“ಮನೆ ಮನೆಗೆ ಗಂಗೆ’ 2024ಕ್ಕೆ ಪೂರ್ಣಗೊಳಿಸಲು ಗುರಿ
ಎರಡು ವರ್ಷಗಳಲ್ಲಿ 44.59 ಲಕ್ಷ ಮನೆಗಳಿಗೆ ನೀರು ಪೂರೈಕೆ ; ಈ ವರ್ಷದ ಗುರಿ ಮಾರ್ಚ್‌ನಲ್ಲಿ ಮುಗಿಸಲು ಸೂಚನೆ
Team Udayavani, Jan 6, 2022, 6:40 AM IST
ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಜಲ ಜೀವನ್‌ಮಿಷನ್ ಯೋಜನೆ ಯಡಿ ರಾಜ್ಯ ಸರಕಾರ ಅನುಷ್ಠಾನ ಗೊಳಿಸುತ್ತಿರುವ “ಮನೆ ಮನೆಗೆ ಗಂಗೆ’ಯಡಿ ಮುಂದಿನ ಎರಡು ವರ್ಷ 44.59 ಲಕ್ಷ ಮನೆಗಳಿಗೆ ಶುದ್ಧ ಕುಡಿಯುವ ನೀರು ನಲ್ಲಿ ಸಂಪರ್ಕ ಮೂಲಕ ಪೂರೈಕೆಯಾಗಲಿದೆ.
ರಾಜ್ಯದ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೂ ಶುದ್ಧ ಕುಡಿಯುವ ನೀರು ಪೂರೈಸುವ ಗುರಿಯನ್ನು 2024 ರೊಳಗೆ ಪೂರೈಸುವ ನಿಟ್ಟಿನಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ.
2022-23ನೇ ಸಾಲಿನಲ್ಲಿ 27.14 ಲಕ್ಷ ಹಾಗೂ 2023-24ನೇ ಸಾಲಿನಲ್ಲಿ 17.45 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಮೂಲಕ ಕುಡಿಯುವ ನೀರು ಪೂರೈಸಲು ತೀರ್ಮಾ ನಿಸಲಾಗಿದೆ.
ಇದರೊಂದಿಗೆ 2024ರ ಆರ್ಥಿಕ ವರ್ಷದ ಅಂತ್ಯ ದೊಳಗೆ ರಾಜ್ಯದ ಗ್ರಾಮೀಣ ಭಾಗದ 97.91 ಲಕ್ಷ ಮನೆಗಳಿಗೆ ಪೂರ್ಣ ಪ್ರಮಾಣದಲ್ಲಿ ಕುಡಿಯುವ ನೀರು ಲಭ್ಯವಾಗಲಿದೆ.
ಕೇಂದ್ರ ಸರಕಾರ 2019ರಲ್ಲಿ ಜಲಜೀವನ್ ಮಿಷನ್ ಯೋಜನೆ ರೂಪಿಸಿ ರಾಜ್ಯ ಸರಕಾರ ಅದಕ್ಕೆ “ಮನೆ ಮನೆಗೆ ಗಂಗೆ’ ಎಂದು ಹೆಸರಿಟ್ಟು 2025ರೊಳಗೆ ಗ್ರಾಮೀಣ ಭಾಗದ ಮನೆಗಳಿಗೆ ನೀರು ಪೂರೈಕೆ ಗುರಿ ಹಾಕಿಕೊಳ್ಳಲಾಗಿತ್ತು. ಈಗ ಅದನ್ನು 2024ರೊಳಗೇ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ:ಜಾಬ್ರಾ ಎಲೈಟ್ 4 ಆ್ಯಕ್ಟಿವ್ ಬಿಡುಗಡೆ; 7 ಗಂಟೆ ಬ್ಯಾಟರಿ ಲೈಫ್ ಇರುವ ಇಯರ್‌ಬಡ್
ಒಟ್ಟಾರೆ ಯೋಜನೆಗೆ 8,196 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಿ ಕೇಂದ್ರ ಸರಕಾರದಿಂದ ಅನುಮೋದನೆ ಯನ್ನೂ ಪಡೆಯ ಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿ ದ್ದಾರೆ.
2021 – 22ನೇ ಸಾಲಿನಲ್ಲಿ 25.17 ಲಕ್ಷ ಮನೆಗಳಿಗೆ ನೀರು ಪೂರೈಕೆ ಮಾಡಲು ರೂಪಿಸಲಾಗಿದ್ದ 120 ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ಕೇಂದ್ರ ಸರಕಾರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ ನೀಡಿ ಯೋಜನೆ ಅನುಷ್ಠಾನಕ್ಕೆ ಮತ್ತಷ್ಟು ವೇಗ ಸಿಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಇತ್ತೀಚೆಗೆ ಪ್ರಗತಿ ಪರಿಶೀಲನ ಸಭೆಯಲ್ಲಿ ಅಧಿಕಾರಿಗಳಿಗೆ ಟಾರ್ಗೆಟ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶುದ್ಧತೆ ಪರೀಕ್ಷೆಗೆ ಪ್ರಯೋಗಾಲಯ
ಈ ಮಧ್ಯೆ, ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಸುರಕ್ಷಿತ ನೀರು ಒದಗಿಸುವ ನಿಟ್ಟಿನಲ್ಲಿ ಹಾಗೂ ಖಾತರಿಪಡಿಸಿಕೊಳ್ಳಲು ನೀರಿನ ಗುಣಮಟ್ಟ ಪರೀಕ್ಷೆ ನಡೆಸಲು ರಾಜ್ಯದ 31 ಜಿಲ್ಲೆಗಳಲ್ಲಿ 78 ಪ್ರಯೋಗಾಲಯ ಸ್ಥಾಪಿಸಲಾಗಿದ್ದು, ಆ ಪೈಕಿ 13 ಪ್ರಯೋಗಾಲಯಗಳಿಗೆ ಎನ್‌ಎಬಿಎಲ್ ಮಾನ್ಯತೆ ಪಡೆದು ನೀರಿನ ಗುಣಮಟ್ಟ ಪರೀಕ್ಷೆ ಕಾರ್ಯ ಆರಂಭಿಸಲಾಗಿದೆ.
ಸಹಾಯವಾಣಿ ಆರಂಭ
ಜತೆಗೆ, ಗ್ರಾಮೀಣ ಭಾಗದಲ್ಲಿ ನೀರು ಮತ್ತು ನೈರ್ಮಲ್ಯ ಕುರಿತ ಕುಂದುಕೊರತೆ ಪರಿಹರಿಸಲು, ಕಾಲ ಕಾಲಕ್ಕೆ ದೂರುಗಳಿಗೆ ಸ್ಪಂದಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ಪರಿಹಾರ ಸಹಾಯವಾಣಿ- 9480985555 ಅನ್ನು ಸ್ಥಾಪಿಸಿದೆ. ಇದರಿಂದಾಗಿ ಯೋಜನೆ ಪರಿಣಾಮಕಾರಿ ಜಾರಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
“ಮನೆ ಮನೆಗೆ ಗಂಗೆ’ ಯೋಜನೆಯನ್ನು 2024ಕ್ಕೆ ಪೂರ್ಣಗೊಳಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ. ಮುಂದಿನ ಎರಡು ವರ್ಷಗಳ ಕ್ರಿಯಾ ಯೋಜನೆ ರೂಪಿಸಿ ಕೇಂದ್ರದಿಂದ ಅನುಮೋದನೆ ಪಡೆದುಕೊಳ್ಳಲಾಗಿದೆ. ರಾಜ್ಯದ ಪ್ರತಿ ಹಳ್ಳಿ ಮನೆಯಲ್ಲೂ ಶುದ್ಧ ಕುಡಿಯುವ ನೀರು ಪೂರೈಕೆಗೆ ನಮ್ಮ ಬದ್ಧತೆ.
-ಕೆ.ಎಸ್. ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.