![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 9, 2022, 11:33 PM IST
ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಸುಮಾರು 10 ಸಾವಿರ ಶಿಕ್ಷಕರು ಗೈರಾಗಿದ್ದು, ಈ ಪೈಕಿ ಖಾಸಗಿ ಶಾಲಾ ಶಿಕ್ಷಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ಜರಗಿಸುವಂತೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದೆ.
ಎ.23ರಿಂದ ಮೇ 5ರ ವರೆಗೆ ಮೌಲ್ಯಮಾಪನ ನಡೆದಿದೆ. ಈ ಅವಧಿಯಲ್ಲಿ ಗೈರು ಹಾಜರಾಗಿರುವ ಗರ್ಭಿಣಿ, ಬಾಣಂತಿ ಹಾಗೂ ಗಂಭೀರ ಆರೋಗ್ಯ ಸಮಸ್ಯೆ ಇರುವವರನ್ನು ಹೊರತುಪಡಿಸಿ ಉಳಿದವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಈ ಬಾರಿ 73,236 ಶಿಕ್ಷಕರು ನೋಂದಣಿ ಮಾಡಿಕೊಂಡಿದ್ದರು. ಗೈರು ಹಾಜರಾದವರಲ್ಲಿ ಶೇ.50ರಷ್ಟು ಶಿಕ್ಷಕರು ಖಾಸಗಿ ಶಾಲೆಯವರಾಗಿದ್ದು, ಇವರ ಮೇಲೆ ಕ್ರಮ ಕೈಗೊಳ್ಳಲು ಸರಕಾರದ ವತಿಯಿಂದ ಸಾಧ್ಯವಿಲ್ಲ. ಉಳಿದ ಸರಕಾರಿ ಶಾಲೆಯ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳುವಂತೆ ಡಿಡಿಪಿಐಗಳಿಗೆ ಸೂಚನೆ ನೀಡಲಾಗಿದೆ. ಗೈರು ಹಾಜರಾದವರಿಗೆ ದಂಡ ವಿಧಿಸುವುದು ಅಥವಾ ಮುಂದಿನ ವರ್ಷದ ಮೌಲ್ಯಮಾಪನ ಕಾರ್ಯಕ್ಕೆ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ತಿಳಿಸಿದ್ದಾರೆ.
ಶಾಲೆ ರಜೆ ವಿಸ್ತರಿಸುವ ಷಡಕ್ಷರಿ ಮನವಿಗೆ ರುಪ್ಸಾ ಅಸಮಾಧಾನ
ಬೆಂಗಳೂರು: ರಾಜ್ಯದಲ್ಲಿ ಮೇ 16ರಿಂದ ಶಾಲೆಗಳು ಪ್ರಾರಂಭವಾಗುವುದನ್ನು ಮುಂದೂಡಬೇಕು ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವ ಮೂಲಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿಯವರು ಮಕ್ಕಳ ಶಿಕ್ಷಣ ಹಿತಾಸಕ್ತಿಯನ್ನು ಬಲಿಕೊಡುತ್ತಿರುವುದು ದುರುದೃಷ್ಟಕರ ಸಂಗತಿ ಎಂದು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ನಿರ್ವಹಣ ಸಂಘ (ರುಪ್ಸಾ) ಅಸಮಾಧಾನ ವ್ಯಕ್ತಪಡಿಸಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.