ಕೆಪಿಎಸ್ಸಿ ಸದಸ್ಯರ ನೇಮಕ: ವಿವರಣೆ ಕೇಳಿದ ರಾಜ್ಯಪಾಲರು
Team Udayavani, Aug 22, 2017, 8:25 AM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗಕ್ಕೆ ನಾಲ್ವರು ಸದಸ್ಯರನ್ನು ನೇಮಕ ಮಾಡುವಂತೆ ರಾಜ್ಯ ಸರಕಾರ ಕಳುಹಿಸಿರುವ ಶಿಫಾರಸನ್ನು ರಾಜ್ಯಪಾಲ ವಜುಭಾಯಿ ವಾಲಾ ವಿವರಣೆ ಕೇಳಿ ಕಡತವನ್ನು ಸರಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಕಳೆದ ವಾರ ರಾಜ್ಯಪಾಲರಿಗೆ ನಾಲ್ವರ ಹೆಸರು ಶಿಫಾರಸು ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟಿ ಕಳುಹಿಸಿದ್ದರು. ಕೆ.ಸಿ. ಜನರಲ್ ಆಸ್ಪತ್ರೆಯ ವೈದ್ಯ ರವಿಕುಮಾರ್ ಹೆಸರನ್ನು ಈ ಹಿಂದೆ ರಾಜ್ಯಪಾಲರು ಮೂರು ಬಾರಿ ತಿರಸ್ಕರಿಸಿದ್ದರು. ರವಿಕುಮಾರ್ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿತ್ತು. ಇನ್ನು ರಾಯಚೂರಿನ ಕಾಂಗ್ರೆಸ್ ಕಾರ್ಯದರ್ಶಿ ಶ್ರೀನಾಥ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಲಕ್ಷ್ಮೀನಾರಾಯಣ, ಮುಜರಾಯಿ ಆಯುಕ್ತ ಷಡಕ್ಷರಿ ಅವರ ಹೆಸರನ್ನು ಸರಕಾರ ಶಿಫಾರಸು ಮಾಡಿ ಕಳುಹಿಸಿತ್ತು.
ನಾಲ್ವರ ಹೆಸರನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಿ ಕಳುಹಿಸುವಂತೆ ರಾಜ್ಯಪಾಲರು ಕಡತ ವಾಪಸ್ ಕಳುಹಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ರಾಜ್ಯಪಾಲರು ಕೆಪಿಎಸ್ಸಿ ಸದಸ್ಯರ ಹೆಸರನ್ನು ತಿರಸ್ಕರಿಸಿಲ್ಲ. ವಿವರಣೆ ಕೇಳಿದ್ದಾರೆ. ಕೆಪಿಎಸ್ಸಿ ಸದಸ್ಯರ ನೇಮಕ ವಿಚಾರದಲ್ಲಿ ಹಿಂದೆ ಸಂಪುಟ ನನಗೆ ಅಧಿಕಾರ ನೀಡಿತ್ತು. ಈಗಲೂ ಅಧಿಕಾರ ನಿಮ್ಮ ಬಳಿ ಇದೆಯೇ ಎಂದು ಮಾಹಿತಿ ಕೇಳಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್ನೆಸ್ ಸರ್ಟಿಫಿಕೇಟ್ಗಿನ್ನು ಆರ್ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.