ಬಿಜೆಪಿ ಎಂಬುದು “ಪ್ರೈವೇಟ್ ಲಿಮಿಟೆಡ್ ಕಂಪನಿ’ ಅಲ್ಲ
Team Udayavani, Apr 30, 2017, 10:38 AM IST
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ವಾಗಾœಳಿ ಮುಂದುವರಿಸಿರುವ ವಿಧಾನ ಪರಿಷತ್
ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ತಮಗೆ ಬೇಕಾದ ಒಂದಿಬ್ಬರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಬಿಜೆಪಿ ಎಂಬುದು “ಪ್ರೈವೇಟ್ ಲಿಮಿಟೆಡ್ ಕಂಪನಿ’ ಅಲ್ಲ. ಸಂಘಟನೆ ಹೊಂದಿರುವ ರಾಷ್ಟ್ರೀಯ ಪಕ್ಷ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಹೇಳಿಕೆ ನೀಡಿರುವುದಕ್ಕೆ ಯಡಿಯೂರಪ್ಪ
ಅವರು ಕ್ಷಮೆ ಕೇಳಲೇ ಬೇಕು ಎಂದು ಆಗ್ರಹಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. “ಎಲ್ಲರೂ ಒಂದಾಗಿ ಕೆಲಸ ಮಾಡಬೇಕೆಂಬುದು ನಮ್ಮೆಲ್ಲರ ಅಪೇಕ್ಷೆ. ಆದರೆ, ತಮಗೆ ಬೇಕಾದ ಇಬ್ಬರು, ಮೂವರೊಂದಿಗೆ ಮಾತ್ರ ಯಡಿಯೂರಪ್ಪ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಿದ್ದಾರೆ. ಇದು ನಿಷ್ಠಾವಂತ ಕಾರ್ಯಕರ್ತರಿಗೆ ಬೇಸರ ತರಿಸಿದೆ. ಯಡಿಯೂರಪ್ಪನವರಿಗೆ ರಾಜ್ಯದ ನಾಯಕತ್ವ ವಹಿಸಿ, ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ.
ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು ಅನಂತಕುಮಾರ್, ಶೆಟ್ಟರ್, ಪ್ರಹ್ಲಾದ್ ಜೋಶಿ ಮೊದಲಾದವರನ್ನೊಳಗೊಂಡ ಕೋರ್ ಕಮಿಟಿ ರಚಿಸಲಾಗಿದೆ. ಆದರೆ, ಈ ಕಮಿಟಿಯಲ್ಲಿ ಕುಳಿತು ಚರ್ಚಿಸದೆ ತಮಗೆ
ಬೇಕಾದ ಮೂರ್‍ನಾಲ್ಕು ಮಂದಿಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದು ಸರಿಯಲ್ಲ. ತಾವು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಯಡಿಯೂರಪ್ಪನವರು ಕೂಡ ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು. ಅವರು ರಾಜ್ಯಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ. ಸಂಘಟನೆಯ ಸಕಾರಾತ್ಮಕ ಚಿಂತನೆಯೊಂದಿಗೆ ಪಕ್ಷವನ್ನು
ಅಧಿಕಾರಕ್ಕೆ ತರಬೇಕಿದೆ’ ಎಂದರು.
ಹೇಳಿಕೆಗೆ ಕ್ಷಮೆ ಕೋರಲಿ: ಪಕ್ಷದಲ್ಲಿನ ಗೊಂದಲಗಳಿಗೆ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್
ಕಾರಣ ಎಂದು ಯಡಿಯೂರಪ್ಪ ಹೇಳಿದ್ದಾರೆ. ಸಂತೋಷ್ ರಾಜಕಾರಣಿಯಲ್ಲ, ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.
ಅವರ ವಿರುದ್ಧ ಹೇಳಿಕೆ ನೀಡಿರುವುದಕ್ಕೆ ಯಡಿಯೂರಪ್ಪ ಅವರು ಕ್ಷಮೆ ಕೇಳಬೇಕು ಎಂದರು.
ಪಕ್ಷದಲ್ಲಿನ ಗೊಂದಲ ಹಾಗೂ ಪದಾಧಿಕಾರಿಗಳ ನೇಮಕ ಕುರಿತಂತೆ ಎದ್ದಿರುವ ವಿವಾದ ಬಗೆಹರಿಸಲು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೇ ಸಮಿತಿ ರಚನೆ ಮಾಡಿದ್ದಾರೆ. ಆದರೆ, ಇದುವರೆಗೂ ಸಭೆ ನಡೆಸಿಲ್ಲ. ಬೀದಿ ಜಗಳ ಮಾಡಬೇಡಿ, ಗೊಂದಲ ಸೃಷ್ಟಿಸಬೇಡಿ ಎಂದು ಹೇಳುತ್ತಾರೆ. ಆದರೆ, ಇದುವರೆಗೂ ಗೊಂದಲ ಬಗೆಹರಿಸಲು ಮುಂದಾಗಲಿಲ್ಲ ಎಂದರೆ ನಾವೇನು ಮಾಡೋಣ? ಹೀಗಾದರೆ ವರಿಷ್ಟರಿಗೆ ಏನು ಬೆಲೆ ನೀಡಿದಂತಾಗುತ್ತದೆ’ ಎಂದು ಪ್ರಶ್ನಿಸಿದರು.
ಪಕ್ಷದ ರಾಜ್ಯ ಉಸ್ತುವಾರಿ ಮುರುಳೀಧರರಾವ್ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂಬ ಸುದ್ದಿ ಇದೆ. ಅವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ನನಗೆ ಭೇಟಿ ಮಾಡಬೇಕೆಂಬ ಉದ್ದೇಶವಿಲ್ಲ. ಅಪೇಕ್ಷೆ ಪಟ್ಟರೆ ಭೇಟಿ ಮಾಡಿ ಪಕ್ಷದ ಸದ್ಯದ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸುತ್ತೇನೆಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.