ಮೂರು ವರ್ಷಗಳಲ್ಲಿ ನಷ್ಟ ಪ್ರಮಾಣ ತಗ್ಗಿಸುವ ಗುರಿ
Team Udayavani, May 31, 2019, 3:04 AM IST
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಪ್ರಸರಣ ನಷ್ಟ ಶೇ.3.16 ಹಾಗೂ ವಿತರಣೆ ನಷ್ಟವು ಶೇ.12.5ರಷ್ಟಿದೆ. ಮುಂದಿನ 3 ವರ್ಷಗಳಲ್ಲಿ ನಷ್ಟ ಪ್ರಮಾಣ ತಗ್ಗಿಸುವ ಗುರಿ ನೀಡಲಾಗಿದ್ದು, ಇದನ್ನು ತಲುಪದಿದ್ದರೆ ಮುಂದೆ ವಿದ್ಯುತ್ ದರ ಏರಿಕೆ ಪ್ರಸ್ತಾವಗಳನ್ನು ಪರಿಗಣಿಸುವುದು ಕಷ್ಟ ಎಂದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಶಂಭು ದಯಾಳ್ ಮೀನಾ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕ್ರಮೇಣ ಪ್ರಸರಣ ಮತ್ತು ವಿತರಣೆ (ಟ್ರಾನ್ಸ್‌ಮಿಷನ್ ಆ್ಯಂಡ್ ಡಿಸ್ಟ್ರಿಬ್ಯೂಷನ್) ನಷ್ಟ ಪ್ರಮಾಣ ಇಳಿಕೆಯಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಷ್ಟ ಪ್ರಮಾಣ ತಗ್ಗಿಸಲು ಕೈಗೊಂಡಿರುವ ಕ್ರಮ ಸಮಾಧಾನಕರವಾಗಿದೆ. ಆದರೆ ಮುಂದಿನ 3 ವರ್ಷಗಳಲ್ಲಿ ನಷ್ಟ ತಗ್ಗಿಸಲು ನಿರ್ದಿಷ್ಟ ಗುರಿ ನೀಡಲಾಗಿದ್ದು, ಅದನ್ನು ತಲುಪದಿದ್ದರೆ ಮುಂದೆ ದರ ಏರಿಕೆ ಪ್ರಸ್ತಾವಕ್ಕೆ ಸ್ಪಂದಿಸುವುದು ಕಷ್ಟ ಎಂದು ತಿಳಿಸಿದರು.
ರಾಜ್ಯದಲ್ಲಿ 28 ಲಕ್ಷ ಕೃಷಿ ಪಂಪ್‌ಸೆಟ್‌ಗಳಿದ್ದು, ಉಚಿತ ವಿದ್ಯುತ್ ನೀಡಿಕೆಗಾಗಿ ಪ್ರಸಕ್ತ ವರ್ಷದಲ್ಲಿ 11,780 ಕೋಟಿ ರೂ. ಅನುದಾನವನ್ನು ಸರ್ಕಾರ ಬಜೆಟ್‌ನಲ್ಲಿ ಕಾಯ್ದಿರಿಸಿದೆ. ಇದರ ಸದ್ಬಳಕೆ ಉದ್ದೇಶದಿಂದ ಈಗಾಗಲೇ ಕೃಷಿ ಪಂಪ್‌ಸೆಟ್‌ಗಳಿಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಿ ದುರ್ಬಳಕೆ ತಡೆಯುವಂತೆ ಸೂಚಿಸಲಾಗಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶ ನೀಡಲಾಗಿದೆ.
ವಿದ್ಯುತ್ ಕಳವು ನಿಯಂತ್ರಣಕ್ಕೆ ಜಾಗೃತ ಪಡೆಗಳು ಅಕ್ರಮಗಳನ್ನು ಪತ್ತೆ ಹಚ್ಚಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆಯೂ ನಿರ್ದೇಶನ ನೀಡಲಾಗುವುದು ಎಂದು ಹೇಳಿದರು. ಆಯೋಗದ ಸದಸ್ಯರಾದ ಎಚ್.ಎಂ. ಮಂಜುನಾಥ್, ಎಂ.ಡಿ.ರವಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.