124 ಸಿಬ್ಬಂದಿ ನೇಮಕ  ಪ್ರಕರಣ ರಂಗಪ್ಪಗೆ ಕಂಟಕ


Team Udayavani, Jun 27, 2018, 12:53 PM IST

rangappa.jpg

ಬೆಂಗಳೂರು: ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ ಉಲ್ಲಂಘಿಸಿ 124 ಬೋಧಕೇತರ ಸಿಬ್ಬಂದಿ ನೇಮಕ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌.ರಂಗಪ್ಪ ಹಾಗೂ ಕುಲಸಚಿವರಾಗಿದ್ದ ಪ್ರೊ.ರಾಜಣ್ಣ , ಉಪಕುಲಸಚಿವ ಪ್ರೊ.ಎಂ.ವಿ.ವಿಷಕಂಠ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಜತೆಗೆ ಆಗ ನೇಮಕಗೊಂಡಿದ್ದ
ಎಲ್ಲ 124 ಸಿಬ್ಬಂದಿಯನ್ನೂ ಕೂಡಲೇ ಕೆಲಸದಿಂದ ತೆಗೆದುಹಾಕುವಂತೆಯೂ ಸೂಚನಾದೇಶ ನೀಡಲಾಗಿದೆ.

ರಾಜ್ಯಪಾಲರ ಸೂಚನೆಯಂತೆ ಉನ್ನತ ಶಿಕ್ಷಣ  ಇಲಾಖೆಯಿಂದ ಮೈಸೂರು ವಿವಿ ಕುಲಪತಿಗಳಿಗೆ ನಿರ್ದೇಶಿಸಲಾಗಿದೆ. ಡಾ. ಎಂ.ಆರ್‌.ನಿಂಬಾಳ್ಕರ್‌ ನೇತೃತ್ವದ ತನಿಖಾ ತಂಡವು ರಂಗಪ್ಪ ಅವರು, ಕುಲಪತಿಯಾಗಿದ್ದ ಕಡೇ ದಿನಗಳಲ್ಲಿ 124 ಸಿಬ್ಬಂದಿ ಯನ್ನು ಕಾನೂನು ಬಾಹಿರವಾಗಿ ನೇಮಕ ಮಾಡಿಕೊಂಡಿ ದ್ದಾರೆ ಎಂದು ಹೇಳಿದೆ. 

ಸಮ್ಮಿಶ್ರ ಸರ್ಕಾರದಲ್ಲಿ ರಂಗಪ್ಪ ಅವರು ಉನ್ನತ ಶಿಕ್ಷಣ ಇಲಾಖೆಗೆ ಸಲಹೆಗಾರ ರಾಗಬಹುದು ಎನ್ನಲಾ ಗಿತ್ತು. ಇದ ರಿಂದ ಹಿನ್ನಡೆ ಆಗಬಹುದು ಇದರಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಗಳ ವಿರುದ್ಧ ವಿರುದ್ಧ 30 ದಿನಗಳೊಳಗೆ ಕ್ರಿಮಿನಲ್‌ ಮೊಕದ್ದಮೆ ದಾಖ ಲಿಸಿ ಭ್ರಷ್ಟಾಚಾರ ಪ್ರತಿಬಂಧಕ
ಅಧಿನಿಯಮ ಪ್ರಕಾರ ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್‌. ವೀರಬ್ರಹ್ಮಚಾರಿ ಮೈಸೂರು ವಿಶ್ವವಿದ್ಯಾಲಯದ ಕುಲಪತಿಗೆ ನಿರ್ದೇಶಿಸಿದ್ದಾರೆ. ಜತೆಗೆ ಅಕ್ರಮವಾಗಿ ನೇಮಕಗೊಂಡ “ಸಿ’ ಮತ್ತು “ಡಿ’ ಗ್ರೂಪ್‌ನ 124 ಬೋಧಕೇತರ ಸಿಬ್ಬಂದಿಗಳನ್ನು ಕೂಡಲೇ ಕೆಲಸದಿಂದ ತೆಗೆದು ಹಾಕುವಂತೆ ಸೂಚನಾದೇಶ ನೀಡಿದ್ದಾರೆ.

ಮೈಸೂರು ವಿವಿಗೆ ವಿವಿಧ ನೇಮಕಾತಿ ಮಾಡಿಕೊಳ್ಳುವ ಮುನ್ನ ಕಡ್ಡಾಯವಾಗಿ ನೇಮಕಾತಿ ನಿಯಮ, ಮಾರ್ಗಸೂಚಿ ಮತ್ತು ಮೀಸಲಾತಿ ಕಾರ್ಯಸೂಚಿಯನ್ನು ಪಾಲಿಸುವಂತೆ ತಿಳಿಸಿದ್ದಾರೆ. 

ಯಾವುದೇ ಮಾನದಂಡ ಅನುಸರಿಸಿಲ್ಲ: ಈ ನೇಮಕಾತಿಯಲ್ಲಿ ಅಭ್ಯರ್ಥಿಗಳ ವಿದ್ಯಾರ್ಹತೆ, ಮೀಸಲಾತಿ ಸೇರಿದಂತೆ ಯಾವುದೇ ಮಾನದಂಡವನ್ನು ಅನುಸರಿಸಿಲ್ಲ. ರಾಜ್ಯ ಸರ್ಕಾರ, ಆರ್ಥಿಕ ಇಲಾಖೆ, ವಿಶ್ವವಿದ್ಯಾಲಯದ ಸಿಂಡಿಕೇಟ್‌ ಅನುಮತಿ ಪಡೆದಿಲ್ಲ. ಹಾಗೆಯೇ ವಿವಿಯ
ನಿಯಮದ ಪ್ರಕಾರ ಬೋಧಕೇತರ ಸಿಬ್ಬಂದಿ ನೇಮಕ ಸಂದರ್ಭದಲ್ಲಿ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ನೀಡಬೇಕಿತ್ತು. ಅದನ್ನೂ ಮಾಡಿರಲಿಲ್ಲ. ಈ ನೇಮಕಾತಿ ಅಕ್ರಮವಾಗಿ ನಡೆದಿದೆ ಎಂದು ಮೈಸೂರು ವಿವಿಯ ಪ್ರಭಾರ ಕುಲಪತಿ ಪ್ರೊ.ಮಾನೆಯವರು ರಾಜ್ಯಪಾಲರಿಗೆ
ದೂರು ನೀಡಿದ್ದರು. ಅದರಂತೆ ರಾಜ್ಯಪಾಲರು 2017ರಲ್ಲಿ ನೇಮಕಾತಿಯ ಸಮಗ್ರ ತನಿಖೆಗೆ ಆದೇಶ ಹೊರಡಿಸಿದ್ದರು.

ವಿಶ್ವವಿದ್ಯಾಲಯದ ತನಿಖಾ ತಂಡದ ಅಧ್ಯಕ್ಷ ಡಾ.ಎಂ. ಆರ್‌.ನಿಂಬಾಲ್ಕರ್‌, ಸದಸ್ಯ ಡಾ.ಕಣುಬಾಯ್‌ ಗೋವಿಂದ್‌ ಜೀ ಮಾನವಿಯವರು 2017ರ ಜುಲೈ 28ರಂದು ಅಧಿಕಾರ ವಹಿಸಿಕೊಂಡು, ಕೂಲಂಕಷವಾಗಿ ಪ್ರಕರಣದ ತನಿಖೆ ನಡೆಸಿ. ಸಮಗ್ರ ವರದಿಯನ್ನು ರಾಜ್ಯಪಾಲರಿಗೆ ಒಪ್ಪಿಸಿದ್ದರು. ರಾಜ್ಯಪಾಲರ ಆದೇಶವನ್ನು ಉಲ್ಲಂಘಿಸಿ ಪ್ರೊ.ಕೆ.ಎಸ್‌. ರಂಗಪ್ಪ ಅವರು ಬೋಧಕೇತರ ಸಿಬ್ಬಂದಿ ನೇಮಕ ಮಾಡಿಕೊಂಡಿದ್ದಾರೆ. ಹೀಗಾಗಿ ರಾಜ್ಯಪಾಲರು ಯಾವ ರೀತಿಯ ಕ್ರಮ ಬೇಕಾದರೂ ತೆಗೆದುಕೊಳ್ಳಬಹುದು.

ವಿಶ್ವವಿದ್ಯಾಲಯದ ಕಾಯ್ದೆಯಂತೆ ಯಾವ ನಿಯಮವನ್ನು ಪಾಲಿಸದೇ ಕಾನೂನು ಬಾಹಿರವಾಗಿ ನೇಮಕಾತಿ ಮಾಡಿಕೊಂಡಿದ್ದಾರೆ. ನೇಮಕವಾಗಬೇಕಿರುವ ಸಿಬ್ಬಂದಿಯ ವಿದ್ಯಾರ್ಹತೆ, ವರ್ಷ, ಸೇವಾನುಭವವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಕುಲಸಚಿವ ಪ್ರೊ.ಆರ್‌.ರಾಜಣ್ಣ ಅವರ ವಿರುದ್ಧವೂ ಸರ್ಕಾರ ಯಾವುದೇ ಕ್ರಮ ಬೇಕಾದರೂ ತೆಗೆದುಕೊಳ್ಳಬಹುದು ಎಂದು ಶಿಫಾರಸ್ಸು ಮಾಡಿದೆ.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.