“ಕಾರ್ಯಕಾರಿಣಿ ಸಭೆಗೆ ಇನ್ನೂ ಆಹ್ವಾನ ಬಂದಿಲ್ಲ’
Team Udayavani, May 4, 2017, 12:30 PM IST
ಹರಿಹರ: ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ಏಕಪಕ್ಷೀಯ ನಿರ್ಧಾರಗಳೇ ಗೊಂದಲಕ್ಕೆ ಕಾರಣವಾಗಿದ್ದು, ಶೀಘ್ರ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿರುವ ಮೇಲ್ಮನೆ ವಿಪಕ್ಷ ನಾಯಕ
ಕೆ.ಎಸ್. ಈಶ್ವರಪ್ಪ, ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಇನ್ನೂ ಆಹ್ವಾನ ಬಂದಿಲ್ಲ. ಬಂದ ನಂತರ ಭಾಗವಹಿಸುವ ಬಗ್ಗೆ
ನಿರ್ಧರಿಸುವುದಾಗಿ ಹೇಳಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.27ರಂದು ರಾಷ್ಟ್ರೀಯ ಅಧ್ಯಕ್ಷ ಅಮೀತ್ ಶಾ ಭೇಟಿಯಾದಾಗ ಫೆ.10ರೊಳಗೆ ಒಟ್ಟಾಗಿ ಕುಳಿತು ಚರ್ಚಿಸಿ ಎಲ್ಲ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸೂಚಿಸಿದ್ದರು. ಆದರೆ, ಬಿಎಸ್‌ವೈ ವರಿಷ್ಠರ ಮಾತನ್ನು ಕಡೆಗಣಿಸಿ, ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಮ್ಮದೇ ದಾರಿಯಲ್ಲಿ ಸಾಗಿದ್ದು ಸಮಸ್ಯೆಗೆ ಕಾರಣವಾಗಿದೆ ಎಂದರು.
ಬ್ರಿಗೇಡ್ ನಿಲ್ಲಿಸಲ್ಲ: ಅಮಿತ್ ಶಾ ಅವರು ಬ್ರಿಗೇಡ್ ನಿಲ್ಲಿಸಿ ಎಂದು ಯಾವತ್ತೂ ಹೇಳಿಲ್ಲ. ಆದರೆ ಬಿಎಸ್‌ವೈ ಹಾಗೂ
ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಬ್ರಿಗೇಡ್ ನಿಲ್ಲಿಸಬೇಕೆಂದು ಹೇಳುತ್ತಿರುವುದು ಏಕೆಂದು ಅರ್ಥವಾಗುತ್ತಿಲ್ಲ. ಏನೇ ಆಗಲಿ ರಾಯಣ್ಣ ಬ್ರಿಗೇಡ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ರಾಯಚೂರಿನಲ್ಲಿ ನಡೆಯುವ ರಾಯಣ್ಣ
ಬ್ರಿಗೇಡ್ ಪದಾಧಿಕಾರಿಗಳ ಅಭ್ಯಾಸ ವರ್ಗದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ರಾಜ್ಯಾದ್ಯಂತ ಪಕ್ಷದ ಕಾರ್ಯಕರ್ತರಿಗೆ ರಾಯಣ್ಣ ಬ್ರಿಗೇಡ್ ಬಗ್ಗೆ ಹೆಮ್ಮೆಯಿದೆ. ಬ್ರಿಗೇಡ್‌ನಲ್ಲಿ ಪಾಲ್ಗೊಂಡವರ ಮೇಲೆ ಶಿಸ್ತು ಕ್ರಮ ಜರುಗಿಸುವುದು ಅಸಾಧ್ಯ. ಏಕೆಂದರೆ ಕೂಡಲ ಸಂಗಮದ ಸಮಾವೇಶದಲ್ಲಿ ಪಕ್ಷದ ಕಾರ್ಯಕರ್ತರೆ 3 ಲಕ್ಷಕ್ಕಿಂತ ಅಧಿಕ ಸಂಖ್ಯೆಯಲ್ಲಿದ್ದರು. ಎಲ್ಲರ ಮೇಲೂ ಕ್ರಮ ಕೈಗೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದರು.
ಸಭೆಗೆ ಆಹ್ವಾನ ಬಂದಿಲ್ಲ: ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿಯುತ್ತಿರುವವರನ್ನು ಕಡೆಗಣಿಸಿ, ಪಕ್ಷಕ್ಕೆ ಮುಜುಗರ ಉಂಟು
ಮಾಡಿದ್ದ ರೆಸಾರ್ಟ್ ಸಂಸ್ಕೃತಿಯವರಿಗೆ ಸ್ಥಾನಮಾನ ನೀಡಿದ್ದಾರೆ. ಹೈಕಮಾಂಡ್ ಸಹ ಇದನ್ನು ಗಮನಿಸುತ್ತಿದ್ದು, ಸೂಕ್ತ
ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಮೈಸೂರಿನಲ್ಲಿ ನಡೆಯುವ ಪಕ್ಷದ ಕಾರ್ಯಕಾರಿಣಿ ಸಭೆಗೆ ತಮಗಿನ್ನೂ ಆಹ್ವಾನ ಬಂದಿಲ್ಲ. ಬಂದ ನಂತರ ಭಾಗವಹಿಸುವ ಬಗ್ಗೆ ನಿರ್ಧರಿಸುತ್ತೇನೆ ಎಂದರು. ಪಕ್ಷದ ಸಂಘಟನಾ ಕಾರ್ಯದರ್ಶಿ ಸಂತೋಷ್ ಬಗ್ಗೆ ಯಡಿಯೂರಪ್ಪ ಆರೋಪ ಮಾಡಿರುವುದು ತಪ್ಪು. ಹಗರಿಬೊಮ್ಮನಹಳ್ಳಿಯಲ್ಲಿ ಸಂತೋಷ್ ಗೌಪ್ಯ ಸಭೆ ನಡೆಸಿದ್ದಾರೆಂಬುದು ಸುಳ್ಳು. ಅದರ ಅವಶ್ಯಕತೆ ಯಾರಿಗೂ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.