ಎಸಿಬಿ ತನಿಖಾ ಮಾಹಿತಿ ಬಹಿರಂಗಕ್ಕೆ ಬಿಜೆಪಿ ಸವಾಲು


Team Udayavani, Aug 22, 2017, 8:00 AM IST

bjp.jpg

ಬೆಂಗಳೂರು: ಯಾರೋ ನೀಡಿದ ಖಾಸಗಿ ದೂರು ದಾಖಲಿಸಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದಟಛಿ ಎಫ್ಐಆರ್‌ ದಾಖಲಿಸಿ ಸಮನ್ಸ್‌ ಜಾರಿ ಮಾಡಿರುವ ಭ್ರಷ್ಟಾಚಾರ ನಿಗ್ರಹದಳದ (ಎಸಿಬಿ) ಅಧಿಕಾರಿಗಳ ವಿರುದಟಛಿ ಕಿಡಿ ಕಾರಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌, ಮುಖ್ಯಮಂತ್ರಿಗಳ ವಿರುದಟಛಿ ದಾಖಲಾಗಿರುವ ದೂರುಗಳು ಸೇರಿ ಕಳೆದ ಒಂದು ವರ್ಷದಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದ್ದಾರೆ.

ರಾಜ್ಯ ಸರ್ಕಾರದ ವಿರುದಟಛಿ ರಾಜ್ಯಪಾಲರಿಗೆ ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ಮೇಲೆ ರಾಜಕೀಯ ದ್ವೇಷ ಸಾಧಿಸುತ್ತಿದ್ದಾರೆ. ಎಸಿಬಿ ಮೂಲಕ ಯಡಿಯೂರಪ್ಪ
ವಿರುದಟಛಿ ಸುಳ್ಳು ಮೊಕದ್ದಮೆ ದಾಖಲಿಸಿ ರಾಜಕೀಯವಾಗಿ ತೊಂದರೆ ನೀಡಲಾಗುತ್ತಿದೆ.

ಕೇವಲ ಎಂಟು-ಹತ್ತು ದಿನಗಳಲ್ಲಿ ದೂರು ಸ್ವೀಕರಿಸಿ ಐದಾರು ದಿನಗಳಲ್ಲಿ ಎಫ್ಐಆರ್‌ ದಾಖಲಿಸಿ ಸಮನ್ಸ್‌ ಜಾರಿ ಮಾಡಲಾಗಿದೆ ಎಂದು ಆರೋಪಿಸಿದರು.

ಸಿಎಂ ವಿರುದಟಛಿ 25ಕ್ಕೂ ಹೆಚ್ಚು ದೂರು: ಎಸಿಬಿಯಲ್ಲಿ ಮುಖ್ಯಮಂತ್ರಿಗಳ ವಿರುದಟಛಿ 25ಕ್ಕೂ ಹೆಚ್ಚು ದೂರುಗಳು
ದಾಖಲಾಗಿವೆ. ಅನೇಕ ಮಂತ್ರಿಗಳು, ಐಎಎಸ್‌ ಅಧಿಕಾರಿಗಳ ವಿರುದಟಛಿವೂ ದೂರು ದಾಖಲಾಗಿದೆ. ಆದರೆ, ಈ ದೂರುಗಳಿಗೆ ಸಂಬಂಧಿಸಿದಂತೆ ಯಾವುದೇ ಎಫ್ಐಆರ್‌ ದಾಖಲಿಸಿಲ್ಲ ಮತ್ತು ವಿಚಾರಣೆಯೂ ಆಗಿಲ್ಲ. ಆದ್ದರಿಂದ ಒಂದು ವರ್ಷದಲ್ಲಿ ಎಷ್ಟು ದೂರುಗಳು ದಾಖಲಾಗಿವೆ? ಎಷ್ಟು ಪ್ರಕರಣಗಳಲ್ಲಿ ಎಫ್ಐಆರ್‌ ದಾಖಲಿಸಿ ವಿಚಾರಣೆ ನಡೆಸಲಾಗಿದೆ ಎಂಬುದನ್ನು ಎಸಿಬಿ ಅಧಿಕಾರಿಗಳು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದಂತೆ ಭೂಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ಬಳಿಕ ಯಡಿಯೂರಪ್ಪ ಅವರು ಸ್ವಲ್ಪ ಭೂಮಿಯನ್ನು ಡಿನೋಟಿಫೈ ಮಾಡಿದ್ದರು. ಈ ಮಧ್ಯೆ 2014 ಮತ್ತು 2015ರಲ್ಲಿ ಹಾಗೂ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗಲೇ ಹೈಕೋರ್ಟ್‌ ಇಡೀ ಭೂಸ್ವಾಧೀನ ಪ್ರಕ್ರಿಯೆಯನ್ನೇ ರದ್ದುಗೊಳಿಸಿದೆ. ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲೂ ಹೋಗದ ಕಾಂಗ್ರೆಸ್‌ ಸರ್ಕಾರ ಬಡಾವಣೆಗೆ ನಿಗದಿಪಡಿಸಿದ್ದ 3546 ಎಕರೆ ಜಮೀನನ್ನು ಹರಾಜು ಹಾಕಲು ಹೊರಟಿದೆ. ಈ ಪ್ರಕರಣದಲ್ಲಿ ನಿಜವಾಗಿಯೂ
ದೂರು ನೀಡುವುದಿದ್ದರೆ ಅದು ಸಿದ್ದರಾಮಯ್ಯ ಅವರ ಮೇಲೆ ನೀಡಬೇಕಿತ್ತು ಎಂದು ಹೇಳಿದರು.

ಟಾಪ್ ನ್ಯೂಸ್

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.