ಸರ್ಕಾರ ತನ್ನತನ ಅಡವಿಟ್ಟು ಹಿಂದಿಗೆ ಸಂಪೂರ್ಣ ಶರಣಾಗಿದೆ : ಸಿದ್ದರಾಮಯ್ಯ ಕಿಡಿ
ರಾಷ್ಟ್ರ ಧ್ವಜಗಳನ್ನು ಹಾರಿಸುವ ಉತ್ಸವ ಬಿಜೆಪಿ ಮತ್ತು ಆರ್ ಎಸ್‍ಎಸ್ ದುಷ್ಟ ತಂತ್ರದ ಭಾಗ
Team Udayavani, Aug 5, 2022, 3:43 PM IST
ಬೆಂಗಳೂರು : ರಾಜ್ಯದ ಬಸವರಾಜ್ ಬೊಮ್ಮಾಯಿ ಸರಕಾರ, ಕೇಂದ್ರ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ಕಿಡಿ ಕಾರಿದ್ದಾರೆ.
ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ.ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ.ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ.ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್ ಕುಮಾರ್ ಅವರು ಸ್ಪಷ್ಟಪಡಿಸಬೇಕು ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ದುಷ್ಟ ತಂತ್ರದ ಭಾಗ
ದೇಶದಾದ್ಯಂತ ರಾಷ್ಟ್ರ ಧ್ವಜಗಳನ್ನು ಹಾರಿಸುವ ಉತ್ಸವ ಆಚರಿಸಲು ಹೊರಟಿರುವ ಬಿಜೆಪಿ ಹಾಗೂ ಆರ್ ಎಸ್‍ಎಸ್ ನವರು ಹಿಟ್ಲರ್ ನನ್ನ ಆದರ್ಶ ಎಂದು ಭಾವಿಸುವುದು ಬಿಟ್ಟು ನೈಜ ಪ್ರಜಾತಂತ್ರದ ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದಾಗ ಮಾತ್ರ ರಾಷ್ಟ್ರ ಧ್ವಜ ಹಾರಿಸಿ ಎಂದು ಜನರಿಗೆ ಕರೆಕೊಡುವ ನೈತಿಕತೆ ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
“ತ್ರಿವರ್ಣ ಧ್ವಜವು ಸ್ವಾತಂತ್ರ್ಯ, ಪ್ರಜಾತಂತ್ರ ಹಾಗೂ ಸತ್ಯಶೀಲತೆಗಳನ್ನು ಪ್ರತಿನಿಧಿಸುತ್ತದೆ. ಸಾವಿರಗಟ್ಟಲೆ ವರ್ಷಗಳಿಂದ ಈ ನೆಲದಲ್ಲಿ ಪರಂಪರಾಗತವಾಗಿ ಬಂದಿರುವ ಸುಂದರ ವಿಚಾರಗಳ ಲಾಂಛನವಾಗಿ ಧ್ವಜವನ್ನು ರೂಪಿಸಲಾಗಿದೆ” ಎನ್ನುವುದು ನೆಹರೂ ಅವರ ನಿಲುವಾಗಿತ್ತು. ಬಿಜೆಪಿ ಮತ್ತು ಆರ್ ಎಸ್‍ಎಸ್‍ಗಳ ಇತಿಹಾಸ ಗೊತ್ತಿರುವವರಿಗೆ ಈ ಹೊಸ ವರಸೆ ಪ್ರಾಮಾಣಿಕವಾದುದಲ್ಲವೆಂದು ಗೊತ್ತಿದೆ. ಈ ಪವಿತ್ರವಾದ ನೆಲದಲ್ಲಿ ಯಾವುದು ಸಹಜವೂ ಗೌರವಯುತವೂ ಆದ ಸಂಗತಿಗಳಿವೆಯೊ ಅವುಗಳನ್ನೆಲ್ಲ ಹಾಳುಗೆಡವಿ ಕೇವಲ ಗಿಮಿಕ್ಕಿಗಾಗಿ ಬಳಸಿಕೊಳ್ಳುವುದು ಬಿಜೆಪಿ-ಆರ್ ಎಸ್‍ಎಸ್‍ನ ದುಷ್ಟ ತಂತ್ರದ ಭಾಗ ಎಂದು ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಅಭಿಮಾನಿಗಳ ಮನೆಗೆ ತೆರಳಿ ಸಾಂತ್ವನ
ಅಮೃತ ಮಹೋತ್ಸವ ಸಮಾರಂಭಕ್ಕೆ ಆಗಮಿಸುತ್ತಿರುವ ವೇಳೆ ಅಪಘಾತದಲ್ಲಿ ಮೃತಪಟ್ಟ ಮುಧೋಳದ ಪ್ರಕಾಶ್ ಬಡಿಗೇರ್ ಮತ್ತು ಪಿರಿಯರ ಪಟ್ಟಣದ ಘಸಿ ಉದ್ದೀನ್ ಅವರ ಕುಟುಂಬದವರನ್ನು ಈ ತಿಂಗಳ 7 ಮತ್ತು 10ರಂದು ಭೇಟಿ ಮಾಡಿ, ಸಾಂತ್ವನ ಹೇಳುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
MUST WATCH
ಹೊಸ ಸೇರ್ಪಡೆ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.