ಶಿಕ್ಷಕ, ಉಪನ್ಯಾಸಕರಿಂದ ವಿಶೇಷ ಭತ್ಯೆ ವಸೂಲಿಗೆ ಇಲಾಖೆ ಆದೇಶ


Team Udayavani, Nov 8, 2017, 8:12 AM IST

08-11.jpg

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ಉಪನ್ಯಾಸಕರಿಗೆ ನೀಡಿರುವ ವಿಶೇಷ ಭತ್ಯೆಯನ್ನು ವಾಪಸ್‌ ಪಡೆದಿರುವ ಮಾದರಿಯಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಮಂಜೂರು ಮಾಡಿದ ವಿಶೇಷ ಭತ್ಯೆ ವಸೂಲಾತಿಗೂ ಆದೇಶ ನೀಡಿದೆ.

2008 ಆಗಸ್ಟ್‌ 1ರ ನಂತರ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಶಿಕ್ಷಕರಾಗಿ ನೇಮಕಾತಿ ಪಡೆದವರಿಗೆ ವಿಶೇಷ ಭತ್ಯೆಯ ಸೌಲಭ್ಯ ಇರುವುದಿಲ್ಲ. ಆದರೆ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರ್ಕಾರಿ, ಅನುದಾನಿತ ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು, ಎಚ್‌ಆರ್‌ಎಂಎಸ್‌ ತಂತ್ರಾಂಶದಲ್ಲಿ ನೇರ ನೇಮಕಾತಿಗೊಂಡಿರುವ ಸರ್ಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ವಿಶೇಷ ಭತ್ಯೆ ನೀಡಿರುವುದು ಮಹಾಲೇಖಪಾಲಕರ ವರದಿಯಲ್ಲಿ ಸಾಬೀತಾಗಿದೆ.

ರಾಜ್ಯದ 30 ಜಿಲ್ಲೆಗೆ 2008ರ ಆಗಸ್ಟ್‌ ನಂತರ ಪ್ರಾಥಮಿಕ ಶಾಲೆಗೆ 1,557, ಪ್ರೌಢಶಾಲೆಗೆ 3,789 ಶಿಕ್ಷಕರನ್ನು ಹಾಗೂ ಪಿಯುಗೆ 1,896 ಉಪನ್ಯಾಸಕರು ಸೇರಿ ಒಟ್ಟೂ 7,242 ನೇಮಕಾತಿ ನಡೆಸಿದೆ. ಪ್ರಾಥಮಿಕ ಶಾಲೆಯ 1,557 ಶಿಕ್ಷಕರಿಗೆ 127.39 ಲಕ್ಷ, ಪ್ರೌಢಶಾಲೆಯ 3,789 ಶಿಕ್ಷಕರಿಗೆ 512.49 ಹಾಗೂ 1,896 ಉಪನ್ಯಾಸಕರಿಗೆ 193.25 ಲಕ್ಷ ವಿಶೇಷ ಭತ್ಯೆ ನೀಡಲಾಗಿದೆ. 2008ರ ನಂತರ ನೇಮಕಗೊಂಡಿರುವ ಶಿಕ್ಷಕರ ಉಪನ್ಯಾಸಕರಿಗೆ 8.33 ಕೋಟಿ ವಿಶೇಷ ಭತ್ಯೆ ರೂಪದಲ್ಲಿ ಮಂಜೂರು ಮಾಡಲಾಗಿದೆ.

ವಿಶೇಷ ಭತ್ಯೆ ರೂಪದಲ್ಲಿ ನೀಡಿದ ಹಣವನ್ನು ಪೂರ್ಣ ಪ್ರಮಾಣದಲ್ಲಿ ವಸೂಲಿ ಮಾಡುವಂತೆ ಇಲಾಖೆ ಈಗ ಆದೇಶ ಹೊರಡಿಸಿದೆ. ತಿಂಗಳಿಗೆ 200, 300 ಅಥವಾ 400 ರೂ. ವಿಶೇಷ ಭತ್ಯೆ ಪಡೆಯುತ್ತಿದ್ದ ಶಿಕ್ಷಕ ಅಥವಾ ಉಪನ್ಯಾಸಕರಿಗೆ 10 ರಿಂದ 15 ಸಾವಿರ ರೂ.ಗಳನ್ನು ವಾಪಸ್‌ ನೀಡಬೇಕು. ಈವರೆಗೆ ವಿಶೇಷ ಭತ್ಯೆಯಾಗಿ ಪಡೆದ ಪೂರ್ತಿ ಹಣವನ್ನು ಒಮ್ಮೆಲೇ ವಸೂಲಿ ಮಾಡಬೇಕೇ ಅಥವಾ ತಿಂಗಳ ಕಂತಿನ ರೂಪದಲ್ಲಿ ವಸೂಲಿ ಮಾಡಬೇಕೆ ಎಂಬುದನ್ನು ಇಲಾಖೆ ಸ್ಪಷ್ಟಪಡಿಸಿಲ್ಲ.

2008ರ ಆಗಸ್ಟ್‌ 1ರಿಂದ 2012ರ ಏ.30ರವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ 200 ರೂ., 2012ರ ಮೇ 1ರಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 300 ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ 400 ರೂ. ವಿಶೇಷ ಭತ್ಯೆ ನೀಡಲಾಗಿದೆ. ಈ ಎಲ್ಲಾ ಅವಧಿಯಲ್ಲಿ ಎಷ್ಟು ಹಣವನ್ನು ವಿಶೇಷ ಭತ್ಯೆಯ ರೂಪದಲ್ಲಿ ಜಮಾ ಮಾಡಲಾಗಿದೆ ಎಂಬುದರ ಮಾಹಿತಿಯನ್ನು ಸಲ್ಲಿಸುವಂತೆ ಆಯಾ ಜಿಲ್ಲೆಯ
ಉಪನಿರ್ದೇಶಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

ಟಾಪ್ ನ್ಯೂಸ್

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.