ಚುನಾವಣಾ ನೀತಿ ಸಂಹಿತೆ ಸಡಿಲ
Team Udayavani, May 4, 2019, 3:00 AM IST
ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಎರಡು ಹಂತದ ಮತದಾನ ಮುಗಿದ ಹಿನ್ನೆಲೆಯಲ್ಲಿ ಕೆಲವು ಆಡಳಿತಾತ್ಮಕ ಹಾಗೂ ಅಭಿವೃದ್ಧಿ ವಿಷಯಗಳಿಗೆ ಚುನಾವಣಾ ನೀತಿ ಸಂಹಿತೆಯನ್ನು ಸಡಿಲಗೊಳಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಲಸೌಕರ್ಯ, ಅಭಿವೃದ್ಧಿ ಕಾಮಗಾರಿಗಳು, ಸರಕು ಮತ್ತು ಸೇವೆಗಳ ಸಂಗ್ರಹಣೆಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲು, ಅದನ್ನು ಅಂತಿಮಗೊಳಿಸಿ ಕಾರ್ಯಾದೇಶ ನೀಡಲು ಚುನಾವಣಾ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಲಾಗಿದೆ.
ಅದೇ ರೀತಿ ಸರ್ಕಾರ ವಿವಿಧ ಇಲಾಖೆಗಳು, ನಿಗಮ-ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ಸೇರಿ ರಾಜ್ಯದಲ್ಲಿ ಶಾಸನೇತರ ಸಂಸ್ಥೆಗಳಲ್ಲಿನ ನೇಮಕಾತಿ ಮತ್ತು ವರ್ಗಾವಣೆ ಪ್ರಕ್ರಿಯೆಗೂ ಚುನಾವಣಾ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಲಾಗಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ ಪ್ರಸ್ತಾವನೆಗಳಿಗೆ ಕೇಂದ್ರ ಚುನಾವಣಾ ಆಯೋಗ ಅನುಮೋದನೆ ನೀಡಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.