ಬಂಧನ ಭೀತಿ: ಗಗನ್ ಬಡೇರಿಯಾ ಹೈಕೋರ್ಟ್ ಮೊರೆ
Team Udayavani, Jun 29, 2017, 3:45 AM IST
ಬೆಂಗಳೂರು: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಐಎಎಸ್ ಹಿರಿಯ ಅಧಿಕಾರಿ ಗಂಗಾರಾಮ್ ಬಡೇರಿಯಾ ಪುತ್ರ ಗಗನ್ ಬಡೇರಿಯಾ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಬುಧವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ, ಗಗನ್ ಬಡೇರಿಯಾ ಅರ್ಜಿ ಸಂಬಂಧ ಒಂದು ವಾರದೊಳಗೆ ಆಕ್ಷೇಪಣೆ ಸಲ್ಲಿಸುವಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ನೋಟಿಸ್ ಜಾರಿಗೊಳಿಸಿ, ಜುಲೈ 10ಕ್ಕೆ ವಿಚಾರಣೆ ಮುಂದೂಡಿತು.
ಅರ್ಜಿದಾರರ ಪರ ವಾದಮಂಡಿಸಿದ ಹಿರಿಯ ವಕೀಲ ಎಂ.ಟಿ ನಾಣಯ್ಯ, ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ನಮ್ಮ ಕಕ್ಷಿದಾರರಿಗೆ ಎಸ್‌ಐಟಿ ನೋಟಿಸ್ ಜಾರಿಗೊಳಿಸಿದೆ. ಈ ಹಿಂದೆ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾಗೂ,
ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದ ವೇಳೆ ಅವರನ್ನು ಬಂಧಿಸಲಾಗಿತ್ತು. ಹೀಗಾಗಿ ತಮ್ಮ
ಕಕ್ಷಿದಾರರನ್ನೂ ವಿಚಾರಣೆ ನೆಪದಲ್ಲಿ ಬಂಧಿಸುವ ಸಾಧ್ಯತೆಯಿದ್ದು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿದರು. ಈ ವಾದ ಆಲಿಸಿದ ನ್ಯಾಯಪೀಠ, ಈ ಅರ್ಜಿ ಸಂಬಂಧ ಮೊದಲು ಎಸ್‌ಐಟಿ ಆಕ್ಷೇಪಣೆ ಸಲ್ಲಿಸಲಿ, ಮುಂದಿನ ವಿಚಾರಣೆ ವೇಳೆ
ಪರಿಶೀಲಿಸೋಣ ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ಜಂತಕಲ್ ಎಂಟರ್‌ಪ್ರೈಸೆಸ್ ಕಂಪನಿಗೆ ಗಣಿಗಾರಿಕೆ ನಡೆಸಲು ಪರವಾನಿಗೆ ನೀಡಲು ಮಾಲಿಕ ವಿನೋದ್ ಗೋಯಲ್
ಬಳಿ ಆಗಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಗಂಗಾರಾಮ್ ಬಡೇರಿಯಾ ಪುತ್ರ
ಗಗನ್ ಕೂಡ ಕಿಕ್‌ಬ್ಯಾಕ್ ಪಡೆದುಕೊಂಡಿದ್ದಾರೆ ಎಂಬ ಆರೋಪ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ಜಾರಿಗೊಳಿಸಿತ್ತು. ಹೀಗಾಗಿ ಬಂಧನ ಭೀತಿಯಿಂದ ಗಗನ್ ಬಡೇರಿಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಜೂ.21ರಂದು ವಜಾಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.