ಶಾಂತಿಯುತವಾಗಿ ಶಾಲೆ- ಕಾಲೇಜುಗಳನ್ನು ಆರಂಭಿಸುವುದು ಮೊದಲ ಆದ್ಯತೆ: ಸಿಎಂ ಬೊಮ್ಮಾಯಿ
Team Udayavani, Feb 13, 2022, 10:23 AM IST
ಹುಬ್ಬಳ್ಳಿ: ಈಗಾಗಲೇ ಹೇಳಿದಂತೆ ಶಾಲೆಗಳನ್ನು ಆರಂಭಿಸಲು ಸೂಚನೆ ನೀಡಲಾಗಿದ್ದು, ಶಾಂತಿಯುತವಾಗಿ ಶಾಲೆ- ಕಾಲೇಜುಗಳನ್ನು ಆರಂಭಿಸುವುದು ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರದಿಂದ ಶಾಲೆಗಳು ಆರಂಭವಾಗಲಿವೆ. ಜಿಲ್ಲಾಧಿಕಾರಿಗಳು, ಡಿಡಿಪಿಐ, ಶಾಲಾ ಆಡಳಿತ ಮಂಡಳಿಗಳು ಶಾಂತಿ ಸಭೆ ನಡೆಸುವಂತೆ ಈಗಾಗಲೇ ಸೂಚಿಸಿದ್ದೇನೆ. ಶಾಂತಿಯುತವಾಗಿ ಶಾಲೆಗಳು ಆರಂಭವಾಗುತ್ತವೆ. ಪರಿಸ್ಥಿತಿ ನೋಡಿಕೊಂಡು ಕಾಲೇಜಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.
ಮೊದಲಿನ ರೀತಿಯಲ್ಲಿ ಸೌಹಾರ್ಧಯುತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುತ್ತೇವೆ. ಶಾಲಾ ಕಾಲೇಜುಗಳನ್ನ ಆರಂಭಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಬಗ್ಗೆ ನಿಗ ವಹಿಸಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ನೀಡುವ, ಸುಳ್ಳು ಸಂದೇಶಗಳನ್ನ ಹರಿಬಿಡುವವರ ಮೇಲೆ ನಮ್ಮ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಎರಡೂ ವರ್ಷದಲ್ಲಿ ಆರ್ಥಿಕತೆ ಬಹಳ ನಷ್ಟ ಆಗಿದೆ. ಮುಂಬರುವ ಆಯ-ವ್ಯಯದಲ್ಲಿ ಅದಕ್ಕೆ ಬೂಸ್ಟ್ ಕೊಡುವ ಪ್ರಯತ್ನ ಮಾಡುತ್ತೇವೆ. ಕಳೆದ ನಾಲ್ಕೈದು ತಿಂಗಳಲ್ಲಿ ಒಂದಿಷ್ಟು ಆರ್ಥಿಕ ಚೇತರಿಕೆ ಕಾಣುತ್ತಿದೆ. ಆರ್ಥಿಕ ಅಭಿವೃದ್ಧಿ, ಜನ ಕಲ್ಯಾಣ, ಆರ್ಥಿಕ ಶಿಸ್ತು ಇವುಗಳೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಆಯ-ವ್ಯಯ ಹೊಂದಿರುತ್ತದೆ. ತಳಹದಿಯಲ್ಲಿ ಉಳಿದಿರುವ ದುಡಿಯುವ ಜನರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸಮಗ್ರ ಅಭಿವೃದ್ದಿ ಚಿಂತನೆ ನನ್ನ ಗಮನದಲ್ಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.