ಕೇಂದ್ರದ ಯೋಜನೆಗೆ ತಮ್ಮ ಚಿತ್ರ ಅಂಟಿಸಿ ಸಿಎಂ ಬೊಬ್ಬೆ
Team Udayavani, Jun 19, 2017, 11:32 AM IST
ಶಿವಮೊಗ್ಗ: ಅನ್ನಭಾಗ್ಯ ಸೇರಿದಂತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ತಮ್ಮ ಫೋಟೋ ಹಾಕಿಕೊಂಡು ಯೋಜನೆಯನ್ನು ತಾವೇ ಜಾರಿಗೊಳಿಸಿದಂತೆ ಬೊಬ್ಬೆ ಹೊಡೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದರು. ತಾಲೂಕಿನ ಸಿರಿಗೆರೆಯಲ್ಲಿ ಭಾನುವಾರ ಬೆಳಗ್ಗೆ ದಲಿತ ಕೇರಿಯ ಶ್ರೀನಿವಾಸ್ ಎಂಬುವರ ಮನೆಯಲ್ಲಿ ಉಪಾಹಾರ ಸೇವಿಸಿದ ಬಳಿಕ ಗ್ರಾಮದ ಮಾರಿಕಾಂಬಾ
ದೇವಾಲಯದ ಆವರಣದಲ್ಲಿ ಏರ್ಪಡಿಸಿದ್ದ ಬಿಜೆಪಿ ನಡೆ ದಲಿತರೆಡೆಗೆ ಕಾರ್ಯಕ್ರಮದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್‌ರಾಂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಅವರು ಮಾತನಾಡಿದರು.
ಅನ್ನಭಾಗ್ಯ ಸಿದ್ದರಾಮಯ್ಯ ಜಾರಿಗೆ ತಂದ ಯೋಜನೆಯಲ್ಲ. ಕೇಂದ್ರ ಸರ್ಕಾರ ಪ್ರತಿ ಕೆಜಿ ಅಕ್ಕಿಗೆ 32 ರೂ. ವ್ಯಯಿಸಿ 3ರೂ. ಗೆ ರಾಜ್ಯಗಳಿಗೆ ನೀಡುತ್ತಿದೆ. ಆದರೆ ಸಿಎಂ ಸಿದ್ದರಾಮಯ್ಯ ಯೋಜನೆ ತಮ್ಮದೆಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ನಮ್ಮ ಕಾರ್ಯಕರ್ತರು ಪ್ರತಿ ನ್ಯಾಯಬೆಲೆ ಅಂಗಡಿ ಎದುರು ಫ್ಲೆಕ್ಸ್ ಹಾಕಿ ವಾಸ್ತವ ಸಂಗತಿಯನ್ನು ಜನರ ಗಮನಕ್ಕೆ ತರಬೇಕೆಂದು ತಿಳಿಸಿದರು.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನಪರ ಯೋಜನೆಗಳು ಸಾಕಷ್ಟು ಜಾರಿಗೊಂಡಿವೆ. ಸಬ್ಸಿಡಿ ದರದಲ್ಲಿ ಎಲ್‌ಇಡಿ ಬಲ್ಬ್, ಜೆನರಿಕ್ ಔಷಧ, ಬಡ ಜನತೆಗೆ ಅಡುಗೆ ಅನಿಲ ವಿತರಿಸುವ ಉಜ್ವಲ ಯೋಜನೆ, ಪ್ರಧಾನ ಮಂತ್ರಿ ಫಸಲ್ ಬಿಮಾ ಸೇರಿದಂತೆ ಹಲವು ಯೋಜನೆಗಳು ಜಾರಿಯಾಗಿವೆ. ಆ ಮೂಲಕ
ಕ್ರಾಂತಿಕಾರಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.