ಹಳಿಯಾಳ ಸಿಡಿಲು ಬಡಿದು ರೈತ ಸಾವು
Team Udayavani, May 6, 2017, 11:50 AM IST
ಬೆಂಗಳೂರು: ರಾಜ್ಯದ ಕೆಲವೆಡೆ ಶುಕ್ರವಾರವೂ ಮಳೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಸಿಡಿಲಿಗೆ
ರೈತನೊಬ್ಬ ಬಲಿಯಾಗಿದ್ದಾನೆ. ಹಳಿಯಾಳ ತಾಲೂಕಿನ ಶೇಖನಕಟ್ಟಾ ಗ್ರಾಮದಲ್ಲಿ ಗುರುವಾರ ತಡರಾತ್ರಿ ಸಿಡಿಲು ಬಡಿದು ಗೋವಿಂದ ಸಿ.ಗೌಡಾ (64) ಎಂಬುವರು ಮೃತಪಟ್ಟಿದ್ದಾರೆ. ಇವರು ರಾತ್ರಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಸ್ಥಳಕ್ಕೆ ಬೆಳಗ್ಗೆ ತಹಶೀಲ್ದಾರ ವಿದ್ಯಾಧರ ಗುಳಗುಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಾದ್ಯಂತ ಮಳೆಯಾಗಿದ್ದು, ಸಿಡಿಲು ಬಡಿದು ತಾಲೂಕಿನ ಮಳ್ಳ ಗ್ರಾಮದಲ್ಲಿ 3 ತೆಂಗಿನ ಮರಗಳು ಭಸ್ಮವಾಗಿವೆ. ಸಮೀಪದಲ್ಲಿದ್ದ 2 ಮನೆಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಬಿದ್ದ ತೆಂಗಿನಮರಗಳ ಸಮೀಪದ ಮನೆಯೊಳಗಿದ್ದ ಬಾಳೆಗುಂಡಿ ತಿಮ್ಮಪ್ಪ ಮತ್ತು ತ್ರಿವೇಣಿ ಹಾಗೂ ನಾಗರಾಜ ಮತ್ತು ಮೀರಾ ದಂಪತಿಗಳಿಗೆ ತೀವ್ರ ಆಘಾತವಾಗಿದೆ. ಇವರನ್ನು ಉಪವಿಭಾಗೀಯ
ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ತೆಂಗಿನ ಮರಕ್ಕೆ ತಗುಲಿದ್ದ ಬೆಂಕಿಯನ್ನು
ನಂದಿಸಿ, ಹೆಚ್ಚಿನ ಯಾವುದೇ ಅಪಾಯವಾದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು.
ಈ ಮಧ್ಯೆ, ಶುಕ್ರವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಅತಿ ಹೆಚ್ಚು, 2 ಸೆಂ.ಮೀ. ಮಳೆಯಾಯಿತು. ಚಿತಗುಪ್ಪ, ಜಯಪುರದಲ್ಲಿ ತಲಾ 1 ಸೆಂ.ಮೀ. ಮಳೆಯಾಯಿತು. ಸುಬ್ರಹ್ಮಣ್ಯ, ಕಡಬ ಸೇರಿ ಸುಳ್ಯ ತಾಲೂಕಿನಾದ್ಯಂತ ಮಳೆ ಬಂದಿದೆ. ಸುಳ್ಯದಲ್ಲಿ ಗುಡುಗು ಸಹಿತ ಮಳೆ ಸುರಿದಿದೆ. ಉಳಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಗರಿಷ್ಠ ತಾಪ ಮಾನ ಸಾಮಾನ್ಯಕ್ಕಿಂತ ಅಧಿಕವಾಗಿದ್ದರೆ ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಎಲ್ಲೆಡೆ ಸಾಮಾನ್ಯವಾಗಿತ್ತು. ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠವೆನಿಸಿದ 41.4 ಡಿ.ಸೆ.ತಾಪಮಾನ ದಾಖಲಾಯಿತು.
2-3 ದಿನ ಮಳೆ ಸಂಭವ: ಈ ಮಧ್ಯೆ, ಮೇಲ್ಮೆ„ ಸುಳಿಗಾಳಿ ಇರುವುದರಿಂದ ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಇನ್ನೂ ಎರಡು-ಮೂರು ದಿನ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.