ಮುಖ್ಯ ಕಾರ್ಯದರ್ಶಿಗೆ ಉಂಟು ಕಾರ್ಕಳದ ನಂಟು

Team Udayavani, Dec 2, 2017, 3:01 PM IST

siddu-prabha.jpg

ಕಾರ್ಕಳ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸಿರುವ ಐಎಎಸ್‌ ಅಧಿಕಾರಿ ರತ್ಮಪ್ರಭಾ ಅವರಿಗೂ ಕಾರ್ಕಳಕ್ಕೂ ನಂಟಿದೆ ಎಂಬುದು ಬಹುತೇಕರಿಗೆ ಗೊತ್ತೇ ಇಲ್ಲ. ಈಗಲೂ ವರ್ಷಕ್ಕೊಮ್ಮೆ ತಾಯಿಯ ಊರು ಕಾರ್ಕಳಕ್ಕೆ ಪ್ರತಿ ವರ್ಷ ರತ್ನಪ್ರಭಾ ಅವರು ಭೇಟಿ ನೀಡುತ್ತಾರೆ. 

ಹೌದು, ರಾಜ್ಯದ ಅತ್ಯುನ್ನತ ಹುದ್ದೆಯ ಹೊಣೆಗಾರಿಕೆ ವಹಿಸಿಕೊಂಡಿರುವ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ತಾಯಿ ಕಾರ್ಕಳದವರು. ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ದಾಖಲಾಗಿರುವ ರತ್ನಪ್ರಭ ಅವರ ವೈಯಕ್ತಿಕ ವಿವರದ ಪೈಕಿ ಅವರಿಗೆ ಗೊತ್ತಿರುವ ಭಾಷೆಗಳಲ್ಲಿ ಕೊಂಕಣಿಯೂ ಸೇರಿದೆ.

ಕಾರ್ಕಳದ ಜನಪ್ರಿಯ ಉದ್ಯಮಿ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡು ಜನಪ್ರಿಯರಾಗಿದ್ದ ಹಳೇ ದ್ವಾರಕಾ ಹೊಟೇಲಿನ ಮಾಲೀಕ ಸದಾನಂದ ಕಾಮತ್‌ ಅವರ ಸೋದರಿಯಾಗಿದ್ದ ವಿಮಾಲಾ ಬಾೖ ಅವರ ಮೂವರು ಮಕ್ಕಳಲ್ಲಿ ರತ್ನಪ್ರಭಾ ಕೊನೆಯವರು.

ಕಾರ್ಕಳದಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸಿದ ದಿ ವಿಮಲಾ ಬಾೖ ಅವರು ಆಂಧ್ರ ಮೂಲದ ಅಧಿಕಾರಿ ಚಂದ್ರಯ್ಯ ಅವರನ್ನು ವಿವಾಹವಾಗಿದ್ದರು. ತಮ್ಮ ಬಾಲ್ಯ ಹಾಗೂ ಶಿಕ್ಷಣವನ್ನು ಆಂಧ್ರಪ್ರದೇಶದಲ್ಲಿಯೇ ಪೂರೈಸಿದ ರತ್ನಪ್ರಭಾ ಅವರು, ತಾಯಿ ವಿಮಲಾ ಅವರ ಜತೆ ರಜಾ ದಿನಗಳಲ್ಲಿ ಕಾರ್ಕಳದತ್ತ ಬಂದು ಕುಟುಂಬದ ಸದಸ್ಯರ ಜತೆಗೆ ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದರು.

ಈಗಲೂ ವರ್ಷಕ್ಕೊಂದು ಬಾರಿ ಕಾರ್ಕಳಕ್ಕೆ ಬರುವ ಅವರು, ಕುಟುಂಬದ ಕಾರ್ಯಕ್ರಮಗಳಲ್ಲಿ, ತಮ್ಮ ಕುಟುಂಬದ ದೇವಸ್ಥಾನದ ಪೂಜಾ ಮಹೋತ್ಸವಗಳಲ್ಲಿ ಪಾಲ್ಗೊಳ್ಳುತ್ತಾರೆ.

ಕರಾವಳಿಯ ನಿಕಟ ಸಂಪರ್ಕ: ತಾಯಿ ವಿಮಲಾ ಅವರು ಮಂಗಳೂರು, ಪುತ್ತೂರು, ಕಾರ್ಕಳ ಮೊದಲಾದ ಕಡೆ ವೈದ್ಯೆಯಾಗಿ ಸೇವೆ ಸಲ್ಲಿಸಿದ್ದರಿಂದ ಆ ಊರುಗಳ ಸಂಪರ್ಕವೂ ರತ್ನಪ್ರಭಾ ಅವರಿಗಿದೆ.  ವಿಮಲಾ ಅವರು ಮಂಗಳೂರಿನ ಲೇಡಿ ಗೋಶನ್‌ನಲ್ಲಿಯೂ ವೈದ್ಯೆಯಾಗಿ ಸೇವೆ ಸಲ್ಲಿಸಿದ್ದು ಸ್ಕಿನ್‌ ಸ್ಪೆಷಲಿಸ್ಟ್‌ ಆಗಿದ್ದರು.

