ಬಿಜೆಪಿ ಬಲವರ್ಧನೆಗೆ ವಿಸ್ತಾರಕರಿಗೆ ಹೊಣೆ


Team Udayavani, Jun 29, 2017, 3:45 AM IST

vistarane.jpg

ಬೆಂಗಳೂರು: “ಪ್ರತಿನಿತ್ಯ ಬೂತ್‌ ಮಟ್ಟದಲ್ಲಿ 25 ಮನೆಗಳ ಸಂಪರ್ಕ, 50 ಮಂದಿಯನ್ನು ಹೊಸದಾಗಿ ಪಕ್ಷಕ್ಕೆ ಸೇರ್ಪಡೆಗೊಳಿಸುವುದು, ವ್ಯಾಪಾರಸ್ಥರು, ಪರಿಶಿಷ್ಟ ಜಾತಿ ಮತ್ತು ಪಂಗಡದ ಮುಖಂಡರು, ಅನ್ಯಪಕ್ಷದ ನಾಯಕರೊಂದಿಗೆ ಸಭೆ, ಎನ್‌ಜಿಒಗಳೊಂದಿಗೆ ನಿರಂತರ ಸಂಪರ್ಕ…’ ಅತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ
ಅವರು ರಾಷ್ಟ್ರಮಟ್ಟದ ವಿಸ್ತಾರಕರಾಗಿ ದೇಶಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿದ್ದರೆ, ಇತ್ತ ರಾಜ್ಯದಲ್ಲಿ ಬೂತ್‌ ಮಟ್ಟದಿಂದ ಪಕ್ಷ ಬಲವರ್ಧನೆಗೆ ನೇಮಕಗೊಂಡಿರುವ ವಿಸ್ತಾರಕರಿಗೆ ಹಂಚಿಕೆ ಮಾಡಿರುವ ಕೆಲಸಗಳಿವು. ಮುಂದಿನ ವರ್ಷ ವಿಧಾನಸಭೆ ಚುನಾವಣೆ ಬರಲಿರುವುದರಿಂದ ಬೂತ್‌ ಮಟ್ಟದಿಂದ ಪಕ್ಷವನ್ನು ಸದೃಢಗೊಳಿಸುವ ಉದ್ದೇಶದಿಂದ ಜುಲೈ 1 ರಿಂದ 15 ದಿನಗಳ ಕಾಲ ರಾಜ್ಯಾದ್ಯಂತ ಬಿಜೆಪಿ ವಿಸ್ತಾರಕರು ಕಾರ್ಯಾಚರಣೆಗೆ ಇಳಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ವಿಸ್ತಾರಕರನ್ನು ನೇಮಿಸಲಾಗಿದ್ದು, ಬುಧವಾರ
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ವಿಸ್ತಾರಕರ ಸಭೆ ನಡೆಸಲಾಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಪಕ್ಷದ ಮುಖಂಡರು 15 ದಿನಗಳ ವಿಸ್ತಾರಕರು ಬೂತ್‌ ಮಟ್ಟದಲ್ಲಿ ತಮಗೆ ವಹಿಸಿದ ಕೆಲಸ ಮಾಡಿದರೆ ಪಕ್ಷಕ್ಕೆ ದೊಡ್ಡ ಶಕ್ತಿ ಬರಲಿದೆ. ಅದು ರಾಜ್ಯದಲ್ಲಿ
ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ನೆರವಾಗಲಿದೆ ಎಂದು ಹೇಳಿದರು.

ವಿಸ್ತಾರಕರ ಕೆಲಸವೇನು?:
ವಿಸ್ತಾರಕರಾಗಿ ಕಾರ್ಯ ನಿರ್ವಹಿಸುವ ವೇಳೆ ಪ್ರತಿನಿತ್ಯ 25 ಮನೆಗಳನ್ನು ಸಂಪರ್ಕ ಮಾಡಿ, ಎಲ್ಲಾ ಮನೆಗಳಿಗೂ ಕರಪತ್ರ ಹಂಚಬೇಕು. ಮನೆಯವರಿಂದ ಮೊಬೈಲ್‌ ಸಂಖ್ಯೆ ಪಡೆದು ಆ ಸಂಖ್ಯೆಗೆ ಮಿಸ್ಡ್ ಕಾಲ್‌ ನೀಡುವ ಮೂಲಕ ಹೊಸದಾಗಿ 50 ಮಂದಿಯನ್ನು ಪಕ್ಷಕ್ಕೆ ಸದಸ್ಯರಾಗಿ ನೋಂದಣಿ ಮಾಡಿಸಬೇಕು. 15 ದಿನದಲ್ಲಿ ಐದು ದಿನ ಸ್ವತ್ಛ
ಭಾರತ ಅಭಿಯಾನ ಕೈಗೊಳ್ಳಬೇಕು. ಯಾರಿಗೆ ಯಾವ ಕ್ಷೇತ್ರದ ಜವಾಬ್ದಾರಿ ನೀಡಲಾಗಿರುತ್ತದೆಯೋ ಅಲ್ಲಿನ ವ್ಯಾಪಾರಸ್ಥರು, ಪರಿಶಿಷ್ಟ ಜಾತಿ ಮತ್ತು ಪಂಗಡದ ಮುಖಂಡರ ಸಭೆ ನಡೆಸಬೇಕು.

ಮಹಿಳೆಯರು, ವಿದ್ಯಾರ್ಥಿಗಳು, ಧಾರ್ಮಿಕ ಮುಖಂಡರು, ಕ್ರೀಡಾತಂಡಗಳ ಜತೆ ಸಮಾಲೋಚನೆ ನಡೆಸಿ ಪಕ್ಷದ ಸಾಧನೆಗಳನ್ನು ತಿಳಿಸಬೇಕು. ಅನ್ಯಪಕ್ಷದ ನಾಯಕರೊಂದಿಗೆ ಸಭೆ, ಎನ್‌ ಜಿಒಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚನೆ ನೀಡಿದರು.

ಶಾಗೆ ಸಂಪೂರ್ಣ ವರದಿ: ಈ ಕೆಲಸಗಳ ಜತೆಗೆ ಆರೋಗ್ಯದ ದೃಷ್ಟಿಯಿಂದ ವ್ಯಾಯಾಮ, ಯೋಗ, ಪ್ರಾಣಾಯಾಮ ಸೇರಿದಂತೆ ಇತರೆ ಚಟುವಟಿಕೆಗಳಲ್ಲಿ ನಿರತರಾಗಬೇಕು ಮತ್ತು ಇತರರನ್ನೂ ಆ ನಿಟ್ಟಿನಲ್ಲಿ ಪ್ರೇರೇಪಿಸಬೇಕು. ಈ ಎಲ್ಲಾ ಚಟುವಟಿಕೆಗಳ ಜತೆಗೆ ಪ್ರತಿನಿತ್ಯ ಮಾಡಿದ ಕೆಲಸಗಳ ಬಗ್ಗೆ ವರದಿ ತಯಾರಿಸಿ ಬರೆದಿಡಬೇಕು. ಆಗಸ್ಟ್‌ನಲ್ಲಿ ಪಕ್ಷದ
ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ರಾಜ್ಯಕ್ಕೆ ಬಂದಾಗ ಈ ಎಲ್ಲಾ ವರದಿಗಳನ್ನು ಕ್ರೋಢೀಕರಿಸಿ ಅವರಿಗೆ ನೀಡಲಾಗುವುದು ಎಂದು ಹೇಳಿದರು. ಬೂತ್‌ಮಟ್ಟದಲ್ಲಿನ ಪ್ರಮುಖರು ಯಾವ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ ಎಂಬ ಮಾಹಿತಿ ಪಡೆಯುವುದರ ಜತೆಗೆ ಅತಿ ಹೆಚ್ಚಿನ ಮತಗಳು ಯಾವ ಪಕ್ಷಕ್ಕೆ ಹೋಗುತ್ತದೆ ಎಂಬುದನ್ನು ತಿಳಿದು ಅದು ಬಿಜೆಪಿಯೇತರ ಪಕ್ಷಕ್ಕೆ ಹೋಗುತ್ತಿದ್ದರೆ ಅವರ ಮನವೊಲಿಸಿ ಪಕ್ಷದತ್ತ ಸೆಳೆಯುವ ಕೆಲಸ ಮಾಡಬೇಕು ಎಂದು ಸೂಚಿಸಿದ ಯಡಿಯೂರಪ್ಪ, ಸ್ಥಳೀಯ ಮುಖಂಡರನ್ನು ಗುರುತಿಸಿ ಜವಾಬ್ದಾರಿ ನೀಡಿದರೆ ಪ್ರತಿ ಬೂತ್‌ನ ಒಟ್ಟು ಮತಗಳ
ಪೈಕಿ ಶೇ.50 ರಿಂದ 60ರಷ್ಟು ಮತಗಳನ್ನು ಪಡೆಯಬಹುದು. ಇದನ್ನು ಪ್ರತಿಯೊಬ್ಬರು ಗಮನದಲ್ಲಿಟ್ಟುಕೊಳ್ಳಬೇಕು ಎಂದರು.

ಸಂಸದ ಪ್ರಹ್ಲಾದ ಜೋಶಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ,ಎನ್‌.ರವಿಕುಮಾರ್‌ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದಿದ್ದ ಪ್ರಮುಖ ವಿಸ್ತಾರಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರದ ಸಾಧನೆ ಮನವರಿಕೆ ಮಾಡಿ: ಬಿಎಸ್‌ವೈ
ಬಿಜೆಪಿ ವಿಸ್ತಾರಕರಾಗಿ ನೇಮಕಗೊಂಡವರು ಪಕ್ಷ ಸಂಘಟನೆ ಜತೆಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರದ ವೈಫ‌ಲ್ಯಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ಬಿ.ಎಸ್‌.ಯಡಿಯೂರಪ್ಪ ಸೂಚಿಸಿದ್ದಾರೆ. ಪ್ರಮುಖವಾಗಿ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೇಳುವ ಸುಳ್ಳುಗಳನ್ನು ಜನರಿಗೆ ಮನವರಿಕೆ ಮಾಡುವ ಕೆಲಸಕ್ಕೆ ಮುಂದಾಗಬೇಕು. ಅನ್ನಭಾಗ್ಯ ಮೂಲತಃ ಕೇಂದ್ರ ಸರ್ಕಾರದ ಯೋಜನೆಯಾಗಿದೆ.

ಕೇಂದ್ರ ಸರ್ಕಾರ ಅಕ್ಕಿಯನ್ನು 32 ರೂ.ಗೆ ಖರೀದಿಸಿ 3 ರೂ.ಗೆ ಮತ್ತು 22 ರೂ.ಗೆ ಗೋಧಿ ಖರೀದಿಸಿ 2 ರೂ.ಗೆ ರಾಜ್ಯಕ್ಕೆ ನೀಡುತ್ತದೆ. ಆದರೆ, ಇದನ್ನು ಮರೆಮಾಚಿರುವ ರಾಜ್ಯ ಸರ್ಕಾರ ಯೋಜನೆ ಸಂಪೂರ್ಣ ನಮ್ಮದು ಎಂದು ಹೇಳಿಕೊಂಡು ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಈ ಸತ್ಯಾಂಶವನ್ನು ಜನರಿಗೆ ತಿಳಿಸಬೇಕು ಎಂದರು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.