ಲಿ ಜೂ. 1ರಿಂದ ಹೊಟೇಲ್‌ಗಳೂ ಆರಂಭವಾಗುವ ಸಾಧ್ಯತೆ ಇದೆ. ಈ ಸಂಬಂಧ ಹೊಟೇಲ್ ಮಾಲಕರ ಸಂಘದ ಪ್ರತಿನಿಧಿಗಳು ಮುಖ್ಯಮಂತ್ರಿ ಜತೆ ಚರ್ಚಿಸಿದ್ದು, ಈ ಬಗ್ಗೆ ಆಶಾಭಾವ ವ್ಯಕ್ತಪಡಿಸಿದ್ದಾರೆ.
ಆನ್‌ಲೈನ್ ಸೇವೆಗೆ ಚಾಲನೆ
ರಾಜ್ಯದ ಮುಜರಾಯಿ ಇಲಾಖೆಯ 52 ಪ್ರಮುಖ ದೇವಾಲಯಗಳಲ್ಲಿ ಇ- ಕಾಣಿಕೆ ಮತ್ತು ಸೇವೆಗಳ ಆನ್‌ಲೈನ್ ಬುಕ್ಕಿಂಗ್ ಸೇವೆಯ ಆ್ಯಪ್ ಅನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಈ ಮೂಲಕ ಜನರು ಇದ್ದಲ್ಲಿಂದಲೇ ಪೂಜೆಗಳನ್ನು ಬುಕ್ ಮಾಡಿಸಬಹುದಾಗಿದೆ.
ಎಲ್ಲೆಲ್ಲಿ ಆನ್‌ಲೈನ್ ಸೇವೆ?
ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕಾ, ಮಂದಾರ್ತಿ ದುರ್ಗಾ ಪರಮೇಶ್ವರಿ, ಪುತ್ತೂರಿನ ಮಹಾಲಿಂಗೇಶ್ವರ, ಪೊಳಲಿಯ ರಾಜರಾಜೇಶ್ವರೀ, ಮೈಸೂರಿನ ಚಾಮುಂಡೇಶ್ವರಿ, ನಂಜನಗೂಡಿನ ಶ್ರೀಕಂಠೇಶ್ವರ, ಕನಕಪುರ ಕಬ್ಟಾಳಮ್ಮ, ಯಡಿಯೂರು ಸಿದ್ದಲಿಂಗೇಶ್ವರ, ಬೇಲೂರಿನ ಚೆನ್ನಕೇಶವಸ್ವಾಮಿ, ಶ್ರೀರಂಗ ಪಟ್ಟಣದ ರಂಗನಾಥಸ್ವಾಮಿ, ಯಳಂದೂರಿನ ಬಿಳಿಗಿರಿ ರಂಗನಾಥಸ್ವಾಮಿ, ಸವದತ್ತಿಯ ರೇಣುಕಾ ಯಲ್ಲಮ್ಮ, ಶಿವಗಂಗೆಯ ಗಂಗಾಧರೇಶ್ವರ, ಗಂಜಾಂನ ನಿಮಿಷಾಂಬಾ, ಭಾಗಮಂಡಲದ ಭಗಂಡೇಶ್ವರ, ಮಡಿಕೇರಿಯ ಓಂಕಾರೇಶ್ವರ, ಮೈಲಾರ ಲಿಂಗೇಶ್ವರಸ್ವಾಮಿ, ಹಂಪಿಯ ವಿರೂಪಾಕ್ಷೇಶ್ವರ, ಘಾಟಿ ಸುಬ್ರಹ್ಮಣ್ಯ ದೇವಸ್ಥಾನ.
ಸಪ್ತಪದಿ ಯೋಜನೆಗೂ ಅವಕಾಶ
ಗರಿಷ್ಠ 50 ಮಂದಿ ಪಾಲ್ಗೊಳ್ಳುವಂತೆ ಮದುವೆಗಳಿಗೆ ಸರಕಾರ ಅವಕಾಶ ನೀಡಿದ್ದು, ಆ ಮಿತಿಯೊಳಗೆ ‘ಸಪ್ತಪದಿ’ ಯೋಜನೆಗೂ ಚಾಲನೆ ನೀಡಲು ಗಂಭೀರ ಚಿಂತನೆ ನಡೆದಿದೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ‘ಸಪ್ತಪದಿ’ ಈ ಬಗ್ಗೆ ಚರ್ಚೆಯಾಗಿದೆ.
ಒಂದೇ ದಿನ ಮುಹೂರ್ತವಿದ್ದರೆ ಬೇರೆ ಬೇರೆ ಸಮಯದಲ್ಲಿ ತಲಾ 25 ಅತಿಥಿಗಳಂತೆ 2 ಜೋಡಿ ಇಲ್ಲವೇ ತಲಾ 16 ಅತಿಥಿಗಳಂತೆ ಮೂರು ಜೋಡಿಗಳ ವಿವಾಹ ನಡೆಸುವ ಬಗ್ಗೆಯೂ ಮಾತುಕತೆ ನಡೆದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.