ಶಿಕ್ಷಣ-ಆರೋಗ್ಯ ಕಾಯ್ದೆ ಸಮರ್ಥನೆ ಸವಾಲು
Team Udayavani, Jun 19, 2017, 11:47 AM IST
ಬೆಂಗಳೂರು: ರಾಜ್ಯ ಸರ್ಕಾರ “ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ವಿಧೇಯಕ-2017′ ಹಾಗೂ “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ’ ಮೂಲಕ “ಶಿಕ್ಷಣ’ ಹಾಗೂ “ಆರೋಗ್ಯ’ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜೇನುಗೂಡಿಗೆ ಕಲ್ಲು ಹಾಕಿದೆ.
ಎರಡೂ ವಿಧೇಯಕ ಮಂಡನೆಗಾಗಿ ವಿಧಾನಮಂಡಲ ಅಧಿವೇಶನ ಆರಂಭವಾಗುವುದನ್ನೇ ಕಾಯುತ್ತಿದ್ದ ಸರ್ಕಾರ ಕಳೆದ ವಾರ ವಿಧಾನಸಭೆಯಲ್ಲಿ ಎರಡೂ ವಿಧೇಯಕಗಳನ್ನು ಮಂಡಿಸಿದೆ. ಪರಿಷತ್‌ನಲ್ಲಿ ಇನ್ನೂ ಮಂಡನೆಯಾಗಬೇಕಿದೆ. ಆದರೆ, ಇದು ಅಂಗೀಕಾರಕ್ಕೆ ಮುನ್ನವೇ ವಿವಾದದ ಸ್ವರೂಪ ಪಡೆದು ಶಿಕ್ಷಣ ಕ್ಷೇತ್ರದ ತಜ್ಞರು ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರು ಸರ್ಕಾರದ ಮೇಲೆ ತಿರುಗಿಬಿದ್ದಿದ್ದಾರೆ.
ಇದರ ಜೊತೆಗೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರದ ತೀರ್ಮಾನದ ವಿರುದಟಛಿವಿದ್ದು,
ಸೋಮವಾರದಿಂದ ಮೂರು ದಿನಗಳ ಕಾಲ ಮುಂದುವರಿಯುವ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲಿ ಎರಡೂ ವಿಚಾರಗಳೆನ್ನೆತ್ತಿಕೊಂಡು ಮುಗಿಬೀಳಲು ಎಲ್ಲಾ ಕಾರ್ಯತಂತ್ರ ರೂಪಿಸಿಕೊಂಡಿವೆ. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‌ಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರಂತೂ ಎಂತಹುದೇ ಪರಿಸ್ಥಿತಿಯಲ್ಲೂ ವಿಧೇಯಕ ಹಿಂದೆ ಪಡೆಯುವ ಮಾತೇ ಇಲ್ಲ ಎಂದು ಹಠ ಹಿಡಿದಿದ್ದಾರೆ. ಹೀಗಾಗಿ ಸದನವು ಬಿಸಿ ಚರ್ಚೆ, ವಾಗ್ವಾದಕ್ಕೆ ಸಾಕ್ಷಿಯಾಗುವ ಸಾಧ್ಯತೆಗಳಿವೆ. ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ
ಮೂಲಕ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳ ಮೂಲಸೌಕರ್ಯ ಮತ್ತು ಸೇವೆಯ ಗುಣಮಟ್ಟ ಆಧರಿಸಿ ಸರ್ಕಾರವೇ ಚಿಕಿತ್ಸಾ ದರ ನಿಗದಿಪಡಿಸುವುದು ಹಾಗೂ ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚಾಗಿ ವಸೂಲಿ ಮಾಡಿದರೆ ಜೈಲುಶಿಕ್ಷೆ ವಿಧಿಸುವ ಅಂಶವನ್ನು ಕಾಯ್ದೆಯಲ್ಲಿ ಸೇರಿಸಿರುವುದು ಖಾಸಗಿ ವೈದ್ಯಕೀಯ ಸಂಸ್ಥೆಗಳನ್ನು ಕೆರಳಿಸಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದಟಛಿ ತಿರುಗಿಬಿದ್ದಿರುವ ವೈದ್ಯರು ಒಂದು ದಿನದ ಸೇವೆ ಸ್ಥಗಿತದ “ಬಿಸಿ’ಮುಟ್ಟಿಸಿ ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ್ದಾರೆ. ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಹಾಗೂ ಖ್ಯಾತ ವೈದ್ಯ ಡಾ.ದೇವಿಶೆಟ್ಟಿ ಜತೆಗೆ ನಿಂತಿರುವುದು ಇವರ ಹೋರಾಟಕ್ಕೆ ಬಲ ಬಂದಿದೆ. ಇದು ಸರ್ಕಾರಕ್ಕೂ ತಲೆನೋವಾಗಿ
ಪರಿಣಮಿಸಿದೆ. ಇನ್ನು, ವಿಶ್ವವಿದ್ಯಾಲಯಗಳ ವಿಚಾರದಲ್ಲಿ ಏಕರೂಪದ ನೀತಿ ಹೆಸರಿನಲ್ಲಿ ಕುಲಪತಿ, ಕುಲಸಚಿವ
ನೇಮಕಾತಿ, ಕಾಮಗಾರಿಗಳ ಟೆಂಡರ್ ಸಹಿತ ಎಲ್ಲ ಅಧಿಕಾರ ಸರ್ಕಾರದ ನಿಯಂತ್ರಣದಲ್ಲಿಟ್ಟುಕೊಳ್ಳುವ ಹಾಗೂ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ಉದ್ದೇಶದ ಕಾಯ್ದೆ ಜಾರಿಗೊಳಿಸಲು ಮುಂದಾಗಿರುವುದು ಶಿಕ್ಷಣ ತಜ್ಞರ ಕೋಪಕ್ಕೆ ಕಾರಣವಾಗಿದೆ.
ವಿಶ್ವವಿದ್ಯಾಲಯಗಳ ಆಡಳಿತದಲ್ಲಿ ಸರ್ಕಾರ ಎಲ್ಲ ಹಂತಗಳಲ್ಲೂ ಮೂಗು ತೂರಿಸುವುದರಿಂದ ವಿವಿ ಘನತೆ ತಗ್ಗಲಿದೆ . ಜತೆಗೆ ವಿಶ್ವವಿದ್ಯಾಲಯಗಳಲ್ಲೂ ರಾಜಕಾರಣ ನುಸುಳುತ್ತದೆ ಎಂಬ ಆತಂಕ ಅವರದು. ವಿಧಾನಮಂಡಲದ ಮಳೆಗಾಲದ ಅಧಿವೇಶನ ಜೂ.15ಕ್ಕೆ ಮುಗಿಯಬೇಕಿತ್ತಾದರೂ ವಿಧೇಯಕಗಳಿಗೆ ಅಂಗೀಕಾರ ಪಡೆಯುವ ಸಲುವಾಗಿಯೇ ಮೂರು ದಿನ ವಿಸ್ತರಿಸಲಾಗಿದೆ. ಈ ಮೂರು ದಿನಗಳಲ್ಲಿ ಪರಿಷತ್‌ನಲ್ಲಿ ವಿಧೇಯಕಗಳನ್ನು ಮಂಡಿಸಿ, ಉಭಯ ಸದನಗಳಲ್ಲೂ ಚರ್ಚಿಸಿ ಅನುಮೋದನೆ ಪಡೆಯಬೇಕಿದೆ. ಆದರೆ, ಇದು ಸಾಧ್ಯವಾಗದು ಎಂಬ ಮಾತುಗಳು ಕೇಳಿಬರುತ್ತಿವೆ. ಮೂಲಗಳ ಪ್ರಕಾರ, ತೀರಾ ಹೆಚ್ಚು ಎಂದರೆ ವಿಶ್ವವಿದ್ಯಾಲಯಗಳ ವಿಧೇಯಕ ಒಂದಷ್ಟು
ಮಾರ್ಪಾಡುಗಳೊಂದಿಗೆಅಂಗೀಕಾರವಾಗಬಹುದು.
ಆದರೆ, ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ ಅಂಗೀಕಾರ ಸಾಧ್ಯತೆ ಕಡಿಮೆ. ಸರ್ಕಾರವೇ
ವಿಧೇಯಕ ಹಿಂದಕ್ಕೆ ಪಡೆಯುವ ಮಟ್ಟಕ್ಕೆ ಖಾಸಗಿ ವೈದ್ಯಕೀಯ ಸಂಸ್ಥೆಗಳ ಲಾಬಿ ಜೋರಾಗಿದ್ದು ಸರ್ಕಾರವನ್ನೇ ಅಲುಗಾಡಿಸುವ ಮಟ್ಟದಲ್ಲಿದೆ ಎಂದು ಹೇಳಲಾಗಿದೆ. ಇದಕ್ಕೆ ಕಾರಣ ಮೂರು ಪಕ್ಷಗಳಲ್ಲಿರುವ ರಾಜಕಾರಣಿಗಳು ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳ ಮಾಲೀಕರಾಗಿರುವುದು. ಹೀಗಾಗಿ, ಎರಡೂ ಕಾಯ್ದೆಗಳ ವಿಚಾರದಲ್ಲಿ ಸರ್ಕಾರ
ಯಶಸ್ವಿಯಾಗುತ್ತಾ ಅಥವಾ ಲಾಬಿ ಮತ್ತು ಹೋರಾಟಕ್ಕೆ ಮಣಿಯುತ್ತಾ ಕಾದು ನೋಡಬೇಕಿದೆ.
– ಎಸ್.ಲಕ್ಷ್ಮಿನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.