ರೈತರ ಮೇಲಿನ ಕೇಸ್‌ ವಾಪಸ್‌ಗೆ ಆಗ್ರಹಿಸಿ ಧರಣಿ

Team Udayavani, Feb 14, 2017, 7:05 AM IST

14-sss-4.jpg

ವಿಧಾನಸಭೆ: ಮಹದಾಯಿ ವಿವಾದ ಸಂಬಂಧ ರೈತರ ಮೇಲೆ ದಾಖಲಿಸಿರುವ ಎಲ್ಲಾ ಪ್ರಕರಣಗಳನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿ ನಲಗುಂದ ಕ್ಷೇತ್ರದ ಜೆಡಿಎಸ್‌ ಶಾಸಕ ಎನ್‌.ಎಚ್‌. ಕೋನರೆಡ್ಡಿ ಏಕಾಂಗಿಯಾಗಿ ಧರಣಿ ನಡೆಸಿದ ಘಟನೆ ನಡೆಯಿತು. ಅವರನ್ನು ಬೆಂಬಲಿಸಿ ಬಳಿಕ ಜೆಡಿಎಸ್‌ ಸದಸ್ಯರೂ ಧರಣಿ ಆರಂಭಿಸಿದರು.

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಮಹದಾಯಿ ಹೋರಾಟದ ವೇಳೆ ರೈತರ ಮೇಲೆ ದಾಖಲಿಸಿದ 
ಪ್ರಕರಣಗಳ ಕುರಿತು ಪ್ರಸ್ತಾಪಿಸಿದ ಕೋನರೆಡ್ಡಿ, ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿಗಳು
ಸದನದಲ್ಲಿ ಮತ್ತು ಸರ್ವಪಕ್ಷ ಸಭೆಯಲ್ಲಿ ಹೇಳಿದ್ದರು. ಆದರೆ, ಗೃಹ ಸಚಿವರು ಕೊಟ್ಟಿರುವ ಉತ್ತರದಲ್ಲಿ, ಹೋರಾಟಕ್ಕೆ ಸಂಬಂಧಿಸಿದಂತೆ 81 ಪ್ರಕರಣ ದಾಖಲಿಸಿದ್ದು, ಈ ಪೈಕಿ 51 ಪ್ರಕರಣ ಹಿಂಪಡೆಯುವ ಬಗ್ಗೆ ಸಂಪುಟ ಉಪಸಮಿತಿ ಮುಂದೆ ಪ್ರಸ್ತಾಪಿಸಲಾಗಿತ್ತು. ಆದರೆ, ಆ ಪೈಕಿ 29 ಪ್ರಕರಣಗಳಲ್ಲಿ 557 ಮಂದಿ ವಿರುದ್ಧ ದಾಖಲಾಗಿರುವ ಪ್ರಕರಣ ಹಿಂಪಡೆಯಲು ಸಂಪುಟ
ಉಪಸಮಿತಿ ತೀರ್ಮಾನಿಸಿದೆ. 22 ಪ್ರಕರಣಗಳು ಗಂಭೀರ ಅಪರಾಧಗಳಾಗಿರುವುದರಿಂದ ಅಭಿಯೋಜನೆಯಿಂದ ಹಿಂಪಡೆಯುವುದು
ಸೂಕ್ತವಲ್ಲ. ಉಳಿದ 30 ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಒಂದು
ಮಾತು ಹೇಳುತ್ತಾರೆ, ಗೃಹ ಸಚಿವರು ಅದಕ್ಕೆ ವ್ಯತಿರಿಕ್ತವಾಗಿ ಮಾತನಾಡುತ್ತಾರೆ. ಇವರ ಮಧ್ಯೆ ಹೊಂದಾಣಿಕೆಯಿಲ್ಲವೇ ಎಂದು ಪ್ರಶ್ನಿಸಿದರು.

ಕೋನರೆಡ್ಡಿ ಮಾತಿಗೆ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರು ದನಿಗೂಡಿಸಿದರು. ಮಾತು ಮುಂದುವರಿಸಿದ ಕೋನರೆಡ್ಡಿ, ರೈತರ
ಮೇಲಿನ ಎಲ್ಲಾ ಪ್ರಕರಣ ಹಿಂಪಡೆಯುವ ಬಗ್ಗೆ ಮುಖ್ಯಮಂತ್ರಿಗಳು ಅಥವಾ ಗೃಹ ಸಚಿವರು ಸದನದಲ್ಲಿ ಇಂದೇ ಹೇಳಿಕೆ ನೀಡಬೇಕು. ಇಲ್ಲದಿದ್ದರೆ ತಾನು ಆಹೋರಾತ್ರಿ ಏಕಾಂಗಿ ಧರಣಿ ನಡೆಸುತ್ತೇನೆ. ಅದಕ್ಕಾಗಿ ಮುಖ್ಯಮಂತ್ರಿ ಅಥವಾ ಗೃಹ ಸಚಿವರನ್ನು ಸದನಕ್ಕೆ ಕರೆಸಿ ಎಂದು ಒತ್ತಾಯಿಸಿದರು. ಇದಕ್ಕೆ ಸರ್ಕಾರ ಸಮಯಾವಕಾಶ ಕೇಳಿತು.

ಸೋಮವಾರದ ಕಲಾಪ ಇನ್ನೇನು ಮುಕ್ತಾಯದ ಹಂತ ತಲುಪಿತು ಎನ್ನುವಷ್ಟರಲ್ಲಿ ಮತ್ತೆ ವಿಷಯ ಪ್ರಸ್ತಾಪಿಸಿದ ಕೋನರೆಡ್ಡಿ, ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ವಾಪಸ್‌ ಪಡೆಯುವುದಾಗಿ ಸರ್ಕಾರ ಹೇಳುವವರೆಗೆ ತಾನು ಸದನದಿಂದ ಹೊರಹೋಗುವುದಿಲ್ಲ. ಏಕಾಂಗಿಯಾಗಿ ಆಹೋರಾತ್ರಿ ಧರಣಿ ನಡೆಸುತ್ತೇನೆ ಎಂದು ಹೇಳಿ ಸಭಾಧ್ಯಕ್ಷರ ಪೀಠದ ಎದುರು ಧಾವಿಸಿದರು. ಸದನದಲ್ಲಿದ್ದ ಇತರೆ ಜೆಡಿಎಸ್‌ ಸದಸ್ಯರೂ ಧರಣಿಗೆ ಕೈಜೋಡಿಸಿದರು. ಸರ್ಕಾರದ ಪರವಾಗಿ ಸಚಿವರಾದ ಟಿ.ಬಿ.ಜಯಚಂದ್ರ, ಕಾಗೋಡು ತಿಮ್ಮಪ್ಪ, ತನ್ವೀರ್‌ ಸೇs…, ಸರ್ಕಾರದ ಮುಖ್ಯ ಸಚೇತಕ ಅಶೋಕ್‌ ಪಟ್ಟಣ್‌, ಬಿಜೆಪಿಯ ಕೆ.ಜಿ.ಬೋಪಯ್ಯ, ಜೆಡಿಎಸ್‌ ನ ಎಚ್‌.ಡಿ.ರೇವಣ್ಣ ಮತ್ತಿತರರು ಕೋನರೆಡ್ಡಿ ಮನವೊಲಿಸಲು ಪ್ರಯತ್ನಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಸಚಿವ ಜಯಚಂದ್ರ ಅವರು, ಈ ಕುರಿತು ಮಂಗಳವಾರ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ. ಬುಧವಾರ ಸಚಿವ ಸಂಪುಟ ಸಭೆಯಲ್ಲಿ ರೈತರ ಮೇಲಿನ ಪ್ರಕರಣ ವಾಪಸ್‌ ಪಡೆಯುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.