ಕಾಂಗ್ರೆಸ್ ಪಕ್ಷಕ್ಕೆ ದೇಶದ ಸುರಕ್ಷತೆಯ ಕಾಳಜಿ ಇಲ್ಲ : ನಳಿನ್ ಕುಮಾರ್ ಕಟೀಲ್ ಟೀಕೆ
Team Udayavani, Aug 3, 2021, 11:59 AM IST
ಬೆಂಗಳೂರು : ಭಯೋತ್ಪಾದಕರ ವಿರುದ್ಧ ಸಂಸತ್ತಿನಲ್ಲಿ ಮಸೂದೆಯನ್ನು ತಂದಾಗ, ಕಾಂಗ್ರೆಸ್ ಪಕ್ಷದ ಸಂಸದರು ಸದನದಿಂದ ಹೊರನಡೆದಿರುವುದು ದೇಶದ ಸುgಕ್ಷತೆ ವಿಚಾರದಲ್ಲಿ ಆ ಪಕ್ಷಕ್ಕೆ ಇರುವ ನಿಷ್ಕಾಳಜಿಗೆ ಸಾಕ್ಷಿ. ಕಾಂಗ್ರೆಸ್‍ನ ಮುಖವಾಡ ಈ ಮೂಲಕ ಮತ್ತೊಮ್ಮೆ ಕಳಚಿಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಆಡಳಿತದಲ್ಲಿದ್ದಾಗ ಹಿಂದೂಗಳ ವಿರುದ್ಧ ಮಸೂದೆಯನ್ನು ತರುತ್ತಿತ್ತು. ಆದರೆ, ಈಗ ದೇಶವಿರೋಧಿಗಳನ್ನು ಪತ್ತೆ ಹಚ್ಚಲು ಪೂರಕ ಮಸೂದೆ ತಂದಾಗ ಅದನ್ನು ಬೆಂಬಲಿಸದೆ ಸದನದ ಕಲಾಪ ಬಹಿಷ್ಕರಿಸಿರುವುದು ಕಾಂಗ್ರೆಸ್ ಪಕ್ಷದ ಭಯೋತ್ಪಾದಕರ ಪರ ನೀತಿಯನ್ನು ತೋರಿಸುವಂತಿದೆ ಎಂದು ಅವರು ತಿಳಿಸಿದ್ದಾರೆ.
ಮತದಾನದ ಸಮಯ ಬಂದಾಗ, ಕಾಂಗ್ರೆಸ್‍ನ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್‍ನ ಎಲ್ಲ ಸಂಸದರು ಮಸೂದೆ ಸರಿಯಿಲ್ಲ ಎಂದು ಹೇಳಿ ಸದನವನ್ನು ಬಹಿಷ್ಕರಿಸಿದರು. ಭಯೋತ್ಪಾದಕರಿಗೆ ಆರ್ಥಿಕವಾಗಿ ಸಹಾಯ ಮಾಡಿದ ಮತ್ತು ಜಿಹಾದಿ ಸಾಹಿತ್ಯದಿಂದ ಅವರನ್ನು ಭಯೋತ್ಪಾದಕರನ್ನಾಗಿ ಮಾಡಿದ ಜನರ ಬಗ್ಗೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್‍ಗೆ ಸಹಾನುಭೂತಿ ಯಾಕೆ ಎಂದು ಅರ್ಥವಾಗುತ್ತಿಲ್ಲ ಎಂದೂ ಅವರು ಪ್ರಶ್ನಿಸಿದ್ದಾರೆ.
ಭಯೋತ್ಪಾದಕರಿಗೆ ಹಣ ನೀಡುವವರನ್ನು ಮತ್ತು ಜಿಹಾದಿ ಸಾಹಿತ್ಯವನ್ನು ಒದಗಿಸಿ ಕೊಡುವವರನ್ನು ಭಯೋತ್ಪಾದಕರೆಂದು ಪರಿಗಣಿಸುವ ಮಸೂದೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಅಂಗೀಕರಿಸಿದೆ. ಇದಕ್ಕಾಗಿ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಧನ್ಯವಾದ ಸಮರ್ಪಿಸುವುದಾಗಿ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ
ಭಯೋತ್ಪಾದಕರ ದುಷ್ಕøತ್ಯವನ್ನು ಗುರುತಿಸಿ, ಶಿಕ್ಷಿಸಿ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತೊಗೆಯಲು ಕಠಿಣ ಕಾನೂನುಗಳನ್ನು ತಂದಿರುವ ಬಿಜೆಪಿ ಸರಕಾರ ಮತ್ತು ಕೇಂದ್ರದ ನಾಯಕರ ಕ್ರಮಕ್ಕೆ ರಾಜ್ಯದ ಜನರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.