2016 ರಲ್ಲಿ ತಾಯಿ ತೀರಿಕೊಂಡಾಗ ಕೊನೆಯ ಬಾರಿ ರತ್ನಪ್ರಭಾ ಅವರು ಕಾರ್ಕಳಕ್ಕೆ ಭೇಟಿ ನೀಡಿದ್ದರು. ರತ್ನಪ್ರಭಾ ಅವರಿಗೆ ಕಾರ್ಕಳ ಇಷ್ಟವಾದ ತಾಣ, ಕಾರ್ಕಳದಲ್ಲಿರುವ ಪೂರ್ವಜರ ಮನೆ, ವಾತಾವರಣ ಎಲ್ಲವೂ ಅವರಿಗೆ ಅಚ್ಚು-ಮೆಚ್ಚು ಎಂದು ಪ್ರಸ್ತುತ ಬೆಂಗಳೂರಿನಲ್ಲಿರುವ ಕಾರ್ಕಳದ ದಿ|ಸದಾನಂದ ಕಾಮತ್‌ ಕುಟುಂಬ ಸದಸ್ಯರು ತಿಳಿಸುತ್ತಾರೆ.

ಕೊಂಕಣಿ ಅಂದ್ರೆ ಇಷ್ಟ: ರತ್ನಪ್ರಭಾ ಅವರಿಗೆ ಕೊಂಕಣಿ ಎಂದರೆ ಇಷ್ಟ .ಮನೆ ಭಾಷೆ ಕೊಂಕಣಿಯಾದ್ದರಿಂದ ಭಾಷೆಯ ಮೇಲೆ ಅಭಿಮಾನ ಜಾಸ್ತಿ. ಆಂಧ್ರಮೂಲದ ಹುಡುಗನನ್ನು ವರಿಸಿದ್ದರೂ, ಕೊಂಕಣಿ ಭಾಷೆ ಹಾಗೂ ಊರಿನ ವ್ಯಾಮೋಹದಿಂದ ತಮ್ಮ ಮಗ, ಮಗಳಿಗೂ ಕೊಂಕಣಿ ಕಲಿಸಿದ್ದಾರೆ. ಭಾಷಾ ಪ್ರೇಮವನ್ನೂ ಉಳಿಸಿಕೊಂಡಿದ್ದಾರೆ. ಅಲ್ಲದೇ ಟೆನ್ನಿಸ್‌ನಲ್ಲಿಯೂ ಅವರು ಪ್ರವೀಣೆಯಾಗಿದ್ದರು ಎಂದು ಸದಾನಂದ ಕಾಮತ್‌ ಕುಟುಂಬ ಸದಸ್ಯರು ಹೇಳುತ್ತಾರೆ.

ಮಹಿಳಾ ಕಾಳಜಿ ಹಾಗೂ ಜನಸ್ನೇಹಿ ಅಧಿಕಾರಿ: ಸಾಮಾನ್ಯವಾಗಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡರೆ ಐಐಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು ಶುಭ ಕೋರುವುದು ಸಹಜ. ಆದರೆ, ರತ್ನಪ್ರಭಾ ಅವರು ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡ ಆದೇಶ ಹೊರಬೀಳುತ್ತಿದ್ದಂತೆ ಮಹಿಳಾ ಸಂಘಟನೆಗಳು, ನಾಗರಿಕ ಸಂಘಟನೆಗಳು, ಸೇವಾ ಸಂಸ್ಥೆಗಳ ಪ್ರತಿನಿಧಿಗಳು ವಿಧಾನಸೌಧಕ್ಕೆ ಆಗಮಿಸಿ ರತ್ನಪ್ರಭಾ ಅವರಿಗೆ ಶುಭಕೋರುತ್ತಿರುವುದು ವಿಶೇಷ.

ಜಿಲ್ಲಾಧಿಕಾರಿಗಳಾಗಿದ್ದ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾಕ್ಷರತೆ ಬಗ್ಗೆ ಹೆಚ್ಚು ಒತ್ತು ನೀಡಿದ್ದ ರತ್ನಪ್ರಭಾ ಅವರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿಯೂ ಸೈ ಎನಿಸಿಕೊಂಡವರು. ಐಎಎಸ್‌ ವಲಯದಲ್ಲಿಯೂ ರತ್ನಪ್ರಭಾ ಅವರು ದಕ್ಷತೆ, ಸರಳ ಹಾಗೂ ಜನಸ್ನೇಹಿ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದಾರೆ.

* ಪ್ರಸಾದ್‌ ಶೆಣೈ ಕಾರ್ಕಳ

ಟಾಪ್ ನ್ಯೂಸ್

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.