Yathindra Siddaramaiah ವಿರುದ್ಧದ ಪ್ರಕರಣ ಹೈಕೋರ್ಟ್ನಲ್ಲಿ ರದ್ದು
Team Udayavani, Jul 26, 2024, 11:15 PM IST
ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಭಾಗಿಯಾಗಿ ಕೋವಿಡ್-19ರ ಮಾರ್ಗಸೂಚಿ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ರಾಮನಗರ ಜಿಲ್ಲೆಯ ಸಾತನೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ರದ್ದುಕೋರಿ ಯತೀಂದ್ರ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
ಕೆಲವು ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಯನ್ನು ಹೈಕೋರ್ಟ್ ಈ ಹಿಂದೆಯೇ ರದ್ದುಪಡಿಸಿತ್ತು. ಇದರನ್ವಯ ಯತೀಂದ್ರ ಅವರ ಅರ್ಜಿಯನ್ನೂ ನ್ಯಾಯಪೀಠ ಪರಿಗಣಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.