ಆನೆಗಳಿಗೆ ಧೈರ್ಯ ತುಂಬಲು ಕುಶಾಲು ತೋಪು
Team Udayavani, Sep 14, 2019, 3:06 AM IST
ಮೈಸೂರು: ದಸರಾ ಮಹೋತ್ಸದಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಮತ್ತು ಅಶ್ವಪಡೆಗೆ ಈ ಸಾಲಿನ ಮೊದಲ ಸಿಡಿಮದ್ದು ಸಿಡಿಸುವ ತಾಲೀಮನ್ನು ಶುಕ್ರವಾರ ಯಶಸ್ವಿಯಾಗಿ ನಡೆಸಲಾಯಿತು. ಅರಮನೆಯ ವರಾಹ ಗೇಟ್ ಬಳಿಯಿರುವ ವಾಹನ ನಿಲುಗಡೆಯ ಸ್ಥಳದಲ್ಲಿ ತಾಲೀಮು ನಡೆಯಿತು.
ಜಂಬೂ ಸವಾರಿ ವೇಳೆ ಹಾಗೂ ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯತು ವೇಳೆ ವಿಜಯದ ಸಂಕೇತವಾಗಿ 21 ಸುತ್ತು ಕುಶಾಲು ತೋಪು ಸಿಡಿಸುವುದು ಪರಂಪರೆ. ಈ ಹಿನ್ನೆಲೆ ಯಲ್ಲಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಜನ ಸಂದಣಿಯ ನಡುವೆ ಸಾಗಲಿರುವ ಆನೆ ಹಾಗೂ ಕುದುರೆಗಳು ಕುಶಾಲು ತೋಪಿನ ಶಬ್ದಕ್ಕೆ ಹೆದರದಂತೆ ತರಬೇತಿ ನೀಡುವುದಕ್ಕಾಗಿ ಸಿಡಿಮದ್ದಿನ ತಾಲೀಮು ನಡೆಸಲಾಗುತ್ತದೆ.
ತಾಲೀಮಿನ ವೇಳೆ ಎರಡನೇ ಬಾರಿಗೆ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಧನಂಜಯ ಹಾಗೂ ಮೂರು ಹೊಸ ಆನೆಗಳಾದ ಈಶ್ವರ, ಲಕ್ಷ್ಮೀ ಹಾಗೂ ಜಯಪ್ರಕಾಶ ಬೆದರಿದವು. ಬಹುತೇಕ ಕುದುರೆಗಳು ಸಿಡಿಮದ್ದಿನ ಶಬ್ದಕ್ಕೆ ವಿಚಲಿತಗೊಂಡವು. ಎಆರ್‌ಎಸ್‌ಐ ಕುಮಾರಸ್ವಾಮಿ ನೇತೃತ್ವದಲ್ಲಿ ಪಿರಂಗಿದಳದ 30 ಮಂದಿ, ಸಿಎಆರ್ ಪೊಲೀಸರು 6 ಪಿರಂಗಿಗಳ ಮೂಲಕ ಮೂರು ಸುತ್ತು ಹಾಗೂ ಕೊನೆಯಲ್ಲಿ ಮೂರು ಪಿರಂಗಿಯಲ್ಲಿ ತಲಾ ಒಂದೊಂದರಂತೆ ಒಟ್ಟು 21 ಸಿಡಿಮದ್ದನ್ನು ಸಿಡಿಸುವ ಮೂಲಕ ಗಜಪಡೆ ಹಾಗೂ ಅಶ್ವರೋಹಿ ಪಡೆಗೆ ಶಬ್ದದ ತಾಲೀಮು ನೀಡಿದರು.
ಕಾರ್ಯಾಲಯ ಉದ್ಘಾಟನೆ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನೂತನವಾಗಿ ಆರಂಭಿಸಲಾದ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯವನ್ನು ಉಸ್ತುವಾರಿ ಸಚಿವ ಸೋಮಣ್ಣ ಶುಕ್ರವಾರ ಉದ್ಘಾಟಿಸಿದರು. ಜೊತೆಗೆ, ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಆಹ್ವಾನ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.