ನೂರು ದಿನದಲ್ಲಿ ಹತ್ತು ಸಾಧನೆ
Team Udayavani, May 25, 2020, 11:04 AM IST
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿ ನೂರು ದಿನ ಪೂರೈಸಿರುವ ಹಿನ್ನೆಲೆಯಲ್ಲಿ ತಾವು ಸಾಧಿಸಿರುವ ಪ್ರಮುಖ ಹತ್ತು ಸಾಧನೆಗಳ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಪ್ರಮುಖವಾಗಿ ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ; ಹೂಳು ತುಂಬಿರುವ ತುಂಗಭದ್ರಾ ಅಣೆಕಟ್ಟೆಗೆ ಸಮಾನಾಂತರವಾಗಿ ನವಲಿ ಎಂಬಲ್ಲಿ ಜಲಾಶಯ ನಿರ್ಮಿಸಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಆಡಳಿತಾತ್ಮಕ ಅನುಮೋದನೆ ನೀಡಿರುವುದು; ಎತ್ತಿನಹೊಳೆ ಯೋಜನೆಯ ಮೊದಲ ಹಂತ ಮುಂದಿನ ಮಳೆಗಾಲ
ಆರಂಭದೊಳಗೆ ಪೂರ್ಣ ಭೂಸ್ವಾಧೀನಕ್ಕಾಗಿ 100 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿರುವುದು ಸಾಧನೆಗಳಲ್ಲಿ ಸೇರಿದೆ ಎಂದು ಪ್ರಕಟಣೆ ತಿಳಿಸಿದೆ.
ಭದ್ರಾ ಮೇಲ್ದಂಡೆ ಯೋಜನೆಗೆ 2021ರ ಮಳೆಗಾಲದ ಒಳಗೆ 60 ಕಿ.ಮೀ. ವರೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಿ ಹಂತಹಂತವಾಗಿ ಯೋಜನೆ ಸಂಪೂರ್ಣಗೊಳಿಸುವ ಸಂಕಲ್ಪ ಮಾಡಲಾಗಿದೆ; ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಜಲಾಶಯದ ಅಣೆಕಟ್ಟು ಎತ್ತರಿಸಲು ನ್ಯಾಯಾಧಿಕರಣದಿಂದ ಆದೇಶವಾಗುವಂತೆ ಪ್ರಯತ್ನಿಸಲಾಗಿದೆ. ಅಲ್ಲದೆ, ಭೂಸ್ವಾಧೀನಕ್ಕಾಗಿ ಏಕರೂ ಪದ ದರ ನಿಗದಿ ಮಾಡಲಾಗಿದೆ. ವಾಣಿ ವಿಲಾಸ ಸಾಗರದಿಂದ ಚಿತ್ರ ದುರ್ಗ ಜಿಲ್ಲೆಯ ಕೆರೆಗಳ ತುಂಬಿಸಲು ಕ್ರಮ ಕೈಗೊಳ್ಳಲಾಗಿದೆ. ಇಲಾಖೆಯಲ್ಲಿ ಯೋಜನೆಗಳಿಗಾಗಿ ಮಾಡುತ್ತಿದ್ದ ವೆಚ್ಚದಲ್ಲಿ ಶಿಸ್ತು ತರುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದು, ಈ ಮೂಲಕ ಹಣ ಪೋಲಾಗುವುದನ್ನು ತಡೆಯಲಾಗುತ್ತಿದೆ. ಸೂಕ್ಷ್ಮ ನೀರಾವರಿ ಮತ್ತು ಪಂಪ್ಸ್, ಮೋಟಾರ್ಸ್ ಗಳ ನಿರ್ವಹಣೆಗಾಗಿ ಹೊಸ ನೀತಿ ಜಾರಿ ಹಾಗೂ ಸಾಮರ್ಥಯವುಳ್ಳ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.