ಅಕ್ಕಿ ಖರೀದಿಗೆ ಶೀಘ್ರವೇ ಟೆಂಡರ್; ವಾರದ ಬಳಿಕವೇ ಸ್ಪಷ್ಟ ಚಿತ್ರಣ
ದರ ಪಟ್ಟಿ ಕುರಿತು ಚರ್ಚಿಸಿ ಟೆಂಡರ್ ಕರೆಯಲು ಸಿಎಂ ಸೂಚನೆ
Team Udayavani, Jun 25, 2023, 7:20 AM IST
ಬೆಂಗಳೂರು:ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿ ವಿತರಣೆಗೆ ಸಂಬಂಧಿಸಿ ಸದ್ಯದಲ್ಲೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ.
ಅಕ್ಕಿ ಗೊಂದಲ ಮುಂದುವರಿದಿರುವ ನಡು ವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಹಣಕಾಸು ಹಾಗೂ ಆಹಾರ ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಶನಿವಾರ ಸಭೆ ನಡೆಸಿದ್ದಾರೆ. ಸರ್ಕಾರಿ ಏಜೆನ್ಸಿಗಳಾದ ಎನ್.ಸಿ.ಸಿ.ಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳು ಸಲ್ಲಿಸಿರುವ ದರ ಪಟ್ಟಿ ಕುರಿತು ಚರ್ಚಿಸಿ ಟೆಂಡರ್ ಕರೆಯುವಂತೆ ಸೂಚನೆ ನೀಡಿದ್ದಾರೆ.
ಸಭೆ ಬಳಿಕ ಮಾತನಾಡಿದ ಸಚಿವ ಕೆ.ಎಚ್. ಮುನಿಯಪ್ಪ ಅವರು, ತಕ್ಷಣವೇ ಟೆಂಡರ್ ಕರೆಯಲು ಸೂಚಿಸಲಾಗಿದೆ. ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಸರ್ಕಾರಿ ಏಜೆನ್ಸಿಗಳು ಹೇಳಿವೆ. ಈ ಹಿಂದೆಯೂ ಇದೇ ಸಂಸ್ಥೆಗಳಿಂದ ಅಕ್ಕಿ ಖರೀದಿಸಲಾಗಿತ್ತು. ಈ ಸಂಸ್ಥೆಗಳು ಅಕ್ಕಿ ಪೂರೈಸಿದ ಬಳಿಕ ವಿತರಣೆ ಮಾಡಲಾಗುವುದು. ಈ ಮೂರು ಸಂಸ್ಥೆಗಳು ನೀಡಿರುವ ದರ ಪಟ್ಟಿ ಸಮಾಲೋಚಿಸಲಾಗಿದೆ ಎಂದಿದ್ದಾರೆ.
ಇದೇ ವೇಳೆ, ರಾಜ್ಯ ಸರ್ಕಾರ ಇದುವರೆಗೆ ನಡೆಸಿದ ಎಲ್ಲಾ ಪ್ರಯತ್ನಗಳಲ್ಲೂ ಅಕ್ಕಿ ಲಭ್ಯತೆ ಬಗ್ಗೆ ಯಾವುದೇ ಸ್ಪಷ್ಟತೆ ಸಿಗದ ಹಿನ್ನೆಲೆಯಲ್ಲಿ 10 ಕೆ.ಜಿ. ಅಕ್ಕಿ ವಿತರಣೆ ಯಾವಾಗ ಎಂಬುದೇ ಗ್ಯಾರಂಟಿ ಇಲ್ಲ.
ಸಿಎಂ ಹೇಳಿದ್ದೇನು?
ಸಭೆಗೂ ಮುನ್ನ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗಾರರ ಜತೆ ಮಾತನಾಡಿ, ಜು.1ರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ. ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ. 2.29 ಲಕ್ಷ ಮೆಟ್ರಿಕ್ ಟನ್ ಎಲ್ಲಿಯೂ ದೊರೆಯುತ್ತಿಲ್ಲ. ಯಾವ ರಾಜ್ಯದಲ್ಲೂ ಪೂರ್ಣ ಪ್ರಮಾಣದ ಅಕ್ಕಿ ದೊರೆಯುತ್ತಿಲ್ಲವಾದ್ದರಿಂದ ಬೇರೆ ಸರ್ಕಾರಿ ಏಜೆನ್ಸಿಗಳಿಂದ ದರ ಪಟ್ಟಿ ಕರೆಯಲಾಗಿದ್ದು, ಮಾತುಕತೆ ನಡೆದಿದೆ ಎಂದರು.
ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಪಡೆಯಲು ಟೆಂಡರ್ ಕರೆಯಬೇಕು. ಅದಕ್ಕೆ ಸಮಯ ತಗಲುತ್ತದೆ. ಜೋಳ, ರಾಗಿ ವಿತರಣೆ 6 ತಿಂಗಳಿಗಾಗುವಷ್ಟಿದೆ. 2 ಕೆಜಿಯಂತೆ ನೀಡಬಹುದು. ಇನ್ನೂ 3 ಕೆಜಿ ಅಕ್ಕಿ ನೀಡಬೇಕಿದೆ. ಇಡೀ ವರ್ಷ ನೀಡುವಷ್ಟು ರಾಗಿ, ಜೋಳ ಲಭ್ಯವಿಲ್ಲ ಎಂದೂ ತಿಳಿಸಿದರು.
ಸಭೆಯಲ್ಲಿ ಏನಾಯ್ತು ?
ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರ ಭೇಟಿ ಬಳಿಕ ನಡೆದ ವಿದ್ಯಮಾನಗಳ ಬಗ್ಗೆ ಈ ಸಭೆಯಲ್ಲಿ ಪರಾಮರ್ಶೆ ನಡೆಯಿತು. ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡುವುದಿಲ್ಲ ಎಂಬುದು ದೃಢಪಟ್ಟಿರುವುದರಿಂದ ಅನ್ಯ ಮಾರ್ಗಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬಹುಪಾಲು ಛತ್ತೀಸ್‌ಗಡದಿಂದ ಅಕ್ಕಿ ಖರೀದಿ ಮಾಡುವ ಸಾಧ್ಯತೆ ಇದೆ. ಪಂಜಾಬ್ ಸರ್ಕಾರವೂ ಅಕ್ಕಿ ಪೂರೈಕೆ ಮಾಡದೇ ಇರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅನ್ನ ಭಾಗ್ಯ ಯೋಜನೆಗೆ ಅಗತ್ಯವಾದ ಹೆಚ್ಚುವರಿ ಅಕ್ಕಿಗೆ ಛತ್ತೀಸ್‌ಗಡ ರಾಜ್ಯ ಮಾತ್ರ ಈಗ ಆಸರೆಯಾಗಿದೆ. ಆದರೆ ನಿರಂತರವಾಗಿ ಇದು ಸಾಧ್ಯವೇ ಎಂಬ ಪ್ರಶ್ನೆ ಉದ್ಭವವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಹಸು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.