ತಾತ್ಕಾಲಿಕ ಪ್ರವೇಶಪತ್ರ, ತಿದ್ದುಪಡಿಗೆ ಅವಕಾಶ
Team Udayavani, Dec 26, 2018, 7:04 AM IST
ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳಿಂದ ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳ ತಾತ್ಕಾಲಿಕ ಪ್ರವೇಶ ಪತ್ರ ಡೌನ್ಲೋಡ್ ಹಾಗೂ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಶಾಲೆಯ ಮುಖ್ಯಸ್ಥರು ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತ ಅಭ್ಯರ್ಥಿಗಳ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಪರಿಶೀಲನೆ ನಡೆಸಬೇಕು. ಅಗತ್ಯ ತಿದ್ದುಪಡಿಗಳು ಇದ್ದರೆ ಆನ್ಲೈನ್ ಮೂಲಕವೇ ಅಪ್ಡೇಟ್ ಮಾಡಲು ಅವಕಾಶವಿದೆ.
ರಾಜ್ಯದ 14,796 ಪ್ರೌಢಶಾಲೆಗಳ ಪೈಕಿ 7,328 ಶಾಲೆಗಳು ಈಗಾಗಲೇ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಂಡಿದ್ದು, 7,468 ಶಾಲೆಗಳು ತಾತ್ಕಾಲಿಕ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳಲು ಬಾಕಿ ಇವೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಳಾ ತಿಳಿಸಿದ್ದಾರೆ. ಮಂಡಳಿಯ ಜಾಲತಾಣ http://www.kseeb.kar.nic.inನಲ್ಲಿ ತಂತ್ರಾಂಶ ಲಭ್ಯವಿದೆ. ಈಗಾಗಲೇ ಮೌಲ್ಯಮಾಪನದ ಕಾರ್ಯಕ್ಕೆ ಶಿಕ್ಷಕರ ಮಾಹಿತಿ ಅಪ್ ಲೋಡ್ ಮಾಡು ತ್ತಿರುವ ತಂತ್ರಾಂಶದ ಯೂಸರ್ನೆಮ್ ಹಾಗೂ ಪಾಸ್ವರ್ಡ್ ಬಳಸಿ ತಾತ್ಕಾಲಿಕ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಯ ಹೆಸರು, ತಂದೆ, ತಾಯಿಯ ಹೆಸರು, ಜನ್ಮ ದಿನಾಂಕ, ಲಿಂಗ, ದೈಹಿಕ ಸ್ಥಿತಿ, ಧರ್ಮ, ಫೋಟೋ ಮತ್ತು ಸಹಿ ಇತ್ಯಾದಿ ಅಂಶಗಳನ್ನು
ಸರಿಯಾಗಿ ಪರಿ ಶೀಲಿಸಿ, ತಪ್ಪಿದ್ದಲ್ಲಿ ತಿದ್ದುಪಡಿ ಮಾಡಲು ಅವಕಾಶವಿದೆ. ಪುನರಾವರ್ತಿತ ಅಭ್ಯರ್ಥಿಗಳಿಗೆ ಫೋಟೋ ಮತ್ತು ಸಹಿಯನ್ನು ಮಾತ್ರ ತಿದ್ದುಪಡಿ ಮಾಡಲು ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.