ಲಾಭ ಪರಿಶೀಲನೆಗೆ “ಪರೀಕ್ಷಾರ್ಥ ಖರೀದಿ’

Team Udayavani, Jul 22, 2017, 8:31 AM IST

22-STATE-4.gif

ಬೆಂಗಳೂರು: ಜಿಎಸ್‌ಟಿ ಜಾರಿ ನಂತರ ತೆರಿಗೆ ಪ್ರಮಾಣ ಇಳಿಕೆಯಾಗಿರುವ ವಸ್ತುಗಳ ಬೆಲೆ ಇಳಿಸಿ ಲಾಭದ ಮೊತ್ತ ಗ್ರಾಹಕರಿಗೆ ನೀಡಲಾಗುತ್ತಿದೆಯೇ ಎಂಬುದನ್ನು ತಿಳಿಯಲು ಮುಂದಿನ ದಿನಗಳಲ್ಲಿ ಅಧಿಕಾರಿಗಳ ತಂಡ ಖುದ್ದಾಗಿ ವಾಣಿಜ್ಯ ಮಳಿಗೆಗಳಿಗೆ ಭೇಟಿ ನೀಡಿ “ಪರೀಕ್ಷಾರ್ಥ ಖರೀದಿ’ ನಡೆಸುವ ಸಾಧ್ಯತೆ ಇದೆ.

ಕೇಂದ್ರ ಜಿಎಸ್‌ಟಿ ಮಂಡಳಿಯಲ್ಲಿ ಈ ಬಗ್ಗೆ ಗಂಭೀರ ಚರ್ಚೆ ನಡೆದಿದ್ದು, ಇದಕ್ಕೆ ಪೂರಕವಾದ ರೂಪುರೇಷೆ ರೂಪಿಸಲು ಐದು ಮಂದಿಯ ತಂಡವೂ ರಚನೆಯಾಗಿದೆ. ಜಿಎಸ್‌ಟಿ ಬಗೆಗಿನ ಗೊಂದಲಗಳು ನಿವಾರಣೆಯಾಗುತ್ತಿದ್ದಂತೆ ಅಗತ್ಯಬಿದ್ದರೆ ಸರಕು ಮತ್ತು ಸೇವಾ ತೆರಿಗೆ ಅಧಿಕಾರಿಗಳ ತಂಡ “ಪರೀಕ್ಷಾರ್ಥ ಖರೀದಿ’ ಮೂಲಕ ವಸ್ತುಸ್ಥಿತಿ ತಿಳಿಯುವ ಪ್ರಯತ್ನ ನಡೆಸಲು ಚಿಂತನೆ ನಡೆಸಿದೆ. ಜಿಎಸ್‌ಟಿ ಜಾರಿಯಾಗಿ 20 ದಿನ ಕಳೆದಿದ್ದು, ಆರಂಭ ದಿನಗಳಲ್ಲಿದ್ದ ಬಹಳಷ್ಟು ಗೊಂದಲಗಳಿಗೆ ತೆರೆಬಿದ್ದಿದ್ದರೂ ತೆರಿಗೆ ದರ ನಿಗದಿ, ಜಿಎಸ್‌ಟಿಯಡಿ ಲೆಕ್ಕಪತ್ರ ಸಲ್ಲಿಕೆ (ರಿಟರ್ನ್ಸ್) ಸೇರಿ ಆಯ್ದ ಪ್ರಕ್ರಿಯೆಗಳ ಬಗ್ಗೆ ಇನ್ನಷ್ಟು ಸ್ಪಷ್ಟತೆ ಮೂಡಬೇಕಿದೆ ಎಂದು ಬಹುತೇಕ ವ್ಯಾಪಾರಿಗಳು ಹೇಳುತ್ತಾರೆ. ಆದರೆ, ಹಲವು ವ್ಯಾಪಾರಿಗಳು ಇದನ್ನೇ ನೆಪ ಮಾಡಿಕೊಂಡು ಗ್ರಾಹಕರನ್ನು ವಂಚಿಸುತ್ತಿದ್ದಾರೆಂಬ
ದೂರುಗಳು ಕೇಳಿಬಂದಿವೆ. 

5 ಮಂದಿ ತಂಡ ರಚನೆ
ಜಿಎಸ್‌ಟಿ ಜಾರಿಯಿಂದಾಗುವ ಬೆಲೆ ಇಳಿಕೆಯ ಲಾಭ ಗ್ರಾಹಕರಿಗೆ ತಲುಪಿದಾಗಲೇ ಕಾಯ್ದೆಯ ಉದ್ದೇಶ ಈಡೇರಿದಂತಾಗುತ್ತದೆ. ಆ ಹಿನ್ನೆಲೆಯಲ್ಲಿ ಜಿಎಸ್‌ಟಿಯಿಂದಾಗಿ ತೆರಿಗೆ ಇಳಿಕೆಯಾದ ವಸ್ತುಗಳ ಬೆಲೆಯೂ ಇಳಿಕೆಯಾಗಿದೆಯೇ ಎಂಬುದನ್ನು ತಿಳಿದು ಅದರ ಲಾಭ
ಗ್ರಾಹಕರಿಗೆ ತಲುಪುವಂತೆ ಮಾಡಲು ಕೇಂದ್ರ ಸರ್ಕಾರ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಚರ್ಚಿಸಿ ಐದು ಮಂದಿ ತಜ್ಞರ ತಂಡ ರಚಿಸಿದೆ. ಈ ತಂಡ ಅಗತ್ಯ ರೂಪುರೇಷೆಗಳನ್ನು ಸಿದ್ಧಪಡಿಸಿ ಜಾರಿ ಬಗ್ಗೆ ಶಿಫಾರಸು ಸಲ್ಲಿಸಲಿದೆ. ತೆರಿಗೆ ಇಳಿಕೆಯ ಲಾಭಾಂಶ ಖರೀದಿದಾರರಿಗೆ
ತಲುಪುತ್ತಿದೆಯೇ ಎಂಬುದನ್ನು ತಿಳಿಯಲು ಅಧಿಕಾರಿಗಳ ತಂಡ ಮಳಿಗೆಗಳಿಗೆ ದಿಢೀರ್‌ ಭೇಟಿ ನೀಡಿ ಪರೀಕ್ಷಾರ್ಥ ಖರೀದಿ ನಡೆಸಿ
ಪರಿಶೀಲನೆ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದೆ. ಅಧಿಕಾರಿಗಳೇ ಗ್ರಾಹಕರಂತೆ ಮಳಿಗೆಗಳಿಗೆ ತೆರಳಿ ವಸ್ತುಗಳನ್ನು 
ಖರೀದಿಸಲಿದ್ದಾರೆ. ಈ ವೇಳೆ ಬೆಲೆ ಇಳಿಕೆ ಮಾಡಿ ಲಾಭ ನೀಡದಿರುವುದು ದೃಢಪಟ್ಟರೆ ಮಳಿಗೆದಾರರ ಮೇಲೆ ಕಾನೂನು ಕ್ರಮ
ಕೂಡ ಜರುಗಿಸಲಿದ್ದಾರೆ.

ಪರಿಶೀಲನೆ ಏನೇನು?
ಲಾಭ ಪ್ರಮಾಣ ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆ ಮಾತ್ರವಲ್ಲದೆ ಇನ್ನೂ ಕೆಲ ಅಂಶಗಳನ್ನು ತಂಡ ಪರೀಶೀಲನೆ ನಡೆಸಲು ಚಿಂತಿಸಿದೆ. 200 ರೂ.ವರೆಗಿನ ಖರೀದಿಗೆ ಗ್ರಾಹಕರಿಗೆ ರಸೀದಿ ನೀಡುವುದು ಕಡ್ಡಾಯವಲ್ಲದಿದ್ದರೂ ಗ್ರಾಹಕರು ಕೇಳಿದರೆ ಕಡ್ಡಾಯವಾಗಿ ರಸೀದಿ ನೀಡಬೇಕು. 200 ರೂ. ಮೇಲ್ಪಟ್ಟ ಖರೀದಿ, ವ್ಯವಹಾರಕ್ಕೆ ಕಡ್ಡಾಯವಾಗಿ ಗ್ರಾಹಕರಿಗೆ ರಸೀದಿ ನೀಡಬೇಕು. ಈ ರೀತಿಯ ಅಂಶಗಳು ಸೇರಿ ಜಿಎಸ್‌ಟಿ ಅನುಷ್ಠಾನದ ಬಳಿಕ ನಂತರ ದರ ಪರಿಷ್ಕಣೆ ಬಗ್ಗೆ ಸ್ಪಷ್ಟ ಮಾಹಿತಿ ಗ್ರಾಹಕರಿಗೆ ನೀಡುವ ಬಗ್ಗೆಯೂ ತಂಡ ಪರಿಶೀಲನೆ ನಡೆಸುವ ಸಾಧ್ಯತೆ ಇದೆ. ಆ ಮೂಲಕ ಗ್ರಾಹಕರಿಗೆ ಜಿಎಸ್‌ಟಿ ಜಾರಿಯ ಲಾಭ ತಲುಪಿಸುವ
ನಿಟ್ಟಿನಲ್ಲಿ ಚಿಂತನೆ ನಡೆದಿದೆ.

ಗ್ರಾಹಕರಿಗೆ ತಲುಪದ ಲಾಭ
ಅಬಕಾರಿ ತೆರಿಗೆ, ವ್ಯಾಟ್‌ ತೆರಿಗೆ, ಸೇವಾ ಶುಲ್ಕ, ಪ್ರವೇಶ ಶುಲ್ಕ ಸೇರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಉಪಕರಗಳನ್ನು (ಸೆಸ್‌)
ಒಟ್ಟುಗೂಡಿಸಿ ಕೇಂದ್ರ ಹಾಗೂ ರಾಜ್ಯ ಜಿಎಸ್‌ಟಿ ದರಗಳನ್ನಷ್ಟೇ ಜಿಎಸ್‌ಟಿಯಡಿ ನಿಗದಿಪಡಿಸಲಾಗಿದೆ. ಇದರಿಂದ ಸಾಕಷ್ಟು ಸರಕು-ಸೇವೆಯಲ್ಲಿ ತೆರಿಗೆ ಪ್ರಮಾಣ ಇಳಿಕೆಯಾಗಿರುವುದರಿಂದ ಸಹಜವಾಗಿಯೇ ಬೆಲೆ ಇಳಿಕೆಯಾಗಬೇಕು. ಆದರೆ ಈ ಲಾಭ ಪ್ರಮಾಣ
ಬಹುತೇಕ ಕಡೆ ಗ್ರಾಹಕರಿಗೆ ತಲುಪುತ್ತಿಲ್ಲ.
 
ಜಿಎಸ್‌ಟಿ ಜಾರಿ ಬಳಿಕ ತೆರಿಗೆ ಪ್ರಮಾಣ ಇಳಿಕೆಯಾದ ಸರಕು ಮತ್ತು ಸೇವೆಗಳ ಬೆಲೆಯೂ ನಿಯಮಾನುಸಾರ ಇಳಿಕೆಯಾಗಬೇಕು. ಆ ಮೂಲಕ ಲಾಭಾಂಶ ಗ್ರಾಹಕರಿಗೆ ತಲುಪಬೇಕು. ದೇಶದೆಲ್ಲೆಡೆ ಇದು ಪರಿಣಾಮಕಾರಿಯಾಗಿ ಜಾರಿಯಾಗುತ್ತಿದೆಯೇ ಎಂಬುದರ ಪತ್ತೆ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲು ಜಿಎಸ್‌ಟಿ ಮಂಡಳಿಯು ಐದು ಮಂದಿ ತಜ್ಞರ ಸಮಿತಿ ರಚಿಸಿದೆ. ಜಿಎಸ್‌ಟಿ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸಲು ಸದ್ಯ ಆದ್ಯತೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿ ಕಾನೂನು ಕ್ರಮ ಜರುಗಿಸುವ ಸಾಧ್ಯತೆಗಳಿವೆ.
ಬಿ.ಟಿ.ಮನೋಹರ್‌, ರಾಜ್ಯ ತೆರಿಗೆ ಸಮಿತಿ ಅಧ್ಯಕ್ಷ   

ಟಾಪ್ ನ್ಯೂಸ್

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.