ಕಾಂಗ್ರೆಸ್ ಮೃದು ಹಿಂದುತ್ವಕ್ಕೆ ತಿರುಗೇಟು
Team Udayavani, Jan 10, 2018, 9:28 AM IST
ಬೆಂಗಳೂರು: ಗುಜರಾತ್ ಚುನಾವಣೆ ಬಳಿಕ ರಾಜ್ಯ ವಿಧಾನಸಭೆ ಚುನಾವಣೆಗೂ ಮೃದು ಹಿಂದುತ್ವ ಧೋರಣೆ ಅನುಸರಿಸಲು ಮುಂದಾಗಿರುವ ಕಾಂಗ್ರೆಸ್‌ಗೆ ತಿರುಗೇಟು ನೀಡಲು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ತ್ರಿವಳಿ ತಲಾಖ್ ನಿಷೇಧ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಮತ ಬ್ಯಾಂಕ್‌ಗೆ ಕೈಹಾಕಲು ನಿರ್ಧರಿಸಿದೆ.
ತ್ರಿವಳಿ ತಲಾಖ್ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರೂಪಿಸಿರುವ ಮುಸ್ಲಿಂ ಮಹಿಳೆಯರ (ವೈವಾಹಿಕ ಹಕ್ಕುಗಳ ಸಂರಕ್ಷಣೆ) ಮಸೂದೆ-2017ಕ್ಕೆ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದರೂ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಅಡ್ಡಿಪಡಿಸಿದ್ದನ್ನೇ ಪ್ರಮುಖವಾಗಿ ಪ್ರಸ್ತಾಪಿಸಿ ಮುಸ್ಲಿಂ ಮಹಿಳೆಯರು ಮತ್ತು ತಲಾಖ್ ನಿಷೇಧ ಬೆಂಬಲಿಸುವ ಸಮುದಾಯದ ಇತರರನ್ನು ಓಲೈಸಲು ಚಿಂತನೆ ನಡೆಸಿದೆ. ಈ ಜವಾಬ್ದಾರಿಯನ್ನು ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾಕ್ಕೆ ವಹಿಸಲು ತೀರ್ಮಾನಿಸಲಾಗಿದ್ದು, ಈಗಾಗಲೇ ಮೋರ್ಚಾದಿಂದ ಆ ಕುರಿತ ರೂಪರೇಷೆಗಳು ಸಿದ್ಧವಾಗುತ್ತಿದೆ. ಈಗಾಗಲೇ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಹಲವು ಸಭೆಗಳನ್ನು ಮಾಡಿದ್ದಾರೆ. ಆದರೆ, ಇದು ಪಕ್ಷದ ತಂತ್ರಗಾರಿಕೆಯಾಗಿರುವುದರಿಂದ ಹೆಚ್ಚಿನ ಮಾಹಿತಿ ನೀಡಲು ಮುಖಂಡರು ನಿರಾಕರಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹಿಂದುತ್ವ ಅಜೆಂಡಾಕ್ಕೆ ಪ್ರತಿಯಾಗಿ ಮೃದು ಹಿಂದುತ್ವ ಧೋರಣೆ ಅನುಸರಿಸಲು ಕಾಂಗ್ರೆಸ್ ಚಿಂತನೆ ನಡೆಸಿತ್ತು. ಅಲ್ಲದೆ, ಇತ್ತೀಚೆಗೆ ನಡೆದ ಗುಜರಾತ್ ಚುನಾವಣೆಯಲ್ಲೂ ಕಾಂಗ್ರೆಸ್ ಮೃದು ಹಿಂದುತ್ವ ನೀತಿ ಅನುಸರಿಸಿದ್ದು ಸ್ವಲ್ಪ ಮಟ್ಟಿಗೆ ಸಹಾಯವಾಗಿತ್ತು. ಹೀಗಾಗಿ ರಾಜ್ಯದಲ್ಲೂ ಮೃದು ಹಿಂದುತ್ವ ನೀತಿಗೆ ಕಾಂಗ್ರೆಸ್ ಮಣೆ ಹಾಕಿದೆ. ಆ ಮೂಲಕ ಬಿಜೆಪಿಯ ಹಿಂದೂ ವೋಟ್‌ಬ್ಯಾಂಕ್ ಅನ್ನು ಒಡೆಯಲು ಮುಂದಾಗಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನ ವೋಟ್‌ಬ್ಯಾಂಕ್ ಆಗಿರುವ ಮುಸ್ಲಿಂ ಸಮುದಾಯದ ಮೇಲೆ ದೃಷ್ಟಿ ಹರಿಸಿರುವ ಬಿಜೆಪಿ, ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಜಾರಿಗೊಳಿಸಿರುವ ಯೋಜನೆಗಳು, ಈ ಹಿಂದೆ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ನೀಡಿದ ಕಾರ್ಯಕ್ರಮಗಳ ಜತೆಗೆ ತ್ರಿವಳಿ ತಲಾಖ್ ವಿಚಾರಗಳನ್ನು ಮುಂದಿಟ್ಟುಕೊಂಡು ಆ ಸಮುದಾಯದಲ್ಲಿ ಜಾಗೃತಿ ಮೂಡಿಸಲು ತೀರ್ಮಾನಿಸಿದೆ.
ಕಾಂಗ್ರೆಸ್ ವಿರುದ್ಧ ಆರೋಪ ಪಟ್ಟಿ: ಅದರಲ್ಲೂ ತ್ರಿವಳಿ ತಲಾಖ್ ವಿಚಾರವನ್ನು ಪ್ರಧಾನವಾಗಿಟ್ಟುಕೊಂಡು ಮುಸ್ಲಿಂ ಮಹಿಳೆಯರ ಗಮನ ಸೆಳೆಯಲು ತಂತ್ರಗಾರಿಕೆ ರೂಪಿಸುತ್ತಿದ್ದು, ತ್ರಿವಳಿ ತಲಾಖ್‌ಗೆ ಕಾಂಗ್ರೆಸ್ ಹೇಗೆಲ್ಲಾ ಅಡ್ಡಗಾಲು ಹಾಕುತ್ತಿದೆ ಎಂಬುದನ್ನು ಅವರಿಗೆ ಮನವರಿಕೆ ಮಾಡಲು ಈ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಡವಳಿಕೆ ಕುರಿತು ಆರೋಪ ಪಟ್ಟಿಯೊಂದನ್ನು ಕೂಡ ಸಿದ್ಧಪಡಿಸಲಿದೆ ಎಂದು ತಿಳಿದುಬಂದಿದೆ. ತ್ರಿವಳಿ ತಲಾಖ್ ಪ್ರಕರಣದಲ್ಲಿ ತಲಾಖ್ ನಿಷೇಧಕ್ಕೆ ವಿರುದ್ಧವಾಗಿ ಕಾಂಗ್ರೆಸ್‌ನ ಕಪಿಲ್ ಸಿಬಲ್ ಸುಪ್ರೀಂಕೋಟ್ ìನಲ್ಲಿ ವಾದ ಮಂಡಿಸಿದ್ದು, ಲೋಕಸಭೆಯಲ್ಲಿ ತ್ರಿವಳಿ
ತಲಾಖ್ ನಿಷೇಧ ಮಸೂದೆ ಮಂಡಿಸಿದಾಗ ಆರಂಭದಲ್ಲಿ ವಿರೋಧ ವ್ಯಕ್ತಪಡಿಸಿ ಸಂಸದೀಯ ಸ್ಥಾಯಿ ಸಮಿತಿಗೆ ಒಪ್ಪಿಸಬೇಕು ಎಂದು ಹೇಳಿ ನಂತರ ಸರ್ಕಾರಕ್ಕೆ ಬಹುಮತ ಇದ್ದ ಕಾರಣ ಅನಿವಾರ್ಯವಾಗಿ ಒಪ್ಪಿಕೊಂಡಿದ್ದು, ರಾಜ್ಯಸಭೆಯಲ್ಲಿ ಸರ್ಕಾರಕ್ಕೆ ಬಹುಮತ ಇಲ್ಲದ ಕಾರಣ ಮಸೂದೆ ಅಂಗೀಕಾರವಾಗದಂತೆ ನೋಡಿಕೊಂಡಿರುವುದನ್ನು ಪ್ರಮುಖವಾಗಿ ಪ್ರಸ್ತಾಪಿಸಲಿದೆ.
ನಿಲುವು ಸ್ಪಷ್ಟಪಡಿಸಿಲ್ಲ
ತ್ರಿವಳಿ ತಲಾಖ್ ನಿಷೇಧ ಮಸೂದೆಯಲ್ಲಿ ಇರುವ ಕೆಲವೊಂದು ಲೋಪದೋಷಗಳನ್ನು ಸರಿಪಡಿಸಬೇಕೆಂಬ ಕಾರಣಕ್ಕೆ ರಾಜ್ಯಸಭೆಯಲ್ಲಿ ವಿರೋಧಿಸಿದ್ದಾಗಿ ಕಾಂಗ್ರೆಸ್ ಹೇಳುತ್ತಿದೆಯಾದರೂ ನಿಷೇಧಕ್ಕೆ ಸಂಬಂಧಿಸಿದಂತೆ ಇನ್ನೂ ತನ್ನ ನಿಲುವು ಸ್ಪಷ್ಟಪಡಿಸಿಲ್ಲ. ಇನ್ನೊಂದೆಡೆ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿರುವ ತನ್ವೀರ್ ಸೇs… ಈಗಾಗಲೇ ತ್ರಿವಳಿ ತಲಾಖ್ ನಿಷೇಧಿಸುವ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವರ ವಿರೋಧದ ಕುರಿತು ಬಿಜೆಪಿ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ನಿಲುವೇನು ಎಂಬ ಬಿಜೆಪಿ ಪ್ರಶ್ನೆಗೆ ಅವರು ಉತ್ತರಿಸಿಲ್ಲ. ಇದರಿಂದಾಗಿ
ರಾಜ್ಯದ ಕಾಂಗ್ರೆಸ್ ತ್ರಿವಳಿ ತಲಾಖ್ ನಿಷೇಧಕ್ಕೆ ವಿರುದ್ಧವಾಗಿ ನಿಂತು ಮುಸ್ಲಿಂ ಮಹಿಳೆಯರಿಗೆ ಅನ್ಯಾಯ ಮಾಡಲು ಹೊರಟಿದೆ ಎಂದು ಬಿಂಬಿಸಲು ಕೂಡ ಬಿಜೆಪಿ ತೀರ್ಮಾನಿಸಿದೆ ಎಂದು ಮೂಲಗಳು ಹೇಳಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ವಾರ್
ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬೆಂಗಳೂರಿನಲ್ಲಿ ನೀಡಿದ ಹೇಳಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಟೀಕೆಗೆ ಬಿಜೆಪಿ ನಾಯಕರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವುದು ಹೀಗೆ.
ಮಿಸ್ಟರ್ ಸಿದ್ದರಾಮಯ್ಯ, ಗೋ ಸಂರಕ್ಷಣೆ ಕುರಿತ ಕಾನೂನಿನ ಬಗ್ಗೆ ಏನು ಹೇಳುತ್ತೀರಿ ಮತ್ತು ಯುವ ಕಾಂಗ್ರೆಸ್ ಮುಖಂಡರು
ಗೋಹತ್ಯೆ ಮಾಡುತ್ತಿರುವ ಬಗ್ಗೆ ನಿಮ್ಮ ನಿಲುವೇನು? ಈ ಕುರಿತ ಚರ್ಚೆಯ ಗಮನ ಬೇರೆಡೆ ಸೆಳೆಯ ಬೇಡಿ. ಗೋ ಸಂರಕ್ಷಣೆ ಕುರಿತಂತೆ ಯೋಗಿ ಆದಿತ್ಯನಾಥ್, ಬಿಜೆಪಿಯ ಬದ್ಧತೆಯನ್ನು ಪ್ರಶ್ನಿಸಲು ಯಾರಿಂದಲೂ ಸಾಧ್ಯವಿಲ್ಲ.
●ಪಿ.ಮುರಳೀಧರರಾವ್, ಬಿಜೆಪಿ ರಾಜ್ಯ ಉಸ್ತುವಾರಿ
ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಮೇಲೆ ಕೇವಲ ಆರೇ ತಿಂಗಳಿನಲ್ಲಿ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿ¨ªಾರೆ. ಕರ್ನಾಟಕದಲ್ಲಿ ಭ್ರಷ್ಟ ಆಡಳಿತ ಮಾಡುತ್ತಿರುವ ಸಿದ್ದರಾಮಯ್ಯನ ವರಿಗೆ ಯೋಗಿಯನ್ನು ಟೀಕಿಸುವ ಯೋಗ್ಯತೆಯಿಲ್ಲ. ಇದಕ್ಕೆ ತಕ್ಕ ಪಾಠವನ್ನು
ಜನರು ಚುನಾವಣೆಯಲ್ಲಿ ಕಲಿಸುತ್ತಾರೆ.
● ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
ವರ್ಷವಿಡೀ ಕೊಲೆಗಡುಕ ಟಿಪ್ಪುವಿನ ನಾಮ ಜಪಿಸಿ ನಾನೂ ದನದ ಮಾಂಸ ತಿನ್ನುವೆ ಎಂದು ಹೆಮ್ಮೆಯಿಂದ ಹೇಳುವ ಗೋಭಕ್ಷಕ ಸಿದ್ದರಾಮಯ್ಯ ಅವರಿಗೆ ಹಿಂದೂ ಧರ್ಮ ಹಾಗೂ ಹಿಂದುತ್ವದ ಕುರಿತು ಮಾತನಾಡುವ ಯೋಗ್ಯತೆಯಿಲ್ಲ.
●ಸಿ.ಟಿ.ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ
ಪ್ರದೀಪ್ ಕುಮಾರ್ ಎಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